FACT CHECK | 2018 ರಲ್ಲಿ ಕಲಬುರ್ಗಿಯಲ್ಲಿ ನಡೆದ ರಾಮನವಮಿ ಮೆರವಣಿಗೆಯ ವಿಡಿಯೋವನ್ನು ಎಡಿಟ್‌ ಮಾಡಿ ಕೋಮು ನಿರೂಪಣೆಯೊಂದಿಗೆ ಹಂಚಿಕೆ

ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ವೊಂದು ವೈರಲ್ ಆಗುತ್ತಿದ್ದು, ಮುಸ್ಲಿಮರು ‘ಪಾಕಿಸ್ತಾನ್ ಜಿಂದಾಬಾದ್’ ಎಂಬ ಘೋಷಣೆಗಳನ್ನು ಕೂಗಿದ್ದಕ್ಕೆ ಪ್ರತಿಯಾಗಿ ಮಸೀದಿಯೊಂದರ ಹೊರಗೆ ಹಿಂದೂಗಳು ಕೇಸರಿ ಧ್ವಜವನ್ನು ಪ್ರದರ್ಶಿಸಿ ಮುಸ್ಲಿಮರಿಗೆ ಎಚ್ಚರಿಕೆ ನೀಡಿರುವ ದೃಶ್ಯಗಳು ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಫೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ.

“ಇತ್ತೀಚೆಗೆ ಉಜ್ಜಯಿನಿ ನಗರದಲ್ಲಿ ನಡೆದ ಮುಕ್ಕರಂ ಮೆರವಣಿಗೆಯಲ್ಲಿ ಮುಸ್ಲಿಮರು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆಗಳನ್ನು ಕೂಗಿದ್ದರು. ಮರುದಿನ ನಗರದ ಎಲ್ಲಾ ಹಿಂದೂಗಳು ಕೇಸರಿ ಧ್ವಜಗಳನ್ನು ಹಿಡಿದು ಮಸೀದಿಯ ಮುಂದೆ ಜಮಾಯಿಸಿ, ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆಗಳನ್ನು ಕೂಗುವವರು ಇಲ್ಲಿ ಉಳಿಯಬಾರದು, ಪಾಕಿಸ್ತಾನಕ್ಕೆ ಹೋಗಬೇಕು ಎಂದು  ಪ್ರತಿಭಟಿಸಿ, ಕಿಡಿಗೇಡಿ ದೇಶದ್ರೋಹಿಗಳನ್ನು ನೋಡಿ ಭಾರತದಲ್ಲಿ ತಿಂದು ಪಾಕಿಸ್ತಾನದ ಪರವಾಗಿ ಮಾತನಾಡುತ್ತಾರೆ? ಇಂತಹವರಿಗೊಂದು ಎಚ್ಚರಿಕೆ ನೀಡೋಣ.ಎದ್ದೇಳಿ ಹಿಂದೂಗಳೇ ಎದ್ದೇಳಿ ಎಂದು ಹಿಂದೂ ಸೇನಾ ಎಂಬ ಎಕ್ಸ್‌ ಖಾತೆಯಿಂದ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.

‘ಪಾಕಿಸ್ತಾನ್ ಜಿಂದಾಬಾದ್’ ಎಂದು ಮುಸ್ಲಿಮರು ಘೋಷಣೆ ಕೂಗಿದಕ್ಕೆ, ಸಾವಿರಾರು ಹಿಂದೂಗಳು ಮಸೀದಿಯ ಮುಂದೆ ಜಮಾಯಿಸಿ ಎಚ್ಚರಿಕೆ ನೀಡಿದ ಘಟನೆ ಮಧ್ಯಪ್ರದೇಶದ ಉಜ್ಜನಿಯಿಂದ ವರದಿಯಾಗಿದೆ ಎಂದು ಪ್ರತಿಪಾದಿಸಿ ಹಂಚಿಕೊಳ್ಳಲಾಗುತ್ತಿರುವ ವಿಡಿಯೋದ ಸತ್ಯಾಸತ್ಯೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ವಿಡಿಯೋದಲ್ಲಿ ಮಾಡಲಾದ ಪ್ರತಿಪಾದನೆಯಂತೆ, ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಮುಸ್ಲಿಮರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆಯೇ ಎಂದು ಪರಿಶೀಲಿಸಲು ಕೀವರ್ಡ್ ಮೂಲಕ ಗೂಗಲ್ ಸರ್ಚ್ ಮಾಡಿದಾಗ, ಇತ್ತೀಚೆಗೆ ಅಂತಹ ಘಟನೆಗಳು ವರದಿಯಾದ ಯಾವುದೇ ವಿವರಗಳು ಲಭ್ಯವಾಗಿಲ್ಲ. ಒಂದು ವೇಳೆ ಅಂತಹ ಘೋಷಣೆ ಕೂಗಿರುವುದು ನಿಜವೇ ಆಗಿದ್ದರೆ ಅಂತಹವರ ವಿರುದ್ದ ದೂರು ನೀಡಿ ಎಫ್‌ಐಆರ್ ಮಾಡಿಸಬೇಕಿತ್ತು. ಆದರೆ ಅಂತಹ ಬೆಳವಣಿಗೆಗೆಳು ಕಂಡುಬಂದಿಲ್ಲ.

ಹಾಗಿದ್ದರೆ ವೈರಲ್ ವಿಡಿಯೋ ವಾಸ್ತವವಾಗಿ ಎಲ್ಲಿಯದ್ದು ಎಂದು ಪರಿಶೀಲಿಸಲು ವಿಡಿಯೋದ ಕೀ ಫ್ರೇಮ್‌ಗಳನ್ನು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, 2018 ರಲ್ಲಿ ‘NCB ಕ್ರಿಯೇಷನ್’ ಹೆಸರಿನ YouTube ಚಾನಲ್‌ನಲ್ಲಿ ಅಪ್‌ಲೋಡ್ ಮಾಡಿದ ವಿಡಿಯೋ ಲಭ್ಯವಾಗಿದ್ದು , ವಿಡಿಯೋದೊಂದಿಗೆ ನೀಡಲಾದ ಮಾಹಿತಿಯ ಪ್ರಕಾರ, ಇದು ಕರ್ನಾಟಕದ ಗುಲ್ಬರ್ಗಾದಲ್ಲಿ ರಾಮ ನವಮಿಯ ಸಂದರ್ಭದಲ್ಲಿ ತೆಗೆದ ರ್ಯಾಲಿಯಾಗಿದೆ. ಆದರೆ, ವೈರಲ್ ಆಗಿರುವ ವಿಡಿಯೋ ಪೋಸ್ಟ್‌ನಲ್ಲಿ ಪ್ರತಿಪಾದಿಸಿದಂತೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಲಾಗಿಲ್ಲ.

2018 ರಲ್ಲಿ ಕರ್ನಾಟಕದ ಕಲಬುರ್ಗಿ (ಗುಲ್ಬರ್ಗಾ) ಯಲ್ಲಿ ಆಯೋಜಿಸಲಾದ ರಾಮನವಮಿಯ ಸಂದರ್ಭದಲ್ಲಿ ನಡೆದ ಮೆರವಣಿಗೆಯಮ ದೃಶ್ಯಗಳನ್ನು, ಮಧ್ಯಪ್ರದೇಶದ ಉಜ್ಜಯಿನಿಯ ಮಸೀದಿಯಲ್ಲಿ ಮುಸ್ಲಿಮರು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದಕ್ಕೆ ಪ್ರತಿಯಾಗಿ ಹಿಂದೂಗಳು ಮಸೀದಿ ಮುಂಭಾಗದಲ್ಲಿ ನಡೆಸಿದ ಮೆರವಣಿಗೆ ಎಂದು ಪ್ರಚೋದನಕಾರಿ ಕೋಮು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

vishvasnews

ಒಟ್ಟಾರೆಯಾಗಿ ಹೇಳುವುದಾದರೆ, ಕರ್ನಾಟಕದ ಕಲಬುರಗಿಯಲ್ಲಿ 6 ವರ್ಷಗಳ ಹಳೆಯ ವಿಡಿಯೋವನ್ನು ಕೆಲವು ಬಲಪಂಥೀಯ ಸಾಮಾಜಿಕ ಮಾಧ್ಯಮಗಳು ಮೂಲ ವಿಡಿಯೋವನ್ನು ಎಡಿಟ್‌ ಮಾಡಿ ಆಡಿಯೊವನ್ನು ಸೇರಿಸುವ ಮೂಲಕ ಮರುಹಂಚಿಕೆ ಮಾಡುತ್ತಾ, ಮಧ್ಯಪ್ರದೇಶದ ಉಜ್ಜಯಿನಿ ಮಸೀದಿಯಿಂದ ಮುಸ್ಲಿಮರು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆಗಳಿಗೆ ಪ್ರತಿಯಾಗಿ ನಡೆದ ಮೆರವಣಿಗೆ ಎಂದು ಕೋಮು ಪ್ರಚೋದನೆಯೊಂದಿಗೆ ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ದುರ್ಗಾ ಮಾತೆಯ ಮೂರ್ತಿಯನ್ನು ಧ್ವಂಸ ಮಾಡಿದ್ದು ಮುಸ್ಲಿಮರಲ್ಲ ! ಮತ್ತ್ಯಾರು?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights