FACT CHECK | ಬೆಂಗಳೂರಿನ ರಾಜಾಜಿನಗರದಲ್ಲಿ ಮಧ್ಯರಾತ್ರಿ ಒಂದು ಗಂಟೆಗೆ ಹುಲಿಯೊಂದು ಕಾಣಿಸಿಕೊಂಡಿದೆ ಎಂಬ ವಿಡಿಯೋದ ಅಸಲೀಯತ್ತೇನು?

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹುಲಿ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. raghunmurthy07 ಎಂಬ ಎಕ್ಸ್ ಖಾತೆಯಿಂದ ಈ ವಿಡಿಯೋ ಅಪ್ಲೋಡ್ ಆಗಿದ್ದು ದೇವಸ್ಥಾನದ ಮುಂಭಾಗದಲ್ಲಿ ಹುಲಿಯಂತೆ ಕಾಣುವ ಪ್ರಾಣಿ ನಡೆದಾಡಿಕೊಂಡು ಹೋಗುತ್ತಿದೆ. ಇವರು ಈ ಫೋಸ್ಟ್​ಗೆ ‘ಬೆಂಗಳೂರು ರಾಜಾಜಿನಗರ ಮಧ್ಯರಾತ್ರಿ 1 ಘಂಟೆ’ ಎಂಬ ಶೀರ್ಷಿಕೆ ನೀಡಿದ್ದಾರೆ.

 

ಹಾಗೆಯೆ ಸಾಯಿ ಮೋಹನ್ ಎಂಬವರು ಕೂಡ ಇದೇ ವೀಡಿಯೊವನ್ನು ಹಂಚಿಕೊಂಡಿದ್ದು, ಭಯವಿಲ್ಲದ ಹುಲಿ ಇಂದು ಕರ್ನಾಟಕದ ರಸ್ತೆಗಳಲ್ಲಿ ತಿರುಗಾಟ ಎಂಬ ಶೀರ್ಷಿಕೆ ನೀಡಿದ್ದಾರೆ.

ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಮಾರ್ಚ್ 26, 2024 ರಂದು ಅಮಿತಾಭ್ ಚೌಧರಿ ಎಂಬ ಎಕ್ಸ್ ಬಳಕೆದಾರರು ಇದೇ ವಿಡಿಯೋವನ್ನು ಹಂಚಿಕೊಂಡಿದ್ದು, ವಿಡಿಯೋದಲ್ಲಿ ಗುಜರಾತ್‌ನ ರಾಜುಲಾದ ಲಕ್ಷ್ಮಿ ನಾರಾಯಣ ಮಂದಿರದ ಆವರಣದಲ್ಲಿ ಸಿಂಹ ತಿರುಗಾಡುತ್ತಿದೆ ಎಂದು ಬರೆದುಕೊಂಡಿದ್ದಾರೆ.

ಈ ಮಾಹಿತಿಯ ಆಧಾರದ ಮೇಲೆ ಗೂಗಲ್​ನಲ್ಲಿ ‘Lion Laxmi Narayan Mandir Gujarat’ ಎಂದು ಕೀವರ್ಡ್ ಬಳಸಿ ಸರ್ಚ್ ಮಾಡಿದಾಗ, 9 ಮಾರ್ಚ್ , 2024 ರಂದು ಟಿವಿ9 ಗುಜರಾತಿ ಯೂಟ್ಯೂಬ್ ಚಾನೆಲ್​ನಲ್ಲಿ ಪ್ರಕಟಿಸಿದ ವಿಡಿಯೋ ಲಭ್ಯವಾಗಿದೆ. “ರಾಜುಲಾ ಲಕ್ಷ್ಮೀನಾರಾಯಣ ದೇವಸ್ಥಾನದ ಬಳಿ ಸಿಂಹ ಪತ್ತೆ’’  ಎಂಬ ಶೀರ್ಷಿಕೆಯೊಂದಿಗೆ ವಿಡಿಯೋ ಅಪ್‌ಲೋಡ್ ಮಾಡಲಾಗಿದೆ.

ಹಾಗೆಯೆ ದಿವ್ಯಭಾಸ್ಕರ್ ವೆಬ್​ಸೈಟ್​ನಲ್ಲಿ ಈ ಕುರಿತು ವರದಿ ಪ್ರಕಟವಾಗಿದೆ. ರಾಜುಲಾ-ಜಾಫರಾಬಾದ್ ಪ್ರದೇಶದಲ್ಲಿ ಸಿಂಹಗಳ ಓಡಾಟ ಗಣನೀಯವಾಗಿ ಹೆಚ್ಚಿದೆ. ಕೋವಾಯಮ ಲಕ್ಷ್ಮೀನಾರಾಯಣ ದೇವಸ್ಥಾನದ ಬಳಿ ಸಿಂಹ ಕಾಣಿಸಿಕೊಂಡಿದೆ. ಇಲ್ಲಿನ ರಸ್ತೆಗಳಲ್ಲಿ ಕೆಲವು ಸಿಂಹಗಳು ತಿರುಗಾಡುತ್ತಿರುವುದು ಕಂಡುಬರುತ್ತದೆ ಎಂದು ಬರೆಯಲಾಗಿದೆ.

ಇದೇ ವಿಡಿಯೋ ವಿಜಯವಾಡದ ದೇವಸ್ಥಾನದ ಬಳಿ ದುರ್ಗಾದೇವಿಯ ವಾಹನವಾದ ಸಿಂಹವು ಸಂಚರಿಸುತ್ತಿದೆ ಎಂದು ಕೆಲವು ಯೂಟ್ಯೂಬ್ ವಿಡಿಯೋಗಳಲ್ಲಿ ಇದನ್ನು ಆಂಧ್ರಪ್ರದೇಶದ್ದು   ಎಂದು ಹಂಚಿಕೊಳ್ಳಲಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ವೈರಲ್ ಆಗಿರುವ ವಿಡಿಯೋ ಬೆಂಗಳೂರು ಅಥವಾ ವಿಜಯವಾಡದ್ದಲ್ಲ. ಇದು ಗುಜರಾತ್‌ನ ರಾಜುಲಾ ಲಕ್ಷ್ಮೀನಾರಾಯಣ ದೇವಸ್ಥಾನದ ಬಳಿ ನಡೆದಿರುವ ಘಟನೆ ಎಂಬುದು ಸ್ಪಷ್ಟವಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಉಪ ಮುಖ್ಯಮಂತ್ರಿ DK Shivakumar ಅಮೆರಿಕ ಪ್ರವಾಸದ ಬಗ್ಗೆ ಸುಳ್ಳುಸುದ್ದಿ ಪ್ರಸಾರ ಮಾಡಿದ ಮಾಧ್ಯಮಗಳು


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights