FACT CHECK | ಗುಜರಾತ್‌ನ 182 ಮೀಟರ್ ಎತ್ತರದ ‘ಸ್ಟ್ಯಾಚ್ಯೂ ಆಫ್ ಯೂನಿಟಿ’ ಯಲ್ಲಿ ಬಿರುಕು ಕಾಣಿಸಿಕೊಂಡಿದೆಯೇ?
ಇತ್ತೀಚೆಗೆ ಮಹಾರಾಷ್ಟ್ರದ ಸಿಂಧೂದುರ್ಗ ಜಿಲ್ಲೆಯ ರಾಜ್‌ಕೋಟ್‌ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿದು ಬಿದ್ದಿತ್ತು. ಇದರ ಬೆನ್ನಲ್ಲೆ ಗುಜರಾತ್‌ನ ಏಕತಾ ಪ್ರತಿಮೆ ( ಸ್ಟ್ಯಾಚ್ಯೂ ಆಫ್ ಯೂನಿಟಿ )ಯಲ್ಲಿ ಬಿರುಕುಗಳು ಕಾಣಿಸಿಕೊಂಡಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ.
Cracks appearing on the patel statue.
The Statue of unity became a state of corruption. pic.twitter.com/AFVY9YFBdq— Syed Z INC (@syed_zakir_1947) September 10, 2024
” ನೋಡಿ ಇದು ಮೋದಿ ಸರ್ಕಾರದ ಬೃಹತ್ ಸಾಧನೆ ಎಂದು ಹೇಳಿಕೊಳ್ಳುವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಏಕತಾ ಪ್ರತಿಮೆ. ಈಗ ಈ ಪ್ರತಿಮೆಯ ಪಾದಗಳಲ್ಲಿ ಬಿರುಕು ಬಿಟ್ಟಿದೆ. ಯಾವಾಗ ಬೇಕಾದರೂ ಈ ಪ್ರತಿಮೆ ಧರೆಗೆ ಉರುಳಬಹುದು. ಮೋದಿ ಸರ್ಕಾರದ ಕಳಪೆ ಕಾಮಗಾರಿಗೆ ಇದಕ್ಕಿಂತ ಮತ್ತೊಂದು ಉತ್ತಮ ಉದಾಹರಣೆ ಸಿಗಲಾರದು. ಇವರ ರಾಜಕೀಯ ಲಾಭಕ್ಕಾಗಿ ಈಗ ದೇಶದ ಮಹಾನ್ ನಾಯಕನ ಪ್ರತಿಮೆ ನೆಲಕಚ್ಚುವ ಹಂತಕ್ಕೆ ಬಂದಿದೆ.” ಎಂದು ಫೋಟೊವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.
Effects of space technology on statue. #statueofunity pic.twitter.com/TtmHpmBqge
— Debojit Bharali (@DebojitBharali) September 8, 2024
ಇದೇ ರೀತಿಯ ಪ್ರತಿಪಾದನೆಯೊಂದಿಗೆ ಪೋಸ್ಟ್‌ಗಳನ್ನು ಇಲ್ಲಿ ಮತ್ತು ಇಲ್ಲಿ ಹಂಚಿಕೊಳ್ಳಲಾಗಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್‌ಚೆಕ್ :
ಗುಜರಾತ್‌ನಲ್ಲಿರುವ ವಿಶ್ವದ ಅತಿ ಎತ್ತರದ (182 ಮೀಟರ್) ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಪ್ರತಿಮೆಯು ಬಿರುಕು ಬಿಟ್ಟಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, 1 ನವೆಂಬರ್ 2018ರಲ್ಲಿ ದಿ ಲಾಸ್ ಏಂಜಲೀಸ್ ಟೈಮ್ಸ್ ಹಾಗೂ 29 ಅಕ್ಟೋಬರ್ 2018ರಲ್ಲಿ ವಾಷಿಂಗ್ಟನ್ ಪೋಸ್ಟ್ ಪ್ರಕಟಿಸಿದ ವರದಿಗಳು ಲಭ್ಯವಾಗಿದೆ.
ಈ ವರದಿಗಳಲ್ಲಿ ಕಂಡುಬಂದ ಫೋಟೋಗಳಲ್ಲಿ ಏಕತಾ ಪ್ರತಿಮೆಯ ಉದ್ಘಾಟನೆಯ ಒಂದು ವಾರಕ್ಕೆ ಮೊದಲು ಭಾರತೀಯ ಕಾರ್ಮಿಕರು ಪ್ರತಿಮೆಯ ಪಾದದ ಬಳಿ ಕಾರ್ಯ ನಿರ್ವಹಿಸುವುದನ್ನು ಕಾಣಬಹುದಾಗಿದೆ. ಹಾಗಾಗಿ ಈ ವೈರಲ್ ಫೋಟೋ 6 ವರ್ಷ ಹಿಂದಿನದ್ದು ಎಂದು ತಿಳಿದು ಬಂದಿದೆ.
ಈ ಬಗ್ಗೆ ಮತ್ತಷ್ಟು ಸರ್ಚ್ ಮಾಡಿದಾಗ, 9 ಸೆಪ್ಟೆಂಬರ್ 2024 ರಂದು PIB (ಪ್ರೆಸ್ ಇನ್‌ಫರ್‌ಮೇಷನ್ ಬ್ಯೂರೋ) ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡ ಪೋಸ್ಟ್ ಲಭ್ಯವಾಗಿದೆ. ಅದರಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಫೋಟೋವನ್ನು ಹಂಚಿಕೊಳ್ಳುವ ಮೂಲಕ, ” ವಿಶ್ವದ ಅತಿ ಎತ್ತರದ ಪ್ರತಿಮೆ, ಏಕತೆಯ ಪ್ರತಿಮೆಯಲ್ಲಿ ಬಿರುಕುಗಳು ಕಾಣಿಸಿಕೊಳ್ಳಲು ಪ್ರಾರಂಭಿಸಿವೆ ಮತ್ತು ಯಾವಾಗ ಬೇಕಾದರೂ ಬೀಳಬಹುದು ಎಂದು ಹೇಳಲಾಗುತ್ತಿದೆ. ಆದರೆ ಈ ಫೋಟೋವನ್ನು 2018 ರಲ್ಲಿ ಏಕತೆಯ ಪ್ರತಿಮೆಯ ನಿರ್ಮಾಣದ ಸಮಯದಲ್ಲಿ ತೆಗೆದುಕೊಳ್ಳಲಾಗಿದೆ. ಹಾಗಾಗಿ ವೈರಲ್ ಫೋಟೋ ಕುರಿತು ಈಗಿನ ಮಾಹಿತಿ ಸುಳ್ಳಾಗಿದೆ” ಎಂದು ಸ್ಪಷ್ಟ ಪಡಿಸಿದೆ.
ಒಟ್ಟಾರೆಯಾಗಿ ಹೇಳುವುದಾದರೆ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವಂತೆ ಜಗತ್ತಿನ ಅತೀ ಎತ್ತರದ ಏಕತಾ ಪ್ರತಿಮೆಯಲ್ಲಿ ಬಿರುಕು ಕಾಣಿಸಿದೆ, ಯಾವಗ ಬೇಕಾದರು ಕುಸಿಯಬಹುದು ಎಂಬುದು ಸುಳ್ಳು. ವೈರಲ್ ವಿಡಿಯೋ 6 ವರ್ಷ ಹಿಂದಿನದ್ದು. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರಲ್ಲವೇ ? ಇತಿಹಾಸವನ್ನು ತಿರುಚಲಾಗಿದೆಯೇ?