FACT CHECK | ಪಾಕಿಸ್ತಾನದ 2021ರ ಹಳೆಯ ಘಟನೆಯನ್ನು ಇತ್ತೀಚಿನದ್ದು ಎಂದು ತಪ್ಪಾಗಿ ಹಂಚಿಕೆ

ವ್ಯಕ್ತಿಯೊಬ್ಬ ಮಹಿಳೆ ಹಾಗೂ ಆಕೆಯ ಸಂಗಾತಿಯ ಮೇಲೆ ಕೊಠಡಿಯೊಂದರಲ್ಲಿ ಹಲ್ಲೆ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ. ಲಾಹೋರ್‌ನಲ್ಲಿ ನಡೆದ ಅತ್ಯಾಚಾರದ ವಿರುದ್ಧದ ಪ್ರತಿಭಟನೆಯಲ್ಲಿ ದಂಪತಿಗಳು ಭಾಗವಹಿಸಿದ್ದಕ್ಕಾಗಿ ಮರ್ಯಮ್ ನವಾಜ್ ಸರ್ಕಾರದ ಶಿಕ್ಷಣ ಸಚಿವ ರಾಣಾ ಸಿಕಂದರ್ ಹಯಾತ್ ದಂಪತಿಗಳ ಮೇಲೆ ಹಲ್ಲೆ ಮಾಡಿರುವ ವಿಡಿಯೋ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ.

 

 

 

 

 

 

 

 

 

 

 

 

 

 

 

ಮತ್ತೊಬ್ಬ ಸೋಶಿಯಲ್ ಮೀಡಿಯಾ ಬಳಕೆದಾರರೊಬ್ಬರು ವೀಡಿಯೊವನ್ನು ಹಂಚಿಕೊಂಡು“ಇಡೀ ಜಗತ್ತನ್ನು ಬೆಚ್ಚಿಬೀಳಿಸಿದ ಪಾಕಿಸ್ತಾನದಿಂದ ಒಂದು ಘಟನೆ ಹೊರಬಂದಿದೆ. ಮರಿಯಮ್ ನವಾಜ್ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದ ರಾಣಾ ಸಿಕಂದರ್ ಹಯಾತ್ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ದಂಪತಿಗಳ ಮನೆಗೆ ಹೋಗಿ ಕ್ಯಾಮೆರಾ ಮುಂದೆ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಆ ಹುಡುಗಿ ಮತ್ತು ಅವಳ ಸಂಗಾತಿಯ ಅಪರಾಧವೆಂದರೆ ಅವರು ಲಾಹೋರ್ ವಿಶ್ವವಿದ್ಯಾಲಯದಲ್ಲಿ ಹುಡುಗಿಯ ಅತ್ಯಾಚಾರದ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಪಾಕಿಸ್ತಾನದ ಮುಸ್ಲಿಂ ಸಚಿವರೊಬ್ಬರು ಕ್ಯಾಮೆರಾ ಮುಂದೆ ಮುಸ್ಲಿಂ ಮಹಿಳೆಯನ್ನು ಬಹಿರಂಗವಾಗಿ ಅತ್ಯಾಚಾರ ಮಾಡಬಹುದು ಎಂದು ಈಗ ನೀವು ಯೋಚಿಸುತ್ತೀರಿ, ಹಾಗಾದರೆ ಈ ವಿಕೃತ ಮನಸ್ಥಿತಿ ಹಿಂದೂಗಳಿಗೆ ಏನು ಮಾಡಬಹುದು..!!” ಎಂದು ಆರೋಪಿಸಲಾಗಿದೆ.

ಇದೇ ಪ್ರತಿಪಾದನೆಯೊಂದಿಗೆ ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಪೋಸ್ಟ್‌ಅನ್ನು ಹಂಚಿಕೊಂಡಿದ್ದು, ಈ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಮಾರ್ಚ್ 25, 2022 ರ ಎಆರ್‌ವೈ ನ್ಯೂಸ್ ವರದಿ ಲಭ್ಯವಾಗಿದೆ, ಇಸ್ಲಾಮಾಬಾದ್‌ನಲ್ಲಿ ನಡೆದ ಈ ಹಳೆಯ ಘಟನೆಯ ಆರೋಪಿ ಉಸ್ಮಾನ್ ಮಿರ್ಜಾ ಸೇರಿದಂತೆ ಐವರು ಆರೋಪಿಗಳಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.

ಜೂನ್ 21, 2023 ರ 92 ನ್ಯೂಸ್ ವರದಿಯ ಪ್ರಕಾರ, ಉಸ್ಮಾನ್ ಮಿರ್ಜಾ ಪ್ರಕರಣದಲ್ಲಿ ಕೆಳ ನ್ಯಾಯಾಲಯದ ತೀರ್ಪನ್ನು ಇಸ್ಲಾಮಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ.

ಮತ್ತೊಂದು ವರದಿಯ ಪ್ರಕಾರ, ಘಟನೆಯ ವೀಡಿಯೊ ಹೊರಬಂದ ನಂತರ, ಅಂದಿನ ಪ್ರಧಾನಿ ಇಮ್ರಾನ್ ಖಾನ್ ಇಸ್ಲಾಮಾಬಾದ್‌ನ ಐಜಿ (ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್) ಅವರನ್ನು ಭೇಟಿಯಾಗಿ ಈ ವಿಷಯದ ಬಗ್ಗೆ ಮಾಹಿತಿ ಪಡೆದರು ಮತ್ತು ನಂತರ ಪ್ರಕರಣದ ಐದನೇ ಆರೋಪಿಯನ್ನು ಸಹ ಬಂಧಿಸಲಾಯಿತು.

Dawn.com ವೆಬ್ಸೈಟ್‌ನಲ್ಲಿನ ಮಾರ್ಚ್ 26, 2022 ರ ವರದಿಯಲ್ಲಿಯೂ ಇದೇ ರೀತಿಯ ಘಟನೆಯನ್ನು ಉಲ್ಲೇಖಿಸಲಾಗಿದೆ. ವರದಿಯ ಪ್ರಕಾರ, ವಿಚಾರಣಾ ನ್ಯಾಯಾಲಯವು ಉಸ್ಮಾನ್ ಮಿರ್ಜಾ ಮತ್ತು ಅವರ ನಾಲ್ವರು ಸಹಚರರಿಗೆ ಜೀವಾವಧಿ ಶಿಕ್ಷೆ ವಿಧಿಸಿತು ಮತ್ತು ಸಾಕ್ಷ್ಯಾಧಾರಗಳ ಕೊರತೆಯಿಂದ ಇಬ್ಬರು ಆರೋಪಿಗಳನ್ನು ಖುಲಾಸೆಗೊಳಿಸಿತು ಎಂದಿದೆ.

ವೈರಲ್ ಆಗುತ್ತಿರುವ ವೀಡಿಯೊ ಇಮ್ರಾನ್ ಖಾನ್ ಅವರ ಸರ್ಕಾರ ಪಾಕಿಸ್ತಾನದಲ್ಲಿದ್ದಾಗ 2021 ರ ಹಳೆಯ ಘಟನೆಯದ್ದಾಗಿದೆ ಎಂದು ನಮ್ಮ ತನಿಖೆಯಿಂದ ಸ್ಪಷ್ಟವಾಗಿದೆ. ಪ್ರಕರಣದ ಪ್ರಮುಖ ಆರೋಪಿ ಉಸ್ಮಾನ್ ಮಿರ್ಜಾಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಈ ಘಟನೆಯಲ್ಲಿ ರಾಣಾ ಸಿಕಂದರ್ ಹಯಾತ್ ಗೆ ಸಂಬಂಧಿಸಿದ ಯಾವುದೇ ಉಲ್ಲೇಖವನ್ನು ನಾವು ಯಾವುದೇ ವರದಿಯಲ್ಲಿ ಕಂಡುಕೊಳ್ಳಲಾಗಲಿಲ್ಲ. ಪಾಕಿಸ್ತಾನದ ಪಂಜಾಬ್‌ನ ಪ್ರಾಂತೀಯ ಅಸೆಂಬ್ಲಿಯ ವೆಬ್ಸೈಟ್‌ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ರಾಣಾ ಸಿಕಂದರ್ ಹಯಾತ್ 2024 ರಲ್ಲಿ ಪಂಜಾಬ್ ವಿಧಾನಸಭೆಗೆ ಆಯ್ಕೆಯಾದರು ಮತ್ತು ಪಾಕಿಸ್ತಾನ್ ಮುಸ್ಲಿಂ ಲೀಗ್ (ನವಾಜ್) ಗೆ ಸೇರಿದವರು.

ಇನ್ನೂ, ಪಾಕಿಸ್ತಾನದಲ್ಲಿ ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರದ ನಂತರ ಲಾಹೋರ್‌ನಲ್ಲಿ ನಡೆದ ಪ್ರತಿಭಟನೆ ಹಿಂಸಾತ್ಮಕವಾಗಿ ಮಾರ್ಪಟ್ಟಿತು ಮತ್ತು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರಿಗೆ ಸಾಕಷ್ಟು ತೊಂದರೆಯಾಯಿತು ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಒಟ್ಟಾರೆಯಗಿ ಹೇಳುವುದಾದರೆ, ಪಾಕಿಸ್ತಾನದಲ್ಲಿ ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರದ ನಂತರ ಲಾಹೋರ್‌ನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಯ ಹಿನ್ನೆಲೆಯಲ್ಲಿ ಯುವ ದಂಪತಿಗಳ ಮೇಲೆ ನಡೆದ ಹಲ್ಲೆ ವಾಸ್ತವವಾಗಿ ಜುಲೈ 2021 ರಲ್ಲಿ ನಡೆದ ಹಳೆಯ ಘಟನೆಯಾಗಿದ್ದು, ಇದಕ್ಕಾಗಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಲಾಹೋರ್ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಯುವತಿಯ ಮೇಲೆ ಪಾಕಿಸ್ತಾನದ ಸಚಿವರೊಬ್ಬರು ಅತ್ಯಾಚಾರ ಎಸಗಿದ್ದಾರೆ ಎಂಬ ಸುಳ್ಳು ಹೇಳಿಕೆಯೊಂದಿಗೆ ಹಳೆಯ ಘಟನೆಯ ವೀಡಿಯೊವನ್ನು ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಅಸ್ಸಾಂನಲ್ಲಿ ಬಾಂಗ್ಲಾ ಮುಸ್ಲಿಮರು ಪ್ರತ್ಯೇಕ ರಾಷ್ಟ್ರಕ್ಕಾಗಿ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ರಾ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights