FACT CHECK | ರತನ್ ಟಾಟಾ ಆರೋಗ್ಯದ ಬಗ್ಗೆ ತಪ್ಪು ಮಾಹಿತಿ ಹರಡಿದ ಮಾಧ್ಯಮಗಳು

ಭಾರತದ ಹಿರಿಯ ಉದ್ಯಮಿ ರತನ್ ಟಾಟಾ ಆರೋಗ್ಯ ಪರಿಸ್ಥಿತಿ ಹದಗೆಟ್ಟು ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ. ರಕ್ತದೊತ್ತಡದಲ್ಲಿ ಗಣನೀಯವಾಗಿ ಇಳಿಕೆಯಾಗಿದ್ದರಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ.

 

 

 

 

 

 

 

 

 

 

ಕೈಗಾರಿಕೋದ್ಯಮಿ ಮತ್ತು ಲೋಕೋಪಕಾರಿ ರತನ್ ಟಾಟಾ ಅವರನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಇತ್ತೀಚಿನ ವರದಿಗಳು ಸೂಚಿಸಿವೆ ಎಂದು ಪೋಸ್ಟರ್‌ವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ  ಹಂಚಿಕೊಳ್ಳಲಾಗುತ್ತಿದೆ.ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ರತನ್ ಟಾಟಾ ಅವರ ಆರೋಗ್ಯ ಸ್ಥಿತಿ ಗಂಭೀರವಾದ್ದರಿಂದ ಅವರನ್ನು ಕೂಡಲೇ ಐಸಿಯುಗೆ ದಾಖಲಿಸಲಾಗಿದೆ ಎಂಬ ವರದಿಗಳು ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿತ್ತು. ಈ ಎಲ್ಲ ವರದಿಗಳಲ್ಲಿ ಹೆಚ್ಚಿನವು ಮಿಡ್-ಡೇ ಪ್ರಕಟಿಸಿದ ಲೇಖನದಿಂದ ಪತ್ತೆಯಾಗಿವೆ. ಇದು ಆಸ್ಪತ್ರೆಯ ಮೂಲಗಳಲ್ಲಿ ರತನ್ ಟಾಟಾರವರು ವಯೋಸಹಜವಾಗಿ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಹೃದ್ರೋಗ ತಜ್ಞ ಡಾ. ಶಾರುಖ್ ಅಸ್ಪಿ ಗೋಲ್​ವಾಲ ಅವರ ಮಾರ್ಗದರ್ಶನದಲ್ಲಿ ಟಾಟಾಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕೆಲ ವರದಿಗಳು ಹೇಳಿವೆ. ಈ ಹಿನ್ನೆಲೆಯಲ್ಲಿ ರತನ್ ಟಾಟಾ ತಾವೇ ಖುದ್ದಾಗಿ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಆರೋಗ್ಯದ ಬಗ್ಗೆ ಅಪ್​ಡೇಟ್ ನೀಡಿದ್ದಾರೆ.

 

 

 

 

 

 

 

 

 

 

 

ಮಿಡ್-ಡೇ ವರದಿಯ ಪ್ರಕಾರ, ರಕ್ತದೊತ್ತಡದಲ್ಲಿ ತೀವ್ರ ಕುಸಿತ ಉಂಟಾಗಿ ಟಾಟಾ ಅವರನ್ನು 12:30 AM ಮತ್ತು 1:00 AM ನಡುವೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ತಕ್ಷಣವೇ ಅವರನ್ನು ಐಸಿಯುಗೆ ದಾಖಲಿಸಲಾಗಿದೆ. ಹೃದ್ರೋಗ ತಜ್ಞ ಡಾ.ಶಾರುಖ್ ಆಸ್ಪಿ ಗೋಲ್ವಾಲ್ಲಾ ಅವರ ನೇತೃತ್ವದ  ತಂಡವು ಪ್ರಸ್ತುತ ಅವರ ಚಿಕಿತ್ಸೆಯ ಮೇಲ್ವಿಚಾರಣೆಯನ್ನು ನಡೆಸುತ್ತಿದೆ.

 

 

 

 

 

 

 

 

 

 

ಈ ವೈರಲ್‌ ಪೋಸ್ಟರ್‌ ಕುರಿತು ಮತ್ತಷ್ಟು ಹುಡುಕಿದಾಗ, ಈ ವೈರಲ್‌ ಸುದ್ದಿಯ ರಾಷ್ಟ್ರೀಯ ಮುಖ್ಯಾಂಶಗಳನ್ನು ತಯಾರಿಸಿದ ಕೆಲವೇ ಗಂಟೆಗಳ ನಂತರ, ರತನ್ ಟಾಟಾರವರು ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ತಮ್ಮ ಗಂಭೀರ ಸ್ಥಿತಿಯ ಕುರಿತು ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ತಮ್ಮ ವಯೋಸಹಜ ಆರೋಗ್ಯಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ತಪಾಸಣೆಗೆ ಹೋಗಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡಬೇಡಿ ಎಂದು ಭರವಸೆ ನೀಡಿದ್ದಾರೆ.

 

View this post on Instagram

 

A post shared by Ratan Tata (@ratantata)

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ರತನ್‌ ಟಾಟಾ, ‘ನಾನು ಮುಂಬೈನ ಆಸ್ಪತ್ರೆಯೊಂದರಲ್ಲಿ ದಾಖಲಾಗಿರುವುದು ಸುಳ್ಳು. ವಯೋ ಸಂಬಂಧ ವೈದ್ಯಕೀಯ ತಪಾಸಣೆಗೆ ಒಳಗಾಗಿರುವೆ. ನಾನು ಆರೋಗ್ಯವಾಗಿದ್ದೇನೆ. ಸಾರ್ವಜನಿಕರು ಮತ್ತು ಮಾಧ್ಯಮಗಳು ತಪ್ಪು ಮಾಹಿತಿ ಹರಡಬೇಡಿ’ ಎಂದು ಹೇಳಿದ್ದಾರೆ.

 

ಒಟ್ಟಾರೆಯಾಗಿ ಹೇಳುವುದಾದರೆ, ರತನ್ ಟಾಟಾರವರೇ ತಮ್ಮ ಆರೋಗ್ಯ ಸ್ಥಿತಿಯ ಬಗ್ಗೆ ಅಪ್‌ಡೆಟ್‌ ನೀಡಿದ್ದು, ಮಾಧ್ಯಮಗಳ ವರದಿಗಳು ಆಧಾರರಹಿತವಾಗಿವೆ ಎಂದಿದ್ದಾರೆ. ತಮ್ಮ ವಯೋಸಹಜ ಆರೋಗ್ಯಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ತಪಾಸಣೆಗೆ ಹೋಗಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡಬೇಡಿ, ಮಾಧ್ಯಮಗಳು ತಪ್ಪು ಮಾಹಿತಿ ಹರಡಬೇಡಿ ಎಂದು ವಿನಂತಿಸಿದ್ದಾರೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಕಾರ್ಯಾಚರಣೆ ಮಾಡಿದ 22 ಮೆಟ್ರೋ ರೈಲನ್ನು ಭಾರತ ತಯಾರಿಸಿದೆಯೇ? ಈ ಸ್ಟೋರಿ ಓದಿ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights