FACT CHECK | ಮಹಾರಾಷ್ಟ್ರದ ಕೊಲ್ಹಾಪುರಕ್ಕೆ ರೋಹಿಂಗ್ಯಾ ಮುಸ್ಲಿಮರು ಅಕ್ರಮವಾಗಿ ಪ್ರವೇಶಿದ್ದಾರೆ ಎಂಬುದು ಸುಳ್ಳು

ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ರೋಹಿಂಗ್ಯಾ ಮುಸ್ಲಿಮರನ್ನು ಸಾಗಿಸುತ್ತಿದ್ದ ಟ್ರಕ್ ವೊಂದು ಸಿಕ್ಕಿಬಿದ್ದಿದೆ. ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸುತ್ತಿದ್ದವರನ್ನು ಪೊಲೀಸರು ಹಿಡಿದಿದ್ದಾರೆ ಎಂದು ಪ್ರತಿಪಾದಿಸಿ ಹಂಚಿಕೊಂಡ ಪೋಸ್ಟ್‌ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

6 ಅಕ್ಟೋಬರ್ 2024ರಂದು ನಾಗೇಶ್ ಪ್ರೀತಂ ಎಂಬ ಫೇಸ್‌ಬುಕ್ ಬಳಕೆದಾರರು ಇದೇ ವಿಡಿಯೋವನ್ನು ಹಂಚಿಕೊಳ್ಳುತ್ತಾ  ‘‘ಬಾಂಗ್ಲಾದೇಶದಿಂದ ಬಂದ ಐವತ್ತಕ್ಕೂ ರೋಹಿಣಿ ಮುಸ್ಲಿಮರನ್ನು ಸಿನಿಮಾ ರೀತಿ ಬಂಧಿಸಿದ ಮಹಾರಾಷ್ಟ್ರ ಪೊಲೀಸರು’’ ಎಂದು ಬರೆದುಕೊಂಡಿದ್ದಾರೆ.

“ದೇಶದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ರೋಹಿಂಗ್ಯಾ ಮುಸ್ಲಿಮರು ಹಾಗೂ ಮುಸ್ಲಿಂ ಬಾಲಕರನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ತಡೆ ಹಿಡಿದು ಅದರಲ್ಲಿದ್ದ ರೋಹಿಂಗ್ಯಾ ಮುಸಲ್ಮಾನರನ್ನು ಬಂಧಿಸಿ ಟ್ರಕ್‌ ವಶಪಡಿಸಿಕೊಳ್ಳುವ ಮೂಲಕ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಪೊಲೀಸರು ಪ್ರಮುಖ ಒಳನುಸುಳುವಿಕೆ ಘಟನೆಯನ್ನು ವಿಫಲಗೊಳಿಸಿದ್ದಾರೆ” ಎಂದು ವಿವಿಧ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ವೈರಲ್ ವೀಡಿಯೊ ಕ್ಲಿಪ್‌ನಲ್ಲಿ, ಹಲವಾರು ಮುಸ್ಲಿಂ ಬಾಲಕರು ಪೊಲೀಸರ ಸಮ್ಮುಖದಲ್ಲಿ ಟ್ರಕ್‌ನಿಂದ ಹೊರಬರುವುದನ್ನು ಕಾಣಬಹುದಾಗಿದೆ. ಹಾಗಾಗಿ ವಿಡಿಯೋ ಕೂಡ ವೈರಲ್‌ ಆಗಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights