FACT CHECK | ಬಂಧನ ಭೀತಿಯಿಂದಾಗಿ ಯುವಕ ಮೃತಪಟ್ಟಿದ್ದು ನಿಜವೇ?

ಟಿವಿ 9, ಸುವರ್ಣ ನ್ಯೂಸ್, ಕನ್ನಡ ಪ್ರಭ, ನ್ಯೂಸ್ 18 ಸೇರಿದಂತೆ ಕನ್ನಡದ ಬಹುತೇಕ ಮಾಧ್ಯಮಗಳು ಈ ವರದಿಯನ್ನು ಮಾಡಿದ್ದು “ಗಲಭೆಯ ಹಿನ್ನೆಲೆಯಲ್ಲಿ ಬಂಧನ ಭೀತಿಯಿಂದ ಗ್ರಾಮ ತೊರೆದಿದ್ದ ಯುವಕ ಕಿರಣ್‌ ಮಿದುಳಿಗೆ ಪಾರ್ಶ್ವವಾಯು ಹೊಡೆದು ಮೃತಪಟ್ಟಿದ್ದಾರೆ. ಗಲಭೆಯ ನಂತರ ಕಿರಣ್‌ ಊರು ತೊರೆದಿದ್ದರು. ಈ ಯುವಕನ ತಂದೆ ಕುಮಾರ್‌ನನ್ನು (ಆರೋಪಿ ಎ–17) ಪೊಲೀಸರು ಬಂಧಿಸಿದ್ದು, ಕಾರಾಗೃಹದಲ್ಲಿದ್ದಾರೆ. ತಂದೆಯ ಬಂಧನದಿಂದ ಅತಿಯಾದ ಆತಂಕ ಮತ್ತು ಒತ್ತಡಕ್ಕೆ ಒಳಗಾಗಿ ಕಿರಣ್‌ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.” ಎಂದು ಈ ವರದಿಗಳಲ್ಲಿ ಹೇಳಲಾಗಿದೆ.

ನಾಗಮಂಗಲದ ಬದರಿಕೊಪ್ಪಲಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವಿನ ಘರ್ಷಣೆಯಿಂದ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ತಡರಾತ್ರಿ ಪೊಲೀಸರು ಕಾರ್ಯಾಚರಣೆ ನಡೆಸಿ ಪರಿಸ್ಥಿತಿ ಹತೋಟಿಗೆ ತಂದಿದ್ದರು. ಪ್ರಕರಣ ಸಂಬಂಧ ಇದುವರೆಗೆ 53 ಜನರನ್ನು ಬಂಧಿಸಲಾಗಿತ್ತು. ಬಳಿಕ ನ್ಯಾಯಾಧೀಶರ ಮುಂದೆ ಬಂಧಿತರನ್ನು ಪೊಲೀಸರು ಹಾಜರುಪಡಿಸಿದ್ದರು. ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಹಿರಿಯ ಸಿವಿಲ್ ನ್ಯಾಯಾಧೀಶರು ಆದೇಶಿಸಿದ್ದಾರೆ.

ಆದರೆ “ನಾಗಮಂಗಲದ ಗಲಭೆಗೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿ ಗ್ರಾಮ ತೊರೆದು ತಲೆಮರೆಸಿಕೊಂಡಿದ್ದ ಕಿರಣ್(23) ಎಂಬ ಯುವಕನೋರ್ವ ಬ್ರೈನ್ ಸ್ಟ್ರೋಕ್​ನಿಂದ ಮೃತಪಟ್ಟಿದ್ದಾರೆ. ಅವರ ತಂದೆ ಕುಮಾರ್‌ ಎಂಬುವವರನ್ನು ಪೊಲೀಸರು ಬಂಧಿಸಿದ್ದರು” ಎಂಬ ಸುದ್ದಿಯನ್ನು ರಾಜ್ಯದ ಹಲವು ಮಾಧ್ಯಮಗಳು ಬಿತ್ತರಿಸಿವೆ. ಇದರಿಂದ ರಾಜ್ಯ ಸರ್ಕಾರದ ವಿರುದ್ಧ ಜನರು ಆಕ್ರೋಶ ಹೊರಹಾಕುತ್ತಿದ್ದಾರೆ. ಹಾಗಿದ್ದರೆ ಮುಖ್ಯವಾಹಿನಿ ಮಾಧ್ಯಮಗಳು ಬಿತ್ತರಿಸಿದ ವರದಿಗಳ ಸತ್ಯಾಸ್ಯತೆಗಳನ್ನು ಪರಿಶೀಲಿಸೊಣ.

ಫ್ಯಾಕ್ಟ್‌ ಚೆಕ್ :

ಕನ್ನಡದ ಮುಖ್ಯವಾಹಿನಿಗಳು ಮಾಡಿರುವ ವರದಿಗಳನ್ನು ಪರಿಶೀಲಿಸದಾಗ, ಮೃತ ಯುವಕ ಕಿರಣ್ ವಿರುದ್ದ ಯಾವ ಆರೋಪಗಳು ಇರಲಿಲ್ಲ ಎಂದು ಮಂಡ್ಯ ಜಿಲ್ಲಾ ಪೋಲಿಸರು ಸ್ಪಷ್ಟನೆ ನೀಡಿದ್ದಾರೆ. ಪೋಲಿಸರ ಭೀತಿಯಿಂದ ಯುವಕ ಕಿರಣ್ ಮೃತಪಟ್ಟಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆ ಇದಕ್ಕೆ ಪ್ರತಿಕ್ರಯಿಸಿರುವ ಮಂಡ್ಯ ಪೋಲಿಸರು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ.

” ಈ ದಿನ ಬ್ರೇನ್ ಸ್ಟ್ರೋಕ್‌ನಿಂದ ಮೃತ ಪಟ್ಟಿರುವ ವ್ಯಕ್ತಿ ಕಿರಣ್ ಬಿನ್ ಕುಮಾರ್ (23 ವರ್ಷ) ಬದರಿಕೊಪ್ಪಲು ಗ್ರಾಮದವರು ನಾಗಮಂಗಲ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿರುವುದಿಲ್ಲ. ನಾಗಮಂಗಲ ಗಲಭೆ ಪ್ರಕರಣದ A1 ಆರೋಪಿ ಕಿರಣ್ ಕುಮಾರ್ ಎಸ್‌ ಬಿನ್ ಶ್ರೀನಿವಾಸ್‌ 26 ವರ್ಷ ಬದರಿಕೊಪ್ಪಲು ಗ್ರಾಮದವರು ದಸ್ತಗಿರಿಯಾಗಿ ಮಂಡ್ಯ ಕಾರಗೃಹದಲ್ಲಿ ನ್ಯಾಯಂಗ ಬಂಧನದಲ್ಲಿರುತ್ತಾರೆ. ಈ ರೀತಿ ನಿಖರವಾದ ಮಾಹಿತಿ ತಿಳಿಯದೆ ಸಾಮಾಜಿಕ ಜಾಲತಾಣಗಳಲ್ಲಿ ಸಮಾಜದ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವಂತಹ ಸುಳ್ಳು ಸುದ್ದಿಯನ್ನು ವೈರಲ್ ಮಾಡುವವರ ವಿರುದ್ದ ಸೂಕ್ತ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು” ಎಂದು ಎಚ್ಚರಿಸಿದ್ದಾರೆ.

 

 

 

 

 

 

 

 

 

 

 

 

 

ಒಟ್ಟಾರೆಯಾಗಿ ಹೇಳುವುದಾದರೆ, ctನಾಗಮಂಗಲದ ಗಲಭೆಗೆ ಸಂಬಂಧಿಸಿದ A1 ಆರೋಪಿ ಕಿರಣ್ ಕುಮಾರ್ ಎನ್ನುವ ವ್ಯಕ್ತಿಯ ಹೆಸರನ್ನು ಮೃತಪಟ್ಟಿರುವ ವ್ಯಕ್ತಿಗೆ ಹೋಲಿಸಿ ಪೊಲೀಸರಿಂದ ಕಿರಣ್ ತಲೆಮರೆಸಿಕೊಂಡಿದ್ದರು ಎಂದು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ.

ಇಂತಹ ಸುದ್ದಿಗಳನ್ನು ಹಂಚಿಕೊಳ್ಳುವ ಮುನ್ನ ಪರಿಶೀಲಿಸಿ. ಇಲ್ಲದಿದ್ದರೆ ಸುಳ್ಳು ಸುದ್ದಿ ಹಂಚಿಕೊಳ್ಳುತ್ತಿರುವ ಪಟ್ಟಿಯಲ್ಲಿ ನೀವು ಇರುತ್ತೀರಿ, ಹಾಗಾಗದಿರಲಿ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಜಾತಿ ಆಧಾರಿತ ಮೀಸಲಾತಿಯನ್ನು ತೆಗೆಯುತ್ತೇವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹೇಳಿಲ್ಲ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights