FACT CHECK | ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿರುದ್ಧದ ಪ್ರತಿಭಟನೆಯಲ್ಲಿ ವೈದ್ಯರು ನೃತ್ಯ ಮಾಡುತ್ತಿದ್ದಾರೆ ಎಂಬ ಪೋಸ್ಟ್‌ನ ಅಸಲೀಯತ್ತೇನು?
ಆರ್‌ಜಿ ಕರ್ ಆಸ್ಪತ್ರೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಕೋಲ್ಕತ್ತಾದ ಸ್ವಾಸ್ಥ್ಯ ಭವನದ ಹೊರಗೆ ಪ್ರತಿಭಟನೆ ನಡೆಸುತ್ತಿರುವ ತರಬೇತಿ ನಿರತ ವೈದ್ಯರು, ಶನಿವಾರ ತುರ್ತು ಸೇವೆಗಳಿಗೆ ಮರಳುವುದಾಗಿ ಹೇಳಿದ್ದಾರೆ. ಆದರೆ ತಮ್ಮ ಪ್ರತಿಭಟನೆಯನ್ನು ಪೂರ್ಣವಾಗಿ ಹಿಂತೆಗೆದುಕೊಳ್ಳಲಿಲ್ಲ.ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರರೋಗಿ ವಿಭಾಗಗಳಿಗೆ (OPD) ಸೇವೆಗಳನ್ನು ಒದಗಿಸುವುದಿಲ್ಲ ಎಂದು ಇದೇ ವೇಳೆ ವೈದ್ಯರು ಘೋಷಿಸಿದ್ದಾರೆ. ಇದೇ ವೇಳೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್‌ವೊಂದು ವೈರಲ್ ಆಗುತ್ತಿದ್ದು ವೈದ್ಯರು ನೃತ್ಯ ಮಾಡುತ್ತಿದ್ದಾರೆ ಎಂದು ಹೇಲಲಾಗುತ್ತಿದೆ.
ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆಯ ಪ್ರಕರಣದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಮಹಿಳೆಯೊಬ್ಬರು ಸೀರೆಯುಟ್ಟು ನೃತ್ಯ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
True spirit of #Bengal awakens. Thanks #MamataBanerjee
“Kalli Nrutyam ” by Woman Doctor protesting Ghost of R, G Kar in Kolkata, a Lady Doctor became as Bhadrakali pic.twitter.com/tsvQkTB6YD
— Ratan Sharda रतन शारदा (@RatanSharda55) September 18, 2024
ಕೋಲ್ಕತ್ತಾದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವೈದ್ಯರೊಬ್ಬರು ನೃತ್ಯ ಮಾಡುತ್ತಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮವಾದ ಎಕ್ಸ್‌ನಲ್ಲಿ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋ ಒಂದು ಮಿಲಿಯನ್ ವೀವ್ಸ್ ಪಡೆದುಕೊಂಡಿದೆ. ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್‌ಚೆಕ್ :
ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಮಹಿಳಾ ವೈದ್ಯಯೊಬ್ಬರು ಪ್ರತಿಭಟನೆಯಲ್ಲಿ ನೃತ್ಯ ಮಾಡುತ್ತಿದ್ದಾರೆ ಎಂದು ಪ್ರತಿಪಾದಿಸಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ಅನ್ನು ಪರಿಶೀಲಿಸಲು, InVID ಸಾಧನವನ್ನು ಬಳಸಿಕೊಂಡು ವೈರಲ್ ವಿಡಿಯೋದ ಸ್ಕ್ರೀನ್‌ಶಾಟ್‌ಗಳಾಗಿ ವಿಂಗಡಿಸಿ, ಕೆಲವು ಫ್ರೇಮ್‌ಗಳನ್ನು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ದಿವ್ಯಾ ಗಂಡೋತ್ರಾ ಟಂಡನ್ ಎಂಬ ವೆರಿಫೈಡ್ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡ ಅದೇ ಪ್ರತಿಪಾದನೆಯ ವಿಡಿಯೋವೊಂದು ಲಭ್ಯವಾಗಿದೆ.
ಅದೇ ಪೋಸ್ಟ್‌ಗೆ ಕಮೆಂಟ್ ಮಾಡಿರುವ ಒಬ್ಬ ಸೋಶಿಯಲ್ ಮೀಡಿಯಾ ಬಳಕೆದಾರರು, ನೃತ್ಯ ಮಾಡುತ್ತಿರುವ ಮಹಿಲೇ ವೈದ್ಯರಲ್ಲ ನಟಿ ಎಂದು ಉಲ್ಲೇಖಿಸಿದ್ದಾರೆ. ಮಹಿಳೆಯನ್ನು ಬಂಗಾಳಿ ನಟಿ ಮೋಕ್ಷ ಸೇನ್‌ಗುಪ್ತಾ ಎಂದು ಗುರುತಿಸಲಾಗಿದ್ದು, ಅವರು ದಕ್ಷಿಣ ಭಾರತದ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿದ್ದಾರೆ.
ಮತ್ತೊಬ್ಬ ಫೇಸ್‌ಬುಕ್ ಬಳಕೆದಾರರು ಆಗಸ್ಟ್ 31 ರಂದು ಸಂತೋಷಪುರ ಪ್ರತಿಭಟನೆಯ ನೃತ್ಯವನ್ನು ಲೈವ್-ಸ್ಟ್ರೀಮ್ ಮಾಡಿ ನಟಿಯನ್ನು ಟ್ಯಾಗ್ ಮಾಡಿದ್ದಾರೆ. ತನ್ನ ಫೇಸ್‌ಬುಕ್ ಪ್ರೊಫೈಲ್‌ನಲ್ಲಿ, ಮೋಕ್ಷ ಸೇನ್‌ಗುಪ್ತಾ ತಾನು ಕೋಲ್ಕತ್ತಾದ ಅಶುತೋಷ್ ಕಾಲೇಜಿನಲ್ಲಿ ಸೈಕಾಲಜಿ (ಆನರ್ಸ್) ವಿದ್ಯಾರ್ಥಿಯಾಗಿದ್ದೇನೆ ಎಂದು ಹೇಳಿದ್ದಾರೆ.
ಇದರಿಂದ ಕ್ಯೂ ತೆಗೆದುಕೊಂಡು, ‘ಬಂಗಾಳಿ ನಟಿ ಮೋಕ್ಷ’ ಎಂಬ ಕೀವರ್ಡ್ ಬಳಸಿಕೊಂಡು ಸರ್ಚ್ ಮಾಡಿದಾಗ, ಸೆಪ್ಟೆಂಬರ್ 16 ರಂದು ಪ್ರಕಟವಾದ ಇಂಡಿಯಾ ಟುಡೇ ವರದಿ ಲಭ್ಯವಾಗಿದೆ. ಮಹಿಳೆಯನ್ನು ಬಂಗಾಳಿ ನಟಿ ಮೋಕ್ಷ ಸೇನ್‌ಗುಪ್ತಾ ಎಂದು ಗುರುತಿಸಲಾಗಿದ್ದು, ಅವರು ದಕ್ಷಿಣ ಭಾರತದ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿದ್ದಾರೆ. ವರದಿಯಲ್ಲಿ ವೈರಲ್ ವಿಡಿಯೋದ ಸ್ಕ್ರೀನ್‌ಶಾಟ್ ಹಂಚಿಕೊಂಡಿದೆ.
ಒಟ್ಟಾರೆಯಾಗಿ ಹೇಳುವುದಾದರೆ, ಪಶ್ಚಿಮ ಬಂಗಾಳದಲ್ಲಿ ವೈದ್ಯರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ನಟಿ ಮೋಕ್ಷ ಸೇನ್‌ಗುಪ್ತಾ ನೃತ್ಯ ಮಾಡುವ ಮೂಲಕ ತಮ್ಮ ವೈದ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿರುದ್ದ ತಮ್ಮ ಪ್ರತಿಭಟೆಯನ್ನು ದಾಖಲಿಸಿದ್ದಾರೆ. ಆದರೆ ಇದನ್ನು ವೈದ್ಯರು ನೃತ್ಯ ಮಾಡುತ್ತಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CJECK | ಅಕ್ರಮ ಶಸ್ತ್ರಾಸ್ತ್ರ ಪೂರೈಸುತ್ತಿದ್ದ ಪೊಲೀಸ್ ಅಧಿಕಾರಿಯ ಬಂಧನ ಎಂದು ಸುಳ್ಳು ಪೋಸ್ಟ್ ಹಂಚಿಕೆ