FACT CHECK | ಪ್ರಖ್ಯಾತ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಮನೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಫೋಟೋ ಎಂದು ಎಡಿಟ್‌ ಫೋಟೊ ಹಂಚಿಕೆ

ಪೋರ್ಚುಗಲ್‌ನ ಪ್ರಖ್ಯಾತ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಯೂಟ್ಯೂಬ್ ಇತಿಹಾಸದಲ್ಲೇ ಹೊಸ ದಾಖಲೆ ಬರೆಯುವ ಮೂಲಕ ಸದ್ದು ಮಾಡಿದ್ದರು.ಚಾನೆಲ್ ಆರಂಭಿಸಿದ 90 ನಿಮಿಷಕ್ಕೆ 1 ಮಿಲಿಯನ್ ಅಂದರೆ 10 ಲಕ್ಷ ಹಾಗೂ 12 ಗಂಟೆಯಲ್ಲೇ 10 ಮಿಲಿಯನ್ ಅಂದರೆ ಒಂದು ಕೋಟಿಗೂ ಅಧಿಕ ಚಂದಾದಾರರನ್ನು ಹೊಂದುವ ಮೂಲಕ , ಯೂಟ್ಯೂಬ್ ಚಾನೆಲ್‌ ಆರಂಭಿಸಿದ ಒಂದು ದಿನದಲ್ಲೇ ಡೈಮಂಡ್ ಬಟನ್ ಪಡೆದುಕೊಳ್ಳುವ ಮೂಲಕ ಸುದ್ದಿಯಾಗಿದ್ದರು.

ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಸ್ಟಿಯಾನೋ ರೊನಾಲ್ಡೊಗೆ ಸಂಬಂಧಿಸಿದಂತೆ ಪೋಸ್ಟ್‌ವೊಂದು ವೈರಲ್ ಆಗುತ್ತಿದ್ದು ರೊನಾಲ್ಡೊ ತಮ್ಮ ಕುಟುಂಬದವರೊಂದಿಗೆ ಊಟ ಮಾಡುತ್ತಿರುವ ಡೈನಿಂಗ್ ಹಾಲ್‌ನಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಭಾವ ಚಿತ್ರವಿರುವ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ.

Image

“ಕ್ರಿಸ್ಟಿಯಾನೋ ರೊನಾಲ್ಡೋ ಮೆಸ್ಸಿಗಿಂತ ಶ್ರೇಷ್ಠ”  “ಜೈ ಭೀಮ್” ಎಂಬ ಹೇಳಿಕೆಯೊಂದಿಗೆ ಪೋಸ್ಟ್‌ಅನ್ನು ಎಕ್ಸ್‌ ಖಾತೆಯ ಮೂಲಕ ಹಂಚಿಕೊಂಡಿದ್ದಾರೆ. ಹಾಗಿದ್ದರೆ ನಿಜವಾಗಿಯೂ ಡಾ. ಬಿ.ಆರ್ ಅಂಬೇಡ್ಕರ್‌ರವರ ಭಾವಚಿತ್ರವನ್ನು ತಮ್ಮ ಊಟದ ಕೋಣೆಯಲ್ಲಿ ಹಾಕಿಕೊಳ್ಳುವ ಮೂಲಕ ಅಂಬೇಡ್ಕರ್ ಬಗ್ಗೆ ವಿಶೇಷ ಅಭಿಮಾನವನ್ನು ಹೊಂದಿದ್ದಾರೆ ಎಂದು ಪ್ರತಿಪಾದಿಸಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನ ಸತ್ಯಾಸತ್ಯತೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ,  ಕ್ರಿಸ್ಟಿಯಾನೋ ರೊನಾಲ್ಡೋರವರ ಟ್ವಿಟರ್ ಖಾತೆ ಲಭ್ಯವಾಗಿದೆ.

2020 ರ ಏಪ್ರಿಲ್ 12 ರಂದು ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ತನ್ನ ಕುಟುಂಬದೊಂದಿಗೆ ಪೋಸ್ಟ್ ಮಾಡಿದ ಅದೇ ಫೋಟೊ ಲಭ್ಯವಾಗಿದೆ. 12 ಏಪ್ರಿಲ್ 2020 ರಂದು ಹಂಚಿಕೊಂಡ ಪೋಸ್ಟ್‌ನಲ್ಲಿ “ನಾವು ಎಲ್ಲರಿಗೂ ಈಸ್ಟರ್ ಶುಭಾಶಯಗಳನ್ನು ಕೋರುತ್ತೇವೆ” ಎಂಬ ಶೀರ್ಷಿಕೆಯನ್ನು  ಫೋಟೋದೊಂದಿಗೆ ಹಂಚಿಕೊಳ್ಳಲಾಗಿದೆ. ಜೊತೆಗೆ “ಸ್ಟೇ ಹೋಮ್” ಎಂಬ ಹ್ಯಾಶ್‌ಟ್ಯಾಗ್ ಅನ್ನು ಸೇರಿಸಿದ್ದಾರೆ. ಹಾಗಾಗಿ ಈ ಫೋಟೊ ಕೋವಿಡ್ ಸಂದರ್ಭದಲ್ಲಿ ತೆಗೆದಿದೆ ಎಂದು ಅಂದಾಜಿಸಬಹುದು.

ಇದಲ್ಲದೆ, ಕ್ರಿಸ್ಟಿಯಾನೋ ರೊನಾಲ್ಡೋ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ  ಡಾ. ಅಂಬೇಡ್ಕರ್ ಅವರ ಭಾವಚಿತ್ರ ಕಾಣುವುದಿಲ್ಲ. ಗೋಡೆಯ ಮೇಲೆ ಕಂಡುವರುವ ಚಿತ್ರದಲ್ಲಿ ಪ್ರಾಚೀನ ದೃಶ್ಯಾವಳಿಗಳನ್ನು ಒಳಗೊಂಡ ಫ್ರೇಮ್‌ನಂತೆ ಕಾಣುತ್ತಿದೆ. ಹಾಗಾಗಿ  ಫೋಟೋವನ್ನು ಎಡಿಟ್‌ ಮಾಡುವ ಮೂಲಕ ಬದಲಾಯಿಸಲಾಗಿದೆ ಮತ್ತು ಹಂಚಿಕೊಳ್ಳಲಾದ ಚಿತ್ರವು ಇತ್ತೀಚಿನದ್ದಾಗಿರದೆ ಹಳೆಯದಾಗಿದೆ ಎಂದು ಇದು ತೋರಿಸುತ್ತದೆ.

ಎರಡು ಚಿತ್ರಗಳಲ್ಲಿರುವ ವ್ಯತ್ಯಾಸವನ್ನು ನೀವು ಲ್ಲಿ ಗಮನಿಸಬಹುದು
ಎರಡು ಚಿತ್ರಗಳಲ್ಲಿರುವ ವ್ಯತ್ಯಾಸವನ್ನು ನೀವು ಲ್ಲಿ ಗಮನಿಸಬಹುದು

ಒಟ್ಟಾರೆಯಾಗಿ ಹೇಳುವುದಾದರೆ, ಕ್ರಿಸ್ಟಿಯಾನೋ ರೊನಾಲ್ಡೊ ಅವರ ಕುಟುಂಬವು ತಮ್ಮ ಡೈನಿಂಗ್ ಹಾಲ್‌ನಲ್ಲಿ ಅಂಬೇಡ್ಕರ್‌ಅವರ ಭಾವಚಿತ್ರವನ್ನು ಹಾಕಲಾಗಿದೆ ಎಂಬುದು ಸುಳ್ಳು. ವಾಸ್ತವವಾಗಿ ಡೈನಿಂಗ್ ಹಾಲ್‌ನಲ್ಲಿ ಅಂಬೇಡ್ಕರ್ ಚಿತ್ರವನ್ನು ಡಿಜಿಟಲ್ ಎಡಿಟೆಡ್‌ ಮೂಲಕ ಸೇರಿಸಿ, ನಿಜವಾಗಿಯೂ ಅಂಬೇಡ್ಕರ್ ಚಿತರವನ್ನು ಹಾಕಲಾಗಿದೆ ಎಂಬಂತೆ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ  ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಅಕ್ಟೋಬರ್ 1 ರಿಂದ ತೆರಿಗೆ ಪಾವತಿ ಮಾಡದಿದ್ದರೆ ವಿದೇಶಿ ಪ್ರಯಾಣಕ್ಕೆ ಅವಕಾಶವಿಲ್ಲವೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights