FACT CHECK | CPI(M) ನಾಯಕ ಸೀತಾರಾಮ್ ಯೆಚೂರಿ ಕ್ರಿಶ್ಚಿಯನ್ನರೇ? ಈ ಸ್ಟೋರಿ ಓದಿ

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಕ್ರಿಶ್ಚಿಯನ್ ಧರ್ಮದವರು ಎಂದು ಪ್ರತಿಪಾದಿಸಿ ಅವರಿಗೆ ಅಂತಿಮ ನಮನ ಸಲ್ಲಿಸುತ್ತಿರುವ ಸಂದರ್ಭದ ಫೋಟೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗತ್ತಿದೆ.

ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಯೆಚೂರಿಯವರು ತಮ್ಮ  72 ನೇ ವಯಸ್ಸಿನಲ್ಲಿ, 2024ರ ಸೆಪ್ಟೆಂಬರ್ 12ರಂದು ದೆಹಲಿಯ AIIMS ನಲ್ಲಿ ನಿಧನರಾಗಿದ್ದಾರೆ. ಅವರ ಅಂತ್ಯಕ್ರಿಯೆಯ ಚಿತ್ರಗಳು ಮತ್ತು ವೀಡಿಯೊಗಳು ವೈರಲ್ ಆಗುತ್ತಿದ್ದಂತೆ, ಹಲವು ಬಲಪಂಥೀಯ ಸಾಮಾಜಿಕ ಮಾಧ್ಯಮ ಬಳಕೆದಾರರು ಯೆಚೂರಿಯನ್ನು ಹಿಂದೂ ಸಂಪ್ರದಾಯಗಳ ಪ್ರಕಾರ ಅಂತ್ಯಸಂಸ್ಕಾರ ಮಾಡಲಾಗಿಲ್ಲ ಮತ್ತು ಅವರ ದೇಹವನ್ನು ಶವಪೆಟ್ಟಿಗೆಯಲ್ಲಿ ಇರಿಸಲಾಗಿದೆ ಎಂದು ಹೈಲೆಟ್‌ ಮಾಡುತ್ತಾ, ಯೆಚೂರಿ ಕ್ರೈಸ್ತ ಧರ್ಮದವರು ಎಂದು ಹೇಳಿಕೊಳ್ಳುತ್ತಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಫೋಟೊಗಳು, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಯೆಚೂರಿಯವರ ಪಾರ್ಥಿವ ಶರೀರವನ್ನು ವೀಕ್ಷಣೆಗೆ ಇರಿಸಿದ್ದಾಗ ತೆಗೆಯಲಾಗಿದೆ. ಯೆಚೂರಿಯವರು ತಮ್ಮ ಉನ್ನತ ವಿದ್ಯಾಭ್ಯಾಸ ಜೊತೆಗೆ, ತಮ್ಮ ರಾಜಕೀಯ ಜೀವನವನ್ನು ಈ ವಿಶ್ವವಿದ್ಯಾನಿಲಯದಲ್ಲಿ ಆರಂಭಿಸಿದ್ದರು. ಈ ವೇಳೆ ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದದವರು ಶ್ರದ್ಧಾಂಜಲಿಯನ್ನು ಸಲ್ಲಿಸಿದರು.

ಯೆಚೂರಿಯವರು ಚೆನ್ನೈನಲ್ಲಿ ತೆಲುಗು ಮಾತನಾಡುವ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದ್ದರು. ಅವರು ನಾಸ್ತಿಕರಾಗಿದ್ದರು ಮತ್ತು ಯಾವುದೇ ಧಾರ್ಮಿಕ ನಂಬಿಕೆಗಳನ್ನು ಹೊಂದಿಲ್ಲ ಎಂದು ಹಲವಾರು ಸಂದರ್ಭಗಳಲ್ಲಿ ವ್ಯಕ್ತಪಡಿಸಿದ್ದಾರೆ. 2017 ರ ಏಪ್ರಿಲ್ 22ರಂದು ಎಕ್ಸ್ ಪೋಸ್ಟ್ (ಹಿಂದೆ ಟ್ವೀಟ್) ನಲ್ಲಿ, ಯೆಚೂರಿ ಅವರು ನಾಸ್ತಿಕ ಎಂದು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಯಚೂರಿಯವರು ಹಿಂದೂಸ್ತಾನ್ ಟೈಮ್ಸ್‌ನ ಸಂದರ್ಶನದಲ್ಲಿ ತಮ್ಮ ಇಪ್ಪತ್ತನೇ ವಯಸ್ಸಿನಿಂದಲೂ ನಾಸ್ತಿಕನಾಗಿದ್ದೇನೆ ಎಂದು ತಿಳಿಸಿದ್ದಾರೆ.

ಯೆಚೂರಿಯವರು ಚೆನ್ನೈನಲ್ಲಿ ತೆಲುಗು ಮಾತನಾಡುವ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದ್ದರು. ಅವರು ನಾಸ್ತಿಕರಾಗಿದ್ದರು ಮತ್ತು ಯಾವುದೇ ಧಾರ್ಮಿಕ ನಂಬಿಕೆಗಳನ್ನು ಹೊಂದಿಲ್ಲ ಎಂದು ಹಲವಾರು ಸಂದರ್ಭಗಳಲ್ಲಿ ವ್ಯಕ್ತಪಡಿಸಿದ್ದಾರೆ. 2017 ರ ಏಪ್ರಿಲ್ 22ರಂದು ಎಕ್ಸ್ ಪೋಸ್ಟ್ (ಹಿಂದೆ ಟ್ವೀಟ್) ನಲ್ಲಿ, ಯೆಚೂರಿ ಅವರು ನಾಸ್ತಿಕ ಎಂದು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಯಚೂರಿಯವರು ಹಿಂದೂಸ್ತಾನ್ ಟೈಮ್ಸ್‌ನ ಸಂದರ್ಶನದಲ್ಲಿ ತಮ್ಮ ಇಪ್ಪತ್ತನೇ ವಯಸ್ಸಿನಿಂದಲೂ ನಾಸ್ತಿಕನಾಗಿದ್ದೇನೆ ಎಂದು ತಿಳಿಸಿದ್ದಾರೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಸದಸ್ಯರಾದ ಸುಜನ್ ಚಕ್ರವರ್ತಿಯವರನ್ನು ಭೇಟಿಯಾಗಿ ಯೆಚೂರಿಯವರ ಕುರಿತು ಚರ್ಚೆ ನಡೆಸಿದಾಗ, “ಅವರು ಹಿಂದೂ ಕುಟುಂಬದಲ್ಲಿ ಜನಿಸಿದ್ದರು ಆದರೆ ಅವರು ನಾಸ್ತಿಕರಾಗಿದ್ದರು” ಎಂದು ಚಕ್ರವರ್ತಿಯವರು ಕನ್ನಡ ಫ್ಯಾಕ್ಟ್‌ ಚೆಕ್‌ ತಂಡಕ್ಕೆ ತಿಳಿಸಿದ್ದಾರೆ.

ಯೆಚೂರಿ ಕ್ರೈಸ್ತ ಧರ್ಮದವರು ಎಂದು ಹೇಳಲು ಏಕೈಕ ಆಧಾರವೆಂದರೆ ಅವರನ್ನು ಹಿಂದೂಗಳ ಅಂತಿಮ ವಿಧಿ ವಿಧಾನಗಳನ್ನು ಅನುಸರಿಸಿ ಅಂತ್ಯಸಂಸ್ಕಾರ ಮಾಡುವ ಬದಲು ಶವಪೆಟ್ಟಿಗೆಯಲ್ಲಿ ಅವರ ಶವವನ್ನು ಇರಿಸಿದ್ದರಿಂದಾಗಿ ಬಳಕೆದಾರರು ಎಕ್ಸ್ ಪೋಸ್ಟ್‌ಗಳ ಮೂಲಕ ಯೆಚೂರಿ ಕ್ರೈಸ್ತ ಧರ್ಮದವರು ಎಂದು ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಯೆಚೂರಿ ಅವರ ಸ್ನೇಹಿತರು, ಕುಟುಂಬಸ್ಥರು ಮತ್ತು ಅಭಿಮಾನಿಗಳು ಅವರನ್ನು ಬೀಳ್ಕೊಟ್ಟ ನಂತರ ಅವರ ದೇಹವನ್ನು ವೈದ್ಯಕೀಯ ಅಧ್ಯಯನಕ್ಕಾಗಿ ದೆಹಲಿಯ ಏಮ್ಸ್‌ಗೆ ಕಳಿಸಲಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

 

ಯೆಚೂರಿಯವರ ಮರಣದ ನಂತರ ಅವರ ದೇಹವನ್ನು ಶವಪೆಟ್ಟಿಗೆಯಲ್ಲಿ ಇರಿಸಲಾಗಿದೆ. ನಂತರ ಸಂಶೋಧನೆಗಾಗಿ ದೆಹಲಿಯ ಏಮ್ಸ್‌ಗೆ ಕಳುಹಿಸಲಾಗುವುದು. ಅವರ ಅಂತ್ಯಕ್ರಿಯೆಯ ಸಮಯದಲ್ಲಿ ಯಾವುದೇ ಅಂತಿಮ ವಿಧಿವಿಧಾನಗಳನ್ನು ಅಥವಾ ಯಾವುದೇ ರೀತಿಯ ಧಾರ್ಮಿಕ ಪದ್ಧತಿಗಳನ್ನು ನಡೆಸಿಲ್ಲ ಎಂದು ದಿ ಹಿಂದೂ ಪತ್ರಿಕೆಯ ಲೇಖನದಲ್ಲಿ ವರದಿಯಾಗಿದೆ. 

ಒಟ್ಟಾರೆಯಾಗಿ ಹೇಳುವುದಾದರೆ, ಯೆಚೂರಿಯವರ ಪಾರ್ಥಿವ ಶರೀರವನ್ನು ಮರದ ಪೆಟ್ಟಿಗೆಯಲ್ಲಿ ಸಂಸ್ಕರಿಸಿಟ್ಟು ಸಂಶೋಧನೆಗಾಗಿ ದೆಹಲಿಯ ಏಮ್ಸ್‌ಗೆ ಕಳುಹಿಸಲಾಗಿದ್ದು, ಇದನ್ನು ಪರಿಶಿಲಿಸದೆ ಸುಳ್ಳು ನಿರೂಪಣೆಯೊಂದಿಗೆ ಬಲಪಂಥೀಯ ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಹಂಚಿಕೊಂಡಿದ್ದಾರೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಮತಾಂತರ ಮಾಡುವ ಉದ್ದೇಶದಿಂದ ಹಿಂದೂ ವಿದ್ಯಾರ್ಥಿಗಳಿಗೆ ನಮಾಜ್‌ ಮಾಡಿಸಿದ್ರಾ ಮುಸ್ಲಿಮರು?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights