FACT CHECK | ಸ್ವಾತಂತ್ರ್ಯ ದಿನದಂದು ಶ್ರೀನಗರದಲ್ಲಿ ಪಾಕ್ ಧ್ವಜವನ್ನು ಹಾರಿಸಲಾಗಿದೆಯೇ?
ದೇಶಾದ್ಯಂತ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಭಾರತದ ತ್ರಿವರ್ಣ ಧ್ವಜವನ್ನ ಹಾರಿಸುವ ಮೂಲಕ ಆಚರಿಸಲಾಗಿದೆ. ಆದರೆ ಕಾಶ್ಮೀರದ ಶ್ರೀನಗರದಲ್ಲಿ ಅಪರಿಚಿತ ವ್ಯಕ್ತಿಗಳು ಪಾಕಿಸ್ತಾನದ ಧ್ವಜವನ್ನು ಹಾರಿಸಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ಮುಸ್ಲಿಂ ಹೆಸರುಗಳನ್ನೊಳಗೊಂಡ ಖಾತೆಗಳಿಂದ ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗಿದೆ.
Pakistani flag raised by unknown men in Srinagar, Indian occupied Kashmir. pic.twitter.com/BItZBUUXiB
— Atif Rauf (@Atifrauf79) August 14, 2024
ಕಾಶ್ಮೀರದಲ್ಲಿ ಪಾಕಿಸ್ತಾನಿ ಧ್ವಜವನ್ನು ಹಾರಿಸಲಾಗಿದೆ ಎಂದು ಐರನ್ ಕ್ಲಾಡ್ ಹೆಸರಿನ X ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ.
ಹಾಗಿದ್ದರೆ ಭಾರತದ 78ನೇ ಸ್ವಾತಂತ್ರ್ಯ ದಿನಾಚರಣೆಯಂದು ಕಾಶ್ಮೀರದ ಶ್ರೀನಗರದಲ್ಲಿ ನಿಜವಾಗಿಯೂ ಪಾಕ್ ಧ್ವಜವನ್ನು ಪ್ರದರ್ಶಿಸಲಾಗಿದೆ ಎಂದು ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್‌ಚೆಕ್ :
ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯಂತೆ ಭಾರತದ 78ನೇ ಸ್ವಾತಂತ್ರ್ಯ ದಿನದಂದು ಕಾಶ್ಮೀರದ ಶ್ರೀನಗರದಲ್ಲಿ ಪಾಕಿಸ್ತಾನದ ಧ್ವಜವನ್ನು ಹಾರಿಸಿದ ಯಾವುದೇ ವಿಶ್ವಾಸಾರ್ಹ ಮಾಧ್ಯಮಗಳು ಅಥವಾ ಸ್ಥಳೀಯ ಮೂಲಗಳು ಅಂತಹ ಯಾವುದೇ ಘಟನೆಯನ್ನು ವರದಿ ಮಾಡಿವೆಯೇ ಎಂದು ಪರಿಶೀಲಿಸಿದಾಗ, ಅಂತಹ ಯಾವುದೇ ವಿಶ್ವಾಸಾರ್ಹ ಸುದ್ದಿ ಸಂಸ್ಥೆಗಳ ವರದಿಗಳು ಲಭ್ಯವಾಗಿಲ್ಲ .
ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾದ ಚಿತ್ರವನ್ನು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, 2019 ರ ಹಳೆಯ ಛಾಯಾಚಿತ್ರ ಎಂದು ತಿಳಿಸುಬಂದಿದೆ. ಇದೇ ಚಿತ್ರವನ್ನು ಈ ಹಿಂದೆ ಪಾಕಿಸ್ತಾನಿ ಮಾಧ್ಯಮಗಳು ಮತ್ತು ಟ್ವಿಟರ್ ಬಳಕೆದಾರರು 2019 ರಲ್ಲಿ ಹಂಚಿಕೊಂಡ ಮಾಹಿತಿ ಲಭ್ಯವಾಗಿದೆ. ಈಗ 78ನೇ ಸ್ವಾತಂತ್ರ್ಯ ದಿನದಂದು ಶ್ರೀನಗರದಲ್ಲಿ ಪಾಕಿಸ್ತಾನದ ಧ್ವಜವನ್ನು ಹಾರಿಸಲಾಗಿದೆ ಎಂಬ ಸುಳ್ಳು ನಿರೂಪಣೆಯೊಂದಿಗೆ ಹಂಚಿಕಂಡಿರುವುದು ಸ್ಪಷ್ಟವಾಗುತ್ತದೆ ಎಂದು DFRAC ಪತ್ತೆ ಮಾಡಿದೆ.
ಕೆಲವು ಪಾಕಿಸ್ತಾನಿ ಖಾತೆಗಳು ಮಾಡಿದ ಪ್ರತಿಪಾದನೆಗೆ ವ್ಯತಿರಿಕ್ತವಾಗಿ, ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದ (POJK) ರಾವಲಕೋಟ್‌ನಿಂದ ಪ್ರತಿಭಟನಾಕಾರರು ಪಾಕಿಸ್ತಾನದ ಧ್ವಜವನ್ನು ತೆಗೆದು ಭಾರತೀಯ ತ್ರಿವರ್ಣ ಧ್ವಜವನ್ನು ಹಾರಿಸಿದ ಇತ್ತೀಚಿನ ವರದಿಗಳಿವೆ. ಹಾಗಾಗಿ ಈ ಘಟನೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರೂಪಣೆಗೊಂಡ ಘಟನೆಗಿಂತಲೂ ಭಿನ್ನವಾಗಿದೆ.
ಒಟ್ಟಾರೆಯಾಗಿ ಹೇಳುವುದಾದರೆ, ಭಾರತದ 78 ನೇ ಸ್ವಾತಂತ್ರ್ಯ ದಿನದಂದು ಕಾಶ್ಮೀರದ ಶ್ರೀನಗರದಲ್ಲಿ ಪಾಕಿಸ್ತಾನದ ಧ್ವಜವನ್ನು ಹಾರಿಸಲಾಗಿದೆ ಎಂಬ ಹೇಳಿಕೆಯು ಸಂಪೂರ್ಣವಾಗಿ ಆಧಾರರಹಿತವಾಗಿದೆ. ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳಲಾದ ಚಿತ್ರವು 2019 ರದ್ದಾಗಿದೆ. ಜನರಲ್ಲಿ ಗೊಂದಲ ಮತ್ತು ಅಶಾಂತಿಯನ್ನು ಸೃಷ್ಟಿಸಲು ತಪ್ಪು ಮಾಹಿತಿಯನ್ನು ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | ರಾಹುಲ್ ಗಾಂಧಿ ಕಾಲಿಗೆ ನಮಸ್ಕರಿಸಿದ್ರಾ ಉದ್ಧವ್ ಠಾಕ್ರೆ?