FACT CHECK | ಸೈಕಲ್‌ನಲ್ಲಿ ಹೋಗುತ್ತಿದ್ದ ವೃದ್ದನ ಮುಖಕ್ಕೆ ನೊರೆಯನ್ನು ಸ್ಪ್ರೇ ಮಾಡಿದ ವ್ಯಕ್ತಿ ಮುಸ್ಲಿಂ ಎಂದು ಸುಳ್ಳು ಪೋಸ್ಟ್ ಹಂಚಿಕೆ
ವಯಸ್ಸಾದ ವ್ಯಕ್ತಿಯೊಬ್ಬರ ಮುಖಕ್ಕೆ ಯುವಕನೊಬ್ಬ ಫೋಮ್‌ಅನ್ನು ಸ್ಪ್ರೇ ಮಾಡುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದೆ. ಉತ್ತರ ಪ್ರದೇಶದ ಝಾನ್ಸಿಯಲ್ಲಿ ಈ ಘಟನೆ ನಡೆದಿದೆ. ಈ ಕುರಿತು ಝಾನ್ಸಿಯ ನವಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಓರ್ವ ಆರೋಪಿಯನ್ನು ಕೂಡ ಬಂಧಿಸಲಾಗಿದೆ. ಇದೀಗ ವೃದ್ಧನ ಮುಖಕ್ಕೆ ಸ್ಪ್ರೇ ಮಾಡಿದ್ದು ಮುಸ್ಲಿಂ ಯುವಕ ಎಂಬ ಹೇಳಿಕೆಯೊಂದಿಗೆ ಅನೇಕ ಪೋಸ್ಟ್ಗಳು ವೈರಲ್ ಆಗುತ್ತಿವೆ.
ಸೆಪ್ಟೆಂಬರ್ 24, 2024 ರಂದು ನಾಗೇಶ್ ಪ್ರೀತಮ್ ಎಂಬ ಸಾಮಾಜಿಕ ಮಾಧ್ಯಮ ಬಳಕೆದಾರರೊಬ್ಬರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡು, ‘‘ಸೈಕಲ್ ಅಲ್ಲಿ ಹೋಗುತ್ತಿದ್ದ ಅಮಾಯಕ ವೃದ್ಧನಿಗೆ ಮುಸ್ಲಿಂ ಯುವಕ ಅನುಚಿತ ವರ್ತನೆ ಯುಪಿ ಪೊಲೀಸರಿಂದ ಭರ್ಜರಿ ಬ್ಯಾಟಿಂಗ್’’ ಎಂದು ಬರೆದುಕೊಂಡಿದ್ದಾರೆ.
ಹಾಗೆಯೆ ಅರುಣ್ ಕುಮಾರ್ ಎಂಬ ಎಕ್ಸ್ ಖಾತೆಯಲ್ಲಿ ಇದೇ ವೀಡಿಯೊ ಅಪ್ಲೋಡ್ ಆಗಿದ್ದು, ‘‘ತನ್ನ ಪಾಡಿಗೆ ಹೋಗುತ್ತಿದ್ದ ಅಮಾಯಕ ವೃದ್ಧನಿಗೆ ಪುಂಡ ಮುಸ್ಲಿಂ ಯುವಕರಿಂದ ಅನುಚಿತ ವರ್ತನೆ. ಆದರೆ ನಂತರ ನಡೆದಿದ್ದು ಯುಪಿ ಪೊಲೀಸರ ಕಾರ್ಯಾಚರಣೆ. ಈ ರೀತಿ ಕರ್ನಾಟಕದಲ್ಲೂ ಆಗಬೇಕು. ಆಗ ಈ ವೀಲಿಂಗ್ ಮಾಡುವ ಮುಸ್ಲಿಂ ಯುವಕರಿಗೆ ಬಿಸಿ ಮುಟ್ಟುತ್ತದೆ.’’ ಎಂದು ಹೇಳಿಕೊಂಡಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್‌ಚೆಕ್ :
ಹಾಗೆಯೆ ಹಿಂದೂಸ್ಥಾನ್ ಟೈಮ್ಸ್ ಕೂಡ ಈ ಬಗ್ಗೆ ವರದಿ ಮಾಡಿರುವುದು ನಮಗೆ ಸಿಕ್ಕಿದೆ. ‘‘ವೃದ್ಧನ ಮುಖಕ್ಕೆ ಸ್ಪ್ರೇ ಮಾಡಿದ್ದ ಯುವಕನನ್ನು ಝಾನ್ಸಿ ಪೊಲೀಸರು ಬಂಧಿಸಿದ್ದಾರೆ. ಫೋಮ್ ಅನ್ನು ಸ್ಪ್ರೇ ಮಾಡಿ ವ್ಯಕ್ತಿಯನ್ನು ಯೂಟ್ಯೂಬರ್ ವಿನಯ್ ಯಾದವ್ ಎಂದು ಗುರುತಿಸಲಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಲು ಈ ರೀತಿಯ ಕುಚೇಷ್ಟೆ ಮತ್ತು ಸಾಹಸಗಳನ್ನು ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ,’’ ಎಂದು ಬರೆಯಲಾಗಿದೆ.
ಇನ್ನು ಝಾನ್ಸಿ ಪೊಲೀಸ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಕೂಡ ಈ ಕುರಿತು ಮಾಹಿತಿ ನೀಡಲಾಗಿದೆ. ಫೋಟೋ, ವೀಡಿಯೊವನ್ನು ಹಂಚಿಕೊಳ್ಳಲಾಗಿದ್ದು ಇದರಲ್ಲಿ ವಿನಯ್ ಯಾದವ್ ಅವರನ್ನು ಪೊಲೀಸ್ ಠಾಣೆಯಿಂದ ಹೊರಗೆ ಕರೆದೊಯ್ಯುತ್ತಿರುವಾಗ ಕುಂಟುತ್ತಿರುವುದನ್ನು ಕಾಣಬಹುದು. ಜೊತೆಗೆ ಪೋಲಿಸ್ ಠಾಣೆಯ ಕಂಬಿಗಳ ಹಿಂದೆ ಕೈಮುಗಿಯುತ್ತಿರುವ ಫೋಟೋ ಇದೆ.
“ರಸ್ತೆಯಲ್ಲಿ ವಯಸ್ಸಾದ ವ್ಯಕ್ತಿಯ ಮುಖದ ಮೇಲೆ ನೊರೆ ಎರಚುತ್ತಿರುವ ವೀಡಿಯೊ ನಮ್ಮ ಗಮನಕ್ಕೆ ಬಂದಿದ್ದು, ನವಾಬಾದ್ ಪೊಲೀಸರು ವಿನಯ್ ಯಾದವ್ ಅವರನ್ನು ಬಂಧಿಸಿದ್ದಾರೆ. ಅವನು ಯೂಟ್ಯೂಬರ್ ಎಂದು ಹೇಳಿಕೊಂಡಿದ್ದಾನೆ. ಅವನ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಝಾನ್ಸಿ ಪೊಲೀಸರು ನೀಡಿರುವ ಹೇಳಿಕೆ ಕೂಡ ಪೋಸ್ಟ್‌ನಲ್ಲಿ ಇದೆ.
ಒಟ್ಟಾರೆಯಾಗಿ ಹೇಳುವುದಾದರೆ, ವೃದ್ಧನೊಬ್ಬನಿಗೆ ಸ್ನೋ ಫೋಮ್ ಸ್ಪ್ರೇ ಮಾಡಿದ್ದು ಮುಸ್ಲಿಂ ಯುವಕ ಎಂಬ ಹೇಳಿಕೆ ಸುಳ್ಳು ವಾಸ್ತವವಾಗಿ ಆರೋಪಿಯ ಹೆಸರು ವಿನಯ್ ಯಾದವ್ ಎಂದು ಪೊಲೀಸರೇ ಖಚಿತ ಪಡಿಸಿದ್ದಾರೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | ಶೇಖರ್ ಆಸ್ಪತ್ರೆ ಬಗ್ಗೆ ವಾಟ್ಸಾಪ್‌ಲ್ಲಿ ಸುಳ್ಳು ಸಂದೇಶ ಹಂಚಿಕೆ