FACT CHECK | ಗೌತಮ್ ಅದಾನಿ ವಿಡಿಯೋವನ್ನು ಎಡಿಟ್ ಮಾಡಿ ಹಂಚಿಕೆ, ಮೂಲ ವಿಡಿಯೋದಲ್ಲಿ ಏನನ್ನು ಹೇಳಿದ್ದಾರೆ ಗೊತ್ತಾ?
“ಅದಾನಿ ಗ್ರೂಪ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷ ಗೌತಮ್ ಅದಾನಿ ಹೂಡಿಕೆಯ ಅವಕಾಶವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮತ್ತು ಅದಾನಿ ಸಂಸ್ಥೆಯಲ್ಲಿ ಹೂಡಿಕೆ ಮಾಡಲು ಜನರಿಗೆ ಪ್ರೇರಣೆಯನ್ನು ನೀಡುವ ದೃಷ್ಟಿಯಿಂದ ಅವರೇ ಪ್ರಚಾರವನ್ನು ಮಾಡುತ್ತಿದ್ದಾರೆ.” ಎಂದು ಗೌತಮ್ ಅದಾನಿ ಮಾತನಾಡುತ್ತಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕಾವಾಗಿ ಹಂಚಿಕೊಳ್ಳಲಾಗುತ್ತಿದೆ.
ಈ ವಿಡಿಯೋದಲ್ಲಿ ಅದಾನಿ ಮಾತನಾಡುತ್ತಿರುವುದನ್ನು ನೋಡಬಹುದಾಗಿದೆ. ಧ್ವನಿ ಕೂಡ ಗೌತಮ್ ಅದಾನಿಗೆ ಹೋಲಿಕೆಯಾಗುತ್ತದೆ. ಹೂಡಿಕೆ ಕ್ಷೇತ್ರದಲ್ಲಿ ಆಸಕ್ತಿ ಇರುವ ಹಲವು ಮಂದಿಗೆ ಈ ವಿಡಿಯೋ ಅಚ್ಚರಿಯನ್ನು ಉಂಟು ಮಾಡಿದ್ದು, ಗೊಂದಲವನ್ನು ಸೃಷ್ಟಿಸಿದೆ. ಹಾಗಿದ್ದರೆ ಈ ವಿಡಿಯೋದ ಅಸಲೀಯತ್ತೇನು ಎಂದು ಪರಿಶೀಲಿಸೋಣ.
ಫ್ಯಾಕ್ಟ್‌ಚೆಕ್ :
ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನ ವಿಡಿಯೋದಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಕೀವರ್ಡ್‌ಗಳನ್ನು ಬಳಸಿ ಸರ್ಚ್ ಮಾಡಿದಾಗ, ಆದರೆ ಈ ಕುರಿತು ಯಾವುದೇ ಸುದ್ದಿಗಳು ಕಂಡು ಬಂದಿಲ್ಲ. ಒಂದು ವೇಳೆ ಅದಾನಿ ಹೂಡಿಕೆಯನ್ನು ಉತ್ತೇಜಿಸಲು ಪ್ರಚಾರ ನಡೆಸಿದ್ದೇ ಆಗಿದ್ದಲ್ಲಿ ಆ ಕುರಿತು ವರದಿಗಳು ಕಂಡು ಬರಬೇಕಿತ್ತು. ಆದರೆ ಅಂತಹ ಯಾವುದೇ ಬೆಳವಣಿಗೆಗಳು ಕಂಡುಬಂದಿಲ್ಲವಾದರಿಂದ ವೈರಲ್ ಪೋಸ್ಟ್ ಹಲವು ಅನುಮಾನಗಳನ್ನು ಮೂಡಿಸಿತ್ತು.
ಹೀಗಾಗಿ ವೈರಲ್ ವಿಡಿಯೋಗೆ ಸಂಬಂಧಿಸಿದಂತೆ ವಿವಿಧ ಕಿ ಪ್ರೇಮ್‌ಗಳನ್ನು ಗೂಗಲ್ ರಿವರ್ಸ್ ಇಮೇಜಿನಲ್ಲಿ ಪರಿಶೀಲನೆ ನಡೆಸಲಾಯಿತು. ಈ ವೇಳೆ ಅದಾನಿ ಗ್ರೂಪ್‌ನ ಅಧಿಕೃತ ಯೂಟ್ಯೂಬ್ ಚಾನಲ್ ಕಂಡು ಬಂದಿದೆ. ಅದರಲ್ಲಿ 2 ಫೆಬ್ರವರಿ 2023 ರಂದು ಹಂಚಿಕೊಳ್ಳಲಾದ ವಿಡಿಯೋವೊಂದು ಕಂಡು ಬಂದಿದೆ. ಇದರಲ್ಲಿ ಎಇಎಲ್ ಮತ್ತು ಎಫ್‌ಪಿಓ ಚಂದದಾರಿಕೆಯನ್ನು ಹೂಡಿಕೆದಾರರು ಸಂಪೂರ್ಣವಾಗಿ ಹಿಂತೆಗೆದುಕೊಂಡ ನಂತರ, ಅವರನ್ನು ಉದ್ದೇಶಿಸಿ ಗೌತಮ್ ಅದಾನಿ ಮಾತನಾಡಿರುವುದು ಕಂಡುಬಂದಿದೆ.
ಆದರೆ ಈ ವಿಡಿಯೋದಲ್ಲಿ ಅದಾನಿ ಮಾತನಾಡಿರುವ ವಿಷಯ ಬೇರೆಯದ್ದೆ ಆಗಿದ್ದು, ವೈರಲ್ ವಿಡಿಯೋದಲ್ಲಿನ ವಿಷಯವು ಬೇರೆಯಾಗಿದೆ ಆದರೆ ವಿಡಿಯೋಗಳಲ್ಲಿ ಹೋಲಿಕೆ ಕಂಡು ಬಂದಿದೆ. ಇನ್ನು ವೈರಲ್ ವಿಡಿಯೋ ಮತ್ತು ಮೂಲ ವಿಡಿಯೋವನ್ನು ಹೋಲಿಕೆ ಮಾಡಿ ನೋಡಿದಾಗ, ಲಿಪ್ ಸಿಂಕಿಂಗ್ ಆಗದಿರುವುದು ಕಂಡು ಬಂದಿದೆ. ಹೀಗಾಗಿ ಹಿಯಾ ಎಇ ವಾಯ್ಸ್ ಡಿಟೆಕ್ಟರ್‌ನಲ್ಲಿ ಪರಿಶೀಲನೆಯನ್ನು ನಡೆಸಿದಾಗ, ಅದಾನಿ ದ್ವನಿಯನ್ನು ನಕಲು ಮಾಡಿ, ಹಳೆಯ ವಿಡಿಯೋದೊಂದಿಗೆ ಹೊಂದಿಸಿ ಹಂಚಿಕೊಳ್ಳಲಾಗಿದೆ ಎಂಬುದು ಸ್ಪಷ್ಟವಾಗಿದೆ.
ಒಟ್ಟಾರೆಯಾಗಿ ಹೇಳುವುದಾದರೆ, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಂತೆ, ಅದನಿ ಗ್ರೂಪ್‌ನಲ್ಲಿ ಹೂಡಿಕೆ ಮಾಡುವಂತೆ ಗೌತಮ್ ಅದಾನಿ ವ್ಯಾಪಕವಾಗಿ ಪ್ರಚಾರ ನಡೆಸಿದ್ದಾರೆ ಎಂಬ ಎಡಿಟ್ ಮಾಡಿದ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | ಹಿಜ್ಬುಲ್ಲಾ ಭಯೋತ್ಪಾದಕರ ಮೇಲೆ ಇಸ್ರೇಲ್ ನಡೆಸಿದ ದಾಳಿ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ