FACT CHECK | ಟೆಸ್ಟ್‌ ಕ್ರಿಕೆಟ್‌ ಪಂದ್ಯದ ವೇಳೆ ಬಾಂಗ್ಲಾ ಅಭಿಮಾನಿಯನ್ನು ಟೀಂ ಇಂಡಿಯಾ ಅಭಿಮಾನಿಗಳು ಥಳಿಸಿದ್ದಾರೆ ಎಂಬುದಕ್ಕೆ ಆಧಾರಗಳಿಲ್ಲ

ಭಾರತ ಹಾಗೂ ಬಾಂಗ್ಲಾದೇಶ ಕ್ರಿಕೆಟ್ ತಂಡಗಳ ನಡುವೆ ನಡೆಯುತ್ತಿರುವ ಟೆಸ್ಟ್ ಸರಣಿಯ ಎರಡನೇ ಪಂದ್ಯದ, ಮೊದಲ ದಿನದಾಟವನ್ನು ಸ್ಟಾಂಡ್‌ನಲ್ಲಿ ಕುಳಿತು ವೀಕ್ಷಿಸುತ್ತಿದ್ದ ಬಾಂಗ್ಲಾದೇಶದ ಅಭಿಮಾನಿಯೊಬ್ಬರು ತಮ್ಮ ಮೇಲೆ ಹಲ್ಲೆ ನಡೆದಿದ್ದಾಗಿ ಹೇಳಿದ್ದಾರೆ. ತನ್ನನ್ನು ತಾನು ಸೂಪರ್‌ ಫ್ಯಾನ್ ರಾಬಿ ಎಂದು ಪರಿಚಯಿಸಿಕೊಳ್ಳುವ, ಹುಲಿ ವೇಷ ಧರಿಸಿದ್ದ ವ್ಯಕ್ತಿ, ಗ್ರೀನ್‌ ಪಾರ್ಕ್ ಮೈದಾನದ ‘ಸಿ’ ಸ್ಟ್ಯಾಂಡ್‌ನಲ್ಲಿ ಹಲ್ಲೆಗೊಳಗಾಗಿದ್ದಾಗಿ ಹೇಳಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಮಾಹಿತಿ ಪ್ರಕಾರ ಈತ, ಮೊಹಮ್ಮದ್ ಸಿರಾಜ್ ಅವರನ್ನು ನಿಂದಿಸುತ್ತಿದ್ದ ಎಂದು ಹೇಳಲಾಗಿದ್ದು, ಇದರಿಂದ ಜನರು ಆಕ್ರೋಶಗೊಂಡಿದ್ದಾರೆ. ಅಲ್ಲದೆ ಈತ ಚೆನ್ನೈನಲ್ಲೂ ಟೀಂ ಇಂಡಿಯಾ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದ ಎಂಬ ಆರೋಪವೂ ಇದೆ. ಇದೇ ಕಾರಣಕ್ಕೆ ಅಭಿಮಾನಿಗಳು ಆತನನ್ನು ಥಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಮಾಧ್ಯಮಗಳಲ್ಲಿ ಬಂದಿರುವ ವರದಿಯ ಪ್ರಕಾರ, ಕಾನ್ಪುರ ಟೆಸ್ಟ್ ಪಂದ್ಯದ ವೇಳೆ ಟೈಗರ್ ರಾಬಿ, ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಅವರನ್ನು ನಿಂದಿಸುತ್ತಿದ್ದನ್ನು ನೋಡಿದ ಟೀಂ ಇಂಡಿಯಾ ಫ್ಯಾನ್ಸ್ ಆತನಿಗೆ ಥಳಿಸಿದ್ದಾರೆ ಎಂದು ವರದಿಯಾಗಿದೆ. ಹಾಗಿದ್ದರೆ ಈ ಘಟನೆ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳು ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : 

ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಮುಖ್ಯವಾಹಿನಿ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವಂತೆ, ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ಬಾಂಗ್ಲಾದೇಶದ ಅಭಿಮಾನಿ ಸೂಪರ್ ಫ್ಯಾನ್ ಟೈಗರ್ ರಾಬಿ ಎಂದು ಕರೆಯಲ್ಪಡುವ ವ್ಯಕ್ತಿಯನ್ನು ಟೀಂ ಇಂಡಿಯಾ ಅಭಿಮಾನಿಗಳು ಥಳಿಸಿದ್ದಾರೆ ಎಂಬುದಕ್ಕೆ ಯಾವುದೇ ಆಧಾರಗಳಿಲ್ಲ ಎಂದು ಕಾನ್ಪುರ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಘಟನೆ ಸಂಬಂಧ ಪೊಲೀಸ್ ಕಮಿಷನರ್ ಶ್ರೀ ಅಭಿಷೇಕ್ ಕುಮಾರ್ ಪಾಂಡೆ ಪ್ರತಿಕ್ರಯಿಸಿದ್ದು 27.09.2024 ರಂದು, ಕಾನ್ಪುರದ ಗ್ರೀನ್ ಪಾರ್ಕ್‌ನಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಕ್ರಿಕೆಟ್ ಪಂದ್ಯದ ಸಮಯದಲ್ಲಿ, ಟೈಗರ್ ಎಂದು ಹೇಳಲಾದ ಅಭಿಮಾನಿ ಇದ್ದಕ್ಕಿದ್ದಂತೆ ಅಸ್ವಸ್ಥನಾಗಿದ್ದನು ಸ್ಥಳೀಯ ಪೊಲೀಸ್‌ ಮತ್ತು ನೆರವಿನಿಂದ ವೈದ್ಯಕೀಯ ತಂಡದ ನೆರವಿನಿಂದ ಅವರನ್ನು ಚಿಕಿತ್ಸೆಗಾಗಿ ಕ್ರೀಡಾಂಗಣದಲ್ಲಿರುವ ವೈದ್ಯಕೀಯ ಶಿಬಿರಕ್ಕೆ ಕರೆದೊಯ್ಯಲಾಯಿತು. ನಿರ್ಜಲೀಕರಣದ ಕಾರಣದಿಂದಾಗಿ ರಾಬಿ ಅಸ್ವಸ್ಥರಾಗಿದ್ದರು ಅವರಿಗೆ ಚಿಕಿತ್ಸೆ ನೀಡಲಾಯಿತು. ಪ್ರಸ್ತುತ ಅವರು ಆರೋಗ್ಯವಾಗಿದ್ದಾರೆ ಮತ್ತು ಅವರೊಂದಿಗೆ ಸಂಪರ್ಕ ಅಧಿಕಾರಿಯನ್ನು ಸಹ ನೇಮಿಸಲಾಗಿದೆ, ಇದರಿಂದ ಯಾವುದೇ ಅನಾನುಕೂಲತೆ ಕಂಡುಬಂದಲ್ಲಿ, ಅವರಿಗೆ ತಕ್ಷಣದ ಚಿಕಿತ್ಸೆ ಅಥವಾ ಇತರ ಬೆಂಬಲವನ್ನು ಒದಗಿಸಬಹುದು. ಅವರ ಯಾವುದೇ ಹಲ್ಲೆ ಪ್ರಕರಣ ಪತ್ತೆಯಾಗಿಲ್ಲ ಎಂದಿದ್ದಾರೆ.

ಒಟ್ಟಾರೆಯಾಗಿ ಹೇಳುವದಾದರೆ, ಬಾಂಗ್ಲಾದೇಶದ ಅಭಿಮಾನಿ ಸೂಪರ್‌ ಫ್ಯಾನ್ ರಾಬಿಗೆ ಭಾರತ ಕ್ರಿಕೆಟ್‌ ತಂಡದ ಅಭಿಮಾನಿಗಳು ಥಳಿಸಿದ್ದಾರೆ ಎಂಬ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಪೊಲೀಸ್ ಹೇಳಿಕೆಯ ಪ್ರಕಾರ ಆತ ಆಯಾಸದಿಂದ ಬಳಲಿ ಅಸ್ವಸ್ಥನಾಗಿದ್ದ ಎಂದು ತಿಳಿಸಿದ್ದಾರೆ ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ದೇವರ ತೀರ್ಥವನ್ನು ಎಸೆದು ಕುಡಿದವರಂತೆ ನಟಿಸಿದ್ರಾ ಆಂಧ್ರ ಮಾಜಿ ಸಿಎಂ ? ಈ ಸ್ಟೋರಿ ಓದಿ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights