FACT CHECK | ಜಾತಿ ಆಧಾರಿತ ಮೀಸಲಾತಿಯನ್ನು ತೆಗೆಯುತ್ತೇವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹೇಳಿಲ್ಲ
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು (ಜಾತಿ ಆಧಾರಿತ) ಮೀಸಲಾತಿಯನ್ನು ಕೊನೆಗೊಳಿಸುವ ಹೇಳಿಕೆ ನೀಡಿದ್ದಾರೆ ಎಂದು ಪ್ರತಿಪಾದಿಸಿ ಹಿಂದಿ ಪತ್ರಿಕೆಯೊಂದರ ಸ್ಕ್ರೀನ್‌ಶಾಟ್ ಅನ್ನು ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಹಂಚಿಕೊಂಡಿದ್ದಾರೆ. ಸಾಮಾಜಿಕ ಮಾಧ್ಯಮ ಬಳಕೆದಾರರು ಮೀಸಲಾತಿ ನೀತಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಲು ಪತ್ರಿಕೆಯ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಂಡಿದ್ದಾರೆ.
“ದೇಶದಲ್ಲಿ ಅಶಾಂತಿ ಮತ್ತು ಜಾತೀಯತೆಗೆ ಕಾಂಗ್ರೆಸ್ ಮೂಲವಾಗಿದೆ, ಕಾಂಗ್ರೆಸ್ ಇರುವವರೆಗೂ ಮೀಸಲಾತಿ ಮೇಲಿನ ದಾಳಿಗಳು ಮುಂದುವರಿಯುತ್ತವೆ. ಕಾಂಗ್ರೆಸ್ ನಾಶವಾದರೆ ಮೀಸಲಾತಿ ಅಭಿವೃದ್ಧಿಯಾಗುತ್ತದೆ. ಎಂದು ಸೆಪ್ಟೆಂಬರ್ 20 ರಂದು, ಸಾಮಾಜಿಕ ಮಾಧ್ಯಮ ವೇದಿಕೆಯಾದ ‘ಎಕ್ಸ್’ (ಹಿಂದೆ ಟ್ವಿಟರ್) ಬಳಕೆದಾರರು ಪತ್ರಿಕೆಯ ಕ್ಲಿಪ್ಪಿಂಗ್ ಅನ್ನು ಪೋಸ್ಟ್ ಮಾಡಿದ್ದಾರೆ. ಪೋಸ್ಟ್‌ನ ಲಿಂಕ್ , ಆರ್ಕೈವ್ ಲಿಂಕ್ ಮತ್ತು ಸ್ಕ್ರೀನ್‌ಶಾಟ್ ಅನ್ನು ಇಲ್ಲಿ ನೋಡಬಹುದು.
DR BR AMBEDKAR जी ने सही कहा है कांग्रेस दलित विरोधी था दलित विरोधी हैं और SC/ST विरोधी रहेगा।
देख लीजिए कांग्रेस के नेता कांग्रेस का सबसे बड़ा लक्ष्य क्या है कांग्रेस के नेता खुद बता रहे हैं कि कांग्रेस भारत से आरक्षण समाप्त करना है।@kharge @RahulGandhi @AnandAkash_BSP pic.twitter.com/hV02qJ9GZB— Amar Varma (@AmarVarma_) September 20, 2024
ಮತ್ತೊಬ್ಬ ಸಾಮಾಜಿಕ ಮಾಧ್ಯಮ ಬಳಕೆದಾರರು ಪತ್ರಿಕೆಯ ಕ್ಲಿಪ್ಪಿಂಗ್ ಅನ್ನು ಹಂಚಿಕೊಂಡಿದ್ದು, “ಡಾ. ಬಿ.ಆರ್. ಅಂಬೇಡ್ಕರ್ ಹೇಳಿದ್ದು ಸರಿ, ಕಾಂಗ್ರೆಸ್ ದಲಿತ ವಿರೋಧಿ ಮತ್ತು ಎಸ್‌ಸಿ/ಎಸ್‌ಟಿ ವಿರೋಧಿಯಾಗಿ ಉಳಿಯುತ್ತದೆ. ನೋಡಿ, ಕಾಂಗ್ರೆಸ್‌ನವರೇ ಕಾಂಗ್ರೆಸ್‌ನ ದೊಡ್ಡವರು ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಭಾರತದಲ್ಲಿ ಮೀಸಲಾತಿಯನ್ನು ಕೊನೆಗೊಳಿಸುವುದು ಅವರ ಗುರಿಯಾಗಿದೆ.” ಪೋಸ್ಟ್‌ನ ಲಿಂಕ್ , ಆರ್ಕೈವ್ ಲಿಂಕ್ ಮತ್ತು ಸ್ಕ್ರೀನ್‌ಶಾಟ್ ಅನ್ನು ಇಲ್ಲಿ ನೋಡಬಹುದು. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್‌ಚೆಕ್ :
ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಪೇಪರ್ ಕ್ಲಿಪ್‌ನಲ್ಲಿ ಕಂಡುಬರುವ “ಆಪ್ಕಿ ಆವಾಜ್” ಎಂಬ ಪತ್ರಿಕೆಯ ಕುರಿತು ಸರ್ಚ್ ಮಾಡಿದಾಗ, ಈ ಹೆಸರಿನ ಯಾವುದೇ ವಿಶ್ವಾಸಾರ್ಹ ಪತ್ರಿಕೆ ಕಂಡುಬಂದಿಲ್ಲ.
ಸಂಬಂಧಿತ ಕೀವರ್ಡ್‌ಗಳನ್ನು ಬಳಸಿಕೊಂಡು ವೈರಲ್ ಹೇಳಿಕೆಗೆ ಸಂಬಂಧಿಸಿದ ಮಾಧ್ಯಮ ವರದಿಗಳನ್ನು ಸರ್ಚ್ ಮಾಡಿದ್ದು, ಯಾವುದೇ ವಿಶ್ವಾಸಾರ್ಹ ಮಾಧ್ಯಮ ವರದಿ ಲಭ್ಯವಾಗಿಲ್ಲ. ಕಾಂಗ್ರೆಸ್ ನಾಯಕರೊಬ್ಬರು ಮೀಸಲಾತಿ ವಿರುದ್ಧ ಈ ರೀತಿಯ ಹೇಳಿಕೆ ನೀಡಿದ್ದರೆ, ಮಾಧ್ಯಮಗಳಲ್ಲಿ ವರದಿಯಾಗುತ್ತಿತ್ತು,
ಎಬಿಪಿ ನ್ಯೂಸ್ ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿಯಲ್ಲಿ ಮೀಸಲಾತಿ ಕುರಿತು ಕೆಸಿ ವೇಣುಗೋಪಾಲ್ ಅವರ ಇತ್ತೀಚಿನ ಹೇಳಿಕೆ ಲಭ್ಯವಾಗಿದೆ. ಇದರಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು, ಬಿಜೆಪಿಯವರು ರಾಹುಲ್ ಗಾಂಧಿಯವರ ಮಾನಹಾನಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿಯವರು ಮುಂದಿಡುತ್ತಿರುವ ಅಜೆಂಡಾ ಅವರಿಗೆ ಪ್ರಯೋಜನವಾಗುವುದಿಲ್ಲ ಎಂದು ಹೇಳಿದ್ದಾರೆ. ವಾಷಿಂಗ್ಟನ್‌ನಲ್ಲಿ ಮೀಸಲಾತಿ ಕುರಿತು ರಾಹುಲ್ ಗಾಂಧಿಯವರ ಹೇಳಿಕೆಯ ನಂತರ, ಲೋಕಸಭೆಯ ವಿರೋಧ ಪಕ್ಷದ ನಾಯಕ ಬಿಜೆಪಿಯ ದಾಳಿಗೆ ಒಳಗಾದರು, ನಂತರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿಯನ್ನು ಸಮರ್ಥಿಸಿಕೊಂಡು ಮತ್ತು ಬಿಜೆಪಿಯನ್ನು ತರಾಟೆಗೆ ತೆಗೆದಕೊಂಡ ಸಂಪೂರ್ಣ ವರದಿಯನ್ನು ಇಲ್ಲಿ ನೋಡಬಹುದು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮೀಸಲಾತಿ ಕುರಿತ ಹೇಳಿಕೆಯನ್ನು ನಿಜವಾಗಿಯೂ ನೀಡಿದ್ದಾರೆಯೇ ಎಂದು ಖಾತ್ರಿ ಪಡಿಸಿಕೊಳ್ಳಲು ಡಾ. ವಿನೀತ್ ಪುನಿಯಾ ಅವರನ್ನು ಪಿಐಬಿ ಫ್ಯಾಕ್ಟ್‌ಚೆಕ್ ತಂಡ ಸಂಪರ್ಕಿಸಿ ಮಾಹಿತಿ ಪಡೆದಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಕೆ.ಸಿ. ವೇಣುಗೋಪಾಲ್ ಅವರದ್ದು ಎನ್ನಲಾದ ಹೇಳಿಕೆ ನಕಲಿ ಎಂದು ಹೇಳಿದ್ದಾರೆ.
ಒಟ್ಟಾರೆಯಾಗಿ ಹೇಳುವುದಾರೆ, ಮೀಸಲಾತಿ ಅಂತ್ಯಗೊಳಿಸುವ ಬಗ್ಗೆ ಕೆಸಿ ವೇಣುಗೋಪಾಲ್ ಅಂತಹ ಯಾವುದೇ ಹೇಳಿಕೆ ನೀಡಿಲ್ಲ. ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪತ್ರಿಕೆಯ ಕ್ಲಿಪ್ ನಕಲಿಯಾಗಿದೆ. ಹಾಗಾಘಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | ಬಾಂಗ್ಲಾದೇಶಕ್ಕೆ ಭಾರತದಿಂದ ಪೂರೈಕೆಯಾಗುತ್ತಿದ್ದ ವಿದ್ಯುತ್ ಸ್ಥಗಿತ ಮಾಡಲಾಗಿದೆಯೇ?

