FACT CHECK | ಮುರ್ಡೇಶ್ವರ ದೇವಸ್ಥಾನಕ್ಕೆ ಬಾಂಬ್ ಹಾಕಲು ಹೊಂಚು ಹಾಕಿದ್ದ 6 ಜನ ಉಗ್ರರ ಬಂಧನ ಎಂಬ ಪೋಸ್ಟ್‌ನ ಅಸಲೀಯತ್ತೇನು ಗೊತ್ತೇ?

ಮುರ್ಡೇಶ್ವರ ದೇಗುಲಕ್ಕೆ ಬಾಂಬ್‌ ಹಾಕಲು ಕಾಯುತ್ತಿದ್ದ 6 ಜನ ಉಗ್ರರ ಬಂಧನವಾಗಿದೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ವೊಂದು ಪ್ರಸಾರವಾಗುತ್ತಿದೆ. ಇನ್‌ಸ್ಟಾಗ್ರಾಂನಲ್ಲಿ ಕಂಡುಬಂದಂತೆ ಮುರ್ಡೇಶ್ವರ ದೇವಸ್ಥಾನಕ್ಕೆ ಬಾಂಬ್ ಹಾಕಿ ಧ್ವಂಸಗೊಳಿಸಲು ಹೊಂಚು ಹಾಕುತ್ತಿರುವ ಆರು ಜನ ಆತಂಕವಾದಿಗಳನ್ನು ಭಟ್ಕಳದಲ್ಲಿ ಸೆರೆ ಹಿಡಿಯಲಾಗಿದೆ” ಎಂದು ಗೋಮಾಂತಕ್ ವರದಿಯ ಫೋಟೊದೊಂದಿಗೆ ಹೇಳಿಕೆಯನ್ನು  ಹಂಚಿಕೊಳ್ಳಲಾಗುತ್ತಿದೆ.

Fact Check: ಮುರ್ಡೇಶ್ವರ ದೇಗುಲಕ್ಕೆ ಬಾಂಬ್‌ ಹಾಕಲು ಕಾಯುತ್ತಿದ್ದ 6 ಜನ ಉಗ್ರರ ಬಂಧನ ಎನ್ನುವುದು ನಿಜವೇ?

ಮುರ್ಡೇಶ್ವರ ದೇಗುಲಕ್ಕೆ ಬಾಂಬ್‌ ಹಾಕಲು ಕಾಯುತ್ತಿದ್ದ 6 ಜನ ಉಗ್ರರ ಬಂಧನದ ಸುದ್ದಿ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಅಕ್ಟೋಬರ್ 18, 2024ರ ಗೋಮಾಂತಕ್ ವರದಿ ಲಭ್ಯವಾಗಿದೆ. ಇದರಲ್ಲಿ “ಕರಾವಳಿ ಕಾವಲು ಪಡೆ ಪೊಲೀಸರು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಸಾಗರ ರಕ್ಷಾ ಕವಚ ಕಾರ್ಯಾಚರಣೆ ಆಯೋಜಿಸಿದ್ದಾರೆ, ಭಟ್ಕಳದ ಮುರುಡೇಶ್ವರ ದೇವಸ್ಥಾನದ ಮೇಲೆ ಯಾವುದೇ ಭಯೋತ್ಪಾದಕರ ಭೀತಿ ಇಲ್ಲ ಎಂಬ ಮಾಹಿತಿ ಬೆಳಕಿಗೆ ಬಂದಿದೆ” ಎಂದಿದೆ. (ಮರಾಠಿಯಿಂದ ಅನುವಾದಿಸಲಾಗಿದೆ)

Fact Check: ಮುರ್ಡೇಶ್ವರ ದೇಗುಲಕ್ಕೆ ಬಾಂಬ್‌ ಹಾಕಲು ಕಾಯುತ್ತಿದ್ದ 6 ಜನ ಉಗ್ರರ ಬಂಧನ ಎನ್ನುವುದು ನಿಜವೇ?
ಈ ಸುದ್ದಿಯಲ್ಲಿ ಕರಾವಳಿ ಕಾವಲು ಪಡೆ ಪೊಲೀಸರ ಸಾಗರ ರಕ್ಷಾ ಕವಚ ಕಾರ್ಯಾಚರಣೆ ಎಂದು ಬರೆದಿರುವುದನ್ನು ನೋಡಬಹುದು, ಇದರ ಆಧಾರದಲ್ಲಿ ಮತ್ತಷ್ಟು ಸರ್ಚ್ ಮಾಡಿದಾಗ, ಅಕ್ಟೋಬರ್ 19, 2024ರ ವಿಜಯವಾಣಿ ವರದಿಯಲ್ಲಿ, “ಸಮುದ್ರ ಮೂಲಕ ಒಳನುಸುಳಲು ಯತ್ನಿಸುತ್ತಿದ್ದ ಆರು ಭಯೋತ್ಪಾದಕರನ್ನು ಗುರುವಾರ ಬೆಳಗಿನ ಜಾವ 1.30ರ ಸುಮಾರಿಗೆ ಕರಾವಳಿ ಕಾವಲು ಪಡೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಇವರಾರೂ ನೈಜ ಭಯೋತ್ಪಾದಕರಲ್ಲ. ಕರಾವಳಿ ಕವಚದಿಂದ ನಡೆದ ಕಲ್ಪಿತ ಕಾರ್‍ಯಾಚರಣೆ (ಅಣಕು ಕಾರ್ಯಾಚರಣೆ) ಇದಾಗಿದೆ” ಎಂದಿದೆ.
Fact Check: ಮುರ್ಡೇಶ್ವರ ದೇಗುಲಕ್ಕೆ ಬಾಂಬ್‌ ಹಾಕಲು ಕಾಯುತ್ತಿದ್ದ 6 ಜನ ಉಗ್ರರ ಬಂಧನ ಎನ್ನುವುದು ನಿಜವೇ?
ವಿಜಯವಾಣಿ ವರದಿ

ಅಕ್ಟೋಬರ್ 17, 2024ರ ಕನ್ನಡವಾಣಿ ನ್ಯೂಸ್‌ ವರದಿಯಲ್ಲಿ “ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಕರಾವಳಿ ಕಾವಲು ಪಡೆ ಪೊಲೀಸ್ ಠಾಣೆಯವರು (Coastal security police) ನಡೆಸಿದ ಕಾರ್ಯಾಚರಣೆಯಲ್ಲಿ ಆರು ಜನ ಭಯೋತ್ಪಾದಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದಲ್ಲದೇ ಮುರುಡೇಶ್ವರ ದೇವಸ್ಥಾನದಲ್ಲಿ ಸಮುದ್ರ ಮಾರ್ಗವಾಗಿ ಬಾಂಬ್ ಇಡಲು ಬಂದಿದ್ದ ನಾಲ್ಕು ಜನ ಭಯೋತ್ಪಾದಕರನ್ನು ಕರಾವಳಿ ಕಾವಲು ಪೊಲೀಸರು ಬಂಧಿಸಿದ್ದಾರೆ. ಹೌದು ಇದು ನಿಜ ಎಂದು ಹೆದರಬೇಡಿ. ಇದು ಅಣಕು ಕಾರ್ಯಾಚರಣೆ ಅಷ್ಟೇ. ರಾಜ್ಯದ ಸೂಕ್ಷ್ಮ ಪ್ರದೇಶದಲ್ಲಿ ಒಂದಾದ ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರತಿ ವರ್ಷ ಸಾಗರ ಕವಚ ಅಣುಕು ಕಾರ್ಯಾಚರಣೆ ನಡೆಸಲಾಗುತ್ತದೆ.” ಎಂದಿದೆ.

Fact Check: ಮುರ್ಡೇಶ್ವರ ದೇಗುಲಕ್ಕೆ ಬಾಂಬ್‌ ಹಾಕಲು ಕಾಯುತ್ತಿದ್ದ 6 ಜನ ಉಗ್ರರ ಬಂಧನ ಎನ್ನುವುದು ನಿಜವೇ?
ಕನ್ನಡವಾಣಿ ನ್ಯೂಸ್‌ ವರದಿ

ಇದೇ ರೀತಿಯ ವರದಿಗಳನ್ನು ಇಲ್ಲಿಇಲ್ಲಿ ನೋಡಬಹುದು. ಮುರ್ಡೇಶ್ವರ ದೇಗುಲಕ್ಕೆ ಬಾಂಬ್‌ ಹಾಕಲು ಕಾಯುತ್ತಿದ್ದ 6 ಜನ ಉಗ್ರರ ಬಂಧನ ಎನ್ನುವುದು ನಿಜವಲ್ಲ, ಇದು ಕರಾವಳಿ ಕಾವಲು ಪಡೆ ಪೊಲೀಸರು ನಡೆಸಿದ ಅಣಕು ಕಾರ್‍ಯಾಚರಣೆ ಎಂದು ಗೊತ್ತಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಕರಾವಳಿ ಕಾವಲು ಪಡೆ ಪೊಲೀಸರು ನಡೆಸಿದ ಅಣಕು ಕಾರ್‍ಯಾಚರಣೆಯನ್ನು, ಮುರ್ಡೇಶ್ವರ ದೇಗುಲಕ್ಕೆ ಬಾಂಬ್‌ ಹಾಕಲು ಕಾಯುತ್ತಿದ್ದ 6 ಜನ ಉಗ್ರರ ಬಂಧನ ಎಂದು ತಪ್ಪು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಹಸುವಿಗೆ ಚಿತ್ರಹಿಂಸೆ ನೀಡಿದನೆಂದು ಮುಸ್ಲಿಂ ಯುವಕನಿಗೆ ಪೊಲೀಸರಿಂದ ಲಾಠಿ ರುಚಿ? ವೈರಲ್ ವಿಡಿಯೋದ ಅಸಲೀಯತ್ತೇನು?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights