FACT CJECK | ಅಕ್ರಮ ಶಸ್ತ್ರಾಸ್ತ್ರ ಪೂರೈಸುತ್ತಿದ್ದ ಪೊಲೀಸ್ ಅಧಿಕಾರಿಯ ಬಂಧನ ಎಂದು ಸುಳ್ಳು ಪೋಸ್ಟ್ ಹಂಚಿಕೆ
ಉತ್ತರ ಪ್ರದೇಶದ ಕಾನ್ಪುರದಲ್ಲಿ DSP ಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಶಹನವಾಜ್ ಖಾನ್ ಎಂಬ ಅಧಿಕಾರಿಯನ್ನು ಅಕ್ರಮ ಶಸ್ತ್ರಾಸ್ತ್ರ ಮತ್ತು ಕೋಟ್ಯಂತರ ರೂ ಭ್ರಷ್ಟಾಚಾರ ಆರೋಪದ ಮೇಲೆ ಭ್ರಷ್ಟಾಚಾರ ನಿಗ್ರಹ ತಂಡ ಬಂಧಿಸಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ.
ಪೊಲೀಸ್ ಅಧಿಕಾರಿಯೂ ತನ್ನ ಸ್ನೇಹಿತರಿಗೆ ಬಂದೂಕು, ಪಿಸ್ತೂಲ್ ಮತ್ತು ಹಣವನ್ನು ವರ್ಗಾವಣೆ ಮಾಡುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದನು . ಒಬ್ಬ ಮುಸ್ಲಿಮ್ ಎಂದಿಗೂ ದೇಶಭಕ್ತನಾಗಲು ಸಾಧ್ಯವಿಲ್ಲ ಎಂಬುದು ನಿಜ. ಅವರು ಸರ್ಕಾರಿ ಉದ್ಯೋಗದಲ್ಲಿದ್ದರೂ, ಭಯೋತ್ಪಾದನೆಯನ್ನು ಹರಡಲು ಅವರು ಏನು ಬೇಕಾದರೂ ಮಾಡಲು ಸಿದ್ಧರಿದ್ದಾರೆ… ಈಗ ಯೋಗಿ ಬಾಬಾ ಈ ಪ್ರಕರಣವನ್ನು ಚೆನ್ನಾಗಿ ತೆಗೆದುಕೊಳ್ಳುತ್ತಾರೆ. ಎಂಬ ಬರಹದೊಮದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ.ತನ್ನ ಸ್ನೇಹಿತರಿಗೆ ಕೋಟ್ಯಂತರ ರೂಪಾಯಿ ಮತ್ತು ಶಸ್ತ್ರಾಸ್ತ್ರಗಳನ್ನು ಪೂರೈಸಿದ್ದಕ್ಕಾಗಿ ಕಾನ್ಪುರದ ಉಪ ಪೊಲೀಸ್ ವರಿಷ್ಠಾಧಿಕಾರಿಯನ್ನು ಬಂಧಿಸಲಾಗಿದೆಯೇ ಎಂದು ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್ ಚೆಕ್:
ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್‌ನಲ್ಲಿ ಸರ್ಚ್ ಮಾಡಿದಾಗ, 10 ಸೆಪ್ಟೆಂಬರ್ 2024ರಂದು ನವಭಾರತ್ ಟೈಮ್ಸ್‌ನಲ್ಲಿನಲ್ಲಿ ಮಾಡಿದ ವರದಿಯೊಂದು ಲಭ್ಯವಾಗಿದೆ.
ನವಭಾರತ್ ಟೈಮ್ಸ್‌ನಲ್ಲಿ ವರದಿಯ ಪ್ರಕಾರ, ಪ್ರಕರಣವೊಂದರಲ್ಲಿ ಚಾರ್ಜ್‌ಶೀಟ್ ಸಲ್ಲಿಸಲು 15,000 ರೂ.ಗಳ ಲಂಚಕ್ಕೆ ಒತ್ತಾಯಿಸಿದ ಕಾನ್ಸ್‌ಸ್ಟೇಬಲ್‌ನನ್ನು ಯುಪಿ ಪೊಲೀಸರ ಜಾಗೃತ ತಂಡವು ಕಾನ್ಪುರದಲ್ಲಿ ಬಂಧಿಸಿದೆ.
ಪೊಲೀಸ್ ಸಮವಸ್ತ್ರದಲ್ಲಿವಿಡಿಯೋದಲ್ಲಿ ಕಾಣಿಸಿಕೊಂಡ ವ್ಯಕ್ತಿ ಹೆಡ್ ಕಾನ್ಸ್ಟೇಬಲ್ ಶಹನವಾಜ್ ಎಂದು ಹಲವಾರು ಮಾಧ್ಯಮ ವರದಿಗಳು ಉಲ್ಲೇಖಿಸಿವೆ. ವೈರಲ್ ಪೋಸ್ಟ್‌ನಲ್ಲಿ ಹೇಳಿರುವಂತೆ ಕೋಟಿ ರೂಪಾಯಿ ಅಥವಾ ಶಸ್ತ್ರಾಸ್ತ್ರಗಳ ಬಗ್ಗೆ ನಮಗೆ ಯಾವುದೇ ಉಲ್ಲೇಖ ಕಂಡುಬಂದಿಲ್ಲ.
ಪ್ರಕರಣವೇನು?
ಅಮರ್ ಉಜಾಲಾ ಪ್ರಕಾರ, ಹೆಡ್ ಕಾನ್ಸ್‌ಸ್ಟೇಬಲ್ ಶಹನವಾಜ್ ಕಾನ್ಪುರದ ಬಾಬುಪುರ್ವಾದಲ್ಲಿರುವ ಎಸಿಪಿ ಕಚೇರಿಯಲ್ಲಿ ಪೇಶ್ಕರ್ (ದಾಖಲೆಗಳನ್ನು ಮಾಡುವ ವ್ಯಕ್ತಿ) ಆಗಿದ್ದರು.
ಅಲ್ಲಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲು, ಹೆಡ್ ಕಾನ್ಸ್‌ಸ್ಟೇಬಲ್‌ಗಳಾದ ಶಹನವಾಜ್ ಮತ್ತು ಯೋಗೇಶ್ ಕುಮಾರ್ 20,000 ರೂ.ಗಳ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ವ್ಯವಹಾರ ಕುದರದಿದ್ದಾಗ ಮತ್ತೊಂದು ಮಾತುಕತೆ ನಡೆಸಿ 15,000 ರೂ.ಗೆ ಕೊಡುವಂತೆ ತೀರ್ಮಾನಿಸಲಾಯಿತು. ಆದರೆ ಸಂತ್ರಸ್ತ ಅದನ್ನು ಹೊಂದಿಸಲು ಸಾಧ್ಯವಾಗದ ಪರಿಸ್ಥಿತಿಯಲ್ಲಿದ್ದರಿಂದ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನಿಡಿದರು. ಸಂತ್ರಸ್ತ ಲಂಚ ನೀಡಲು ಪೊಲೀಸ್ ಠಾಣೆಗೆ ಬಂದಾಗ ಜಾಗೃತಿ ಇಲಾಖೆ ಶಹನವಾಜ್ ಅವರನ್ನು ಬಂಧಿಸಿತು. ಈ ಬಂಧನವನ್ನು ದೃಶ್ಯಾವಳಿಗಳನ್ನು ಸೆರೆಹಿಡಿದು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿತ್ತು.
ಶಸ್ತ್ರಾಸ್ತ್ರಗಳು ಅಥವಾ ಹಣದ ಶುಲ್ಕವಿಲ್ಲ
ಮತ್ತಷ್ಟು ಪರಿಶೀಲನೆಗಾಗಿ ಯುಪಿ ಪೊಲೀಸರ ಜಾಗೃತ ತಂಡವನ್ನು ಸಂಪರ್ಕಿಸಿ ಮಾಹಿತಿ ಪಡೆದಿದ್ದು. ಇಲಾಖೆಯ ಪೇಶ್ಕರ್ ರಾಜೇಶ್ ಸಿಂಗ್ ಈ ವೈರಲ್ ಹೇಳಿಕೆಗಳನ್ನು ನಿರಾಕರಿಸಿದರು ಮತ್ತು “ಶಹನವಾಜ್ ಅವರನ್ನು 15,000 ರೂ.ಗಳ ಲಂಚ ಪಡೆದ ಆರೋಪದ ಮೇಲೆ ಬಂಧಿಸಲಾಯಿತು. ಆದರೆ ಆತನ ಬಳಿ ಕೋಟ್ಯಾಂತರ ರೂಗಳ ಶಸ್ತ್ರಾಸ್ತ್ರಗಳು ಇದ್ದವು ಎಂಬುದು ಸುಳ್ಳು.
ಒಟ್ಟಾರೆಯಾಗಿ ಹೇಳುವುದಾರೆ, ಶಹನವಾಜ್ ಎಂಬ ಪೊಲೀಸ್ ಪೇದೆ ರೂ 15ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಪರಿಣಾಮ ಬಂಧಿಸಲಾದ ಪ್ರಕರಣವನ್ನು, ಉತ್ತರ ಪ್ರದೇಶದ ಕಾನ್ಪುರದಲ್ಲಿ DSP ಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಶಹನವಾಜ್ ಖಾನ್ ಎಂಬ ಪೊಲೀಸ್ ಅಧಿಕಾರಿಯನ್ನು ಅಕ್ರಮ ಶಸ್ತ್ರಾಸ್ತ್ರಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | ಮುಸ್ಲಿಮರು ಹೆಚ್ಚಿರುವ ಪ್ರದೇಶದಿಂದ ಹಿಂದೂಗಳು ಜಾಗ ಖಾಲಿ ಮಾಡಬೇಕೆಂಬ ಬ್ಯಾನರ್‌ನ ಅಸಲೀಯತ್ತೇನು ಗೊತ್ತೇ?