FACT CHECK | ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಪ್ರಧಾನಿ ಮೋದಿಯನ್ನು ‘ಜಿಯೋನಿಸ್ಟ್ ಗುಲಾಮ’ ಎಂದು ಕರೆದಿದ್ದು ನಿಜವೇ?

ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಇತ್ತೀಚೆಗೆ ನ್ಯೂಯಾರ್ಕ್‌ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಇಸ್ರೇಲ್ ಯುದ್ಧವನ್ನು “ನಮ್ಮ ಯುಗದ ಅತ್ಯಂತ ಘೋರ ಅಪರಾಧಗಳಲ್ಲಿ ಒಂದಾಗಿದೆ” ಎಂದು ಕರೆದರು. ತನ್ನ ಭಾಷಣದಲ್ಲಿ, ಅಬ್ಬಾಸ್ ಗಾಜಾದಲ್ಲಿ ಶಾಶ್ವತ ಕದನ ವಿರಾಮ ಮತ್ತು ವೆಸ್ಟ್ ಬ್ಯಾಂಕ್ ಮತ್ತು ಪೂರ್ವ ಜೆರುಸಲೆಮ್‌ನಲ್ಲಿ ಮಿಲಿಟರಿ ಆಕ್ರಮಣಗಳನ್ನು ಕೊನೆಗೊಳಿಸಬೇಕೆಂದು ಕರೆ ನೀಡಿದರು.

ಇದೀಗ, ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ವೊಂದು ವೈರಲ್ ಆಗುತ್ತಿದ್ದು ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರು ಪ್ರಧಾನಿ ನರೇಂದ್ರ ಮೋದಿಯನ್ನು “ಜಿಯೋನಿಸ್ಟ್ ಗುಲಾಮ” ಎಂದು ಕರೆದಿದ್ದಾರೆ ಎಂದು ಪ್ರತಿಪಾದಿಸಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.

Mahmoud Abbas Zionist Slave Fact Check

ಇದೇ ಪ್ರತಿಪಾದನೆಯೊಂದಿಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಪ್ರತಿಪಾದಿಸಿದಂತೆ ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರು ಪ್ರಧಾನಿ ನರೇಂದ್ರ ಮೋದಿಯನ್ನು ಜಿಯೋನಿಸ್ಟ್ ಗುಲಾಮ ಎಂದು ಸಂಭೋದಿಸಿದ್ದಾರೆಯೇ ಎಂಬ ಆರೋಪ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ಸರ್ಚ್ ಮಾಡಿದಾಗ, ಮೇಲಿನ ವೈರಲ್ ಪೋಸ್ಟ್‌ಅನ್ನು ಬೆಂಬಲಿಸುವ ಯಾವುದೇ ವರದಿಗಳು ಲಭ್ಯವಾಗಿಲ್ಲ. ಇದಕ್ಕೆ ವ್ಯತಿರಿಕ್ತವಾಗಿ ಪ್ರಧಾನಿ ಮೋದಿಯವರ X ಹ್ಯಾಂಡಲ್‌ನಲ್ಲಿ ಸೆಪ್ಟೆಂಬರ್ 23, 2024 ರ ಪೋಸ್ಟ್ ಲಭ್ಯವಾಗಿದ್ದು, ಪೋಸ್ಟ್‌ನಲ್ಲಿ ಪ್ರಧಾನಿ ಮೋದಿ ಪ್ಯಾಲೆಸ್ತೀನ್ ಅಧ್ಯಕ್ಷರೊಂದಿಗೆ ಇರುವ ಚಿತ್ರ ಲಭ್ಯವಾಗಿದೆ.

ಫೋಟೋಗಳನ್ನು ಹಂಚಿಕೊಂಡ ಪ್ರಧಾನಿ ಮೋದಿ ಹೀಗೆ ಬರೆದಿದ್ದಾರೆ: “ನ್ಯೂಯಾರ್ಕ್‌ನಲ್ಲಿ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರನ್ನು ಭೇಟಿಯಾಗಿ, ಇಸ್ರೇಲ್ ಮತ್ತು ಪ್ಯಾಲಸ್ತೇನ್‌ನಡುವೆ ನಡೆಯುತ್ತಿರುವ ಯುದ್ದ ಕೊನೆಗಾಣಬೇಕಿದ್ದು, ಶಾಂತಿ ಮತ್ತು ಸ್ಥರತೆಯ ಮರುಸ್ಥಾಪನೆಯನ್ನು ಭಾರತ ಬೆಂಬಲಿಸುತ್ತದೆ. ಪ್ಯಾಲೆಸ್ಟೈನ್ ಜನರೊಂದಿಗೆ ದೀರ್ಘಕಾಲದ ಸ್ನೇಹವನ್ನು ಮತ್ತಷ್ಟು ಬಲಪಡಿಸುವ ದೃಷ್ಟಿಕೋನಗಳನ್ನು ವಿನಿಮಯ ಮಾಡಿಕೊಂಡರು ಎಂಬ ಮಾಹಿತಿ ಲಭ್ಯವಾಗಿದೆ.

ಇದಲ್ಲದೆ,  Hindustan Times & NDTV  ಸೇರಿದಂತೆ ಹಲವು ಮಾಧ್ಯಮಗಳು ಈ ವಿಷಯದಲ್ಲಿ ಸುದ್ದಿಯನ್ನು ಪ್ರಕಟಿಸಿವೆ. ಈ ವರದಿಗಳ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಪ್ರಸ್ತುತ ಇಸ್ರೇಲ್-ಗಾಜಾ ಸಂಘರ್ಷದ ನಂತರ ಭಾನುವಾರ ಮೊದಲ ಬಾರಿಗೆ ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರನ್ನು ಭೇಟಿ ಮಾಡಿದರು ಮತ್ತು ಗಾಜಾದಲ್ಲಿ ತೆರೆದುಕೊಳ್ಳುತ್ತಿರುವ ಮಾನವೀಯ ಬಿಕ್ಕಟ್ಟು ಮತ್ತು ಪ್ರದೇಶದಲ್ಲಿ ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿಯ ಬಗ್ಗೆ ತೀರ್ವ ಕಳವಳ ವ್ಯಕ್ತಪಡಿಸಿದರು ಮತ್ತು ಮುಂದುವರಿದ ಪ್ಯಾಲೆಸ್ತೀನ್ ಜನರಿಗೆ ನೆರವು ನೀಡಲು ಭಾರತದ ಬೆಂಬಲವನ್ನು ಪುನರುಚ್ಚರಿಸಿದರು.

Mahmoud Abbas Zionist Slave Fact Check 2

ಸೆಪ್ಟೆಂಬರ್ 23 ರಂದು ಪ್ರಕಟವಾದ The Economic Times ಪ್ರಕಾರ,ಗಾಜಾದಲ್ಲಿನ ಮಾನವೀಯ ಪರಿಸ್ಥಿತಿಯ ಬಗ್ಗೆ ಪ್ರಧಾನಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಪ್ಯಾಲೆಸ್ತೀನ್ ಜನರಿಗೆ ಭಾರತದ ನಿರಂತರ ಬೆಂಬಲವನ್ನು ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದು ವರದಿಯಾಗಿದೆ.ಇಸ್ರೇಲ್ ಮೇಲೆ ಹಮಾಸ್ ನಡೆಸಿದ ಭೀಕರ ಭಯೋತ್ಪಾದಕ ದಾಳಿಯನ್ನು ಖಂಡಿಸಿದ ಮೊದಲ ಜಾಗತಿಕ ನಾಯಕರಲ್ಲಿ ಮೋದಿ ಒಬ್ಬರು. ಗಾಜಾದಲ್ಲಿ ಹದಗೆಡುತ್ತಿರುವ ಪರಿಸ್ಥಿತಿಯ ಬಗ್ಗೆ ಭಾರತ ಪದೇ ಪದೇ ಕಳವಳ ವ್ಯಕ್ತಪಡಿಸಿದೆ ಎಂದು ಉಲ್ಲೇಖಿಸಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರು ಭಾರತೀಯ ಪ್ರಧಾನಿ ಮೋದಿಯನ್ನು ‘ಜಿಯೋನಿಸ್ಟ್ ಗುಲಾಮ’ ಎಂದು ಕರೆದಿದ್ದಾರೆ ಎಂಬ ವೈರಲ್ ಹೇಳಿಕೆಯು ಸಂಪೂರ್ಣವಾಗಿ ನಕಲಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಯಾರ್ಕ್‌ನಲ್ಲಿ ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರನ್ನು ಭೇಟಿ ಮಾಡಿದರು, ಗಾಜಾ ಬಿಕ್ಕಟ್ಟಿನ ಬಗ್ಗೆ ಕಳವಳ ವ್ಯಕ್ತಪಡಿಸಿದರು ಮತ್ತು ಪ್ಯಾಲೆಸ್ತೀನ್‌ಗೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದರು. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ | FACT CHECK | ಕರ್ನಾಟಕದಲ್ಲಿ ಪೊಲೀಸ್‌ಗೆ ಚಪ್ಪಲಿಯಿಂದ ಹೊಡೆದ ಮುಸ್ಲಿಂ ಮಹಿಳೆ ಎಂಬ ವಿಡಿಯೋದ ಅಸಲೀಯತ್ತೇನು ಗೊತ್ತೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights