FACT CHECK | ಅಯೋಧ್ಯೆಯಲ್ಲಿ ಇಬ್ಬರು ಸನ್ಯಾಸಿಗಳು ಹುಡುಗಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ನಿಜವೇ?

ಸಾಮಾಜಿಕ ಮಾಧ್ಯಮ X ನಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದ್ದು, ಇಬ್ಬರು ವ್ಯಕ್ತಿಗಳು ಸನ್ಯಾಸಿಗಳಂತೆ ವೇಷವನ್ನು ಧರಿಸಿ ಇತರರೊಂದಿಗೆ ವಾಗ್ವಾದದಲ್ಲಿ ತೊಡಗಿದ್ದು. ಬಾಲಕಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಪಾನಮತ್ತರಾದ ಇಬ್ಬರು ಸನ್ಯಾಸಿಗಳನ್ನು ಸಾರ್ವಜನಿಕರು ಥಳಿಸಿರುವಾಗ ಅವರನ್ನು ತಡೆಯಲು ಮಧ್ಯಪ್ರವೇಶಿಸಿದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಲು ಮುಂದಾದದಾಗ ಮೋಟಾರ್ ಸೈಕಲ್‌ನಲ್ಲಿ ಪರಾರಿಯಾಗಿದ್ದಾರೆ.  ಘಟನೆ ಅಯೋಧ್ಯೆಯಲ್ಲಿ ನಡೆದಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಹೇಟ್ ಡಿಟೆಕ್ಟರ್ ಎಂಬ ಎಕ್ಸ್‌ ಖಾತೆಯಲ್ಲಿ ವಿಡಿಯೋ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದ್ದು, “ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಇಬ್ಬರು ಸಾಧುಗಳು ಬಾಲಕಿಗೆ ಕಿರುಕುಳ ನೀಡಿದ್ದಾರೆ ಮತ್ತು ಸಾರ್ವಜನಿಕವಾಗಿ ಥಳಿಸಿದ್ದಾರೆ. ನಂತರ ಕಿರುಕುಳದ ವಿರುದ್ಧ ಪ್ರತಿಭಟಿಸಿದ ಯುವಕನಿಗೂ ಥಳಿಸಿದ್ದಾರೆ. ಹುಡುಗಿಗೆ ಕಿರುಕುಳ ನೀಡಿದ ನಂತರ ಇಬ್ಬರೂ ಬೈಕ್‌ನಲ್ಲಿ ಪರಾರಿಯಾಗಿದ್ದಾರೆ ಎಂದು ಹಂಚಿಕೊಳ್ಳಲಾಗಿದೆ.

ಪತ್ರಕರ್ತ ಪಿಯೂಷ್ ರೈ  ತಮ್ಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, “ಎಚ್ಚರಿಕೆ: ಗೊಂದಲದ ವಿಡಿಯೋ, ಹಿಂಸಾಚಾರ, ನಿಂದನೀಯ ವಿಷಯಗಳು ಯುಪಿಯ ಅಯೋಧ್ಯೆಯಲ್ಲಿ, ಸನ್ಯಾಸಿಯಂತೆ ವೇಷ ಧರಿಸಿದ್ದ ಮತ್ತು ಲೈಂಗಿಕ ಕಿರುಕುಳದ ಆರೋಪದ ವ್ಯಕ್ತಿಯೊಬ್ಬನಿಗೆ ಚಪ್ಪಲಿಯಿಂದ ಥಳಿಸಲಾಗಿದೆ.” ಎಂದು ಬರೆದುಕೊಂಡಿದ್ದಾರೆ. ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಲಾಗುತ್ತಿರುವ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಅಯೋಧ್ಯಯಲ್ಲಿ ಇಬ್ಬರು ವ್ಯಕ್ತಿಗಳು ಸನ್ಯಾಸಿ ವೇಷದಲ್ಲಿ ಬಂದು ಗುಡುಗಿಯರಿಗೆ ಕಿರುಕುಳ ನೀಡಿದ್ದಾರೆ ಎಂದು ಪತ್ಇಪಾದಿಸಿ ಹಂಚಿಕೊಳ್ಳಲಾಗುತ್ತಿರುವ ವಿಡಿಯೋದ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಲೈವ್ ಹಿಂದೂಸ್ತಾನ್ ವರದಿ ಲಭ್ಯವಾಗಿದೆ.

ವರದಿಯ ಪ್ರಕಾರ, ಅಯೋಧ್ಯೆಯಲ್ಲಿ ಸನ್ಯಾಸಿಗಳ ವೇಷದಲ್ಲಿದ್ದ ಇಬ್ಬರು ವ್ಯಕ್ತಿಗಳು ಹುಡುಗಿಗೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿ, ಸಾರ್ವಜನಿಕರು ಥಳಿಸಿದ್ದಾರೆ ಎಂಬ ವಿಷಯ ತಿಳಿದ ಪೊಲೀಸರು ತನಿಖೆ ಆರಂಭಿಸಿದ್ದು, ವಿಚಾರಣೆಗಾಗಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರ ಪ್ರಕಾರ, ಇಡೀ ಘಟನೆಯು ತಪ್ಪು ತಿಳುವಳಿಕೆಯಿಂದ ಉದ್ಭವಿಸಿದೆ, ಇದು ರಸ್ತೆಯಲ್ಲಿ ಎರಡೂ ಗುಂಪಿನ ನಡುವೆ ನಡೆದ ಒಂದು ಜಗಳ ಆಗಿದೆ. ನಂತರ ಎರಡೂ ಕಡೆಯವರು ರಾಜಿ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಈ ವಿಷಯದಲ್ಲಿ ಕಿರುಕುಳದ ಆರೋಪವನ್ನು ನಿರಾಕರಿಸಿರುವ ಅಯೋಧ್ಯೆ ಪೊಲೀಸರು ತಮ್ಮ ಎಕ್ಸ್‌ನಲ್ಲಿ ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ. ಪಂಚಮುಖಿ ಹನುಮಾನ್ ಮಂದಿರದ ಆವರಣದಲ್ಲಿ ಎರಡು ಗುಂಪುಗಳ ನಡುವೆ ಜಗಳ ನಡೆದ ಘಟನೆ ಠಾಣಾ ಕ್ಯಾಂಟ್‌ನಲ್ಲಿ ವ್ಯಾಪ್ತಿಯಲ್ಲಿ ಸಂಭವಿಸಿದೆ ಎಂದು ಸಿಟಿ ಎಸ್‌ಪಿ ತಿಳಿಸಿದ್ದಾರೆ. ಒಂದು ಗುಂಪಿನವರು ಮೋಟಾರು ಸೈಕಲ್‌ನಲ್ಲಿ ರೀಲ್ ವಿಡಿಯೋ ಮಾಡುತ್ತಿದ್ದಾಗ, ಮತ್ತೊಂದು ಗುಂಪಿನವರು ರೀಲ್ಸ್‌ ಮಾಡುತ್ತಿದ್ದವರನ್ನು ರೇಗಿಸಿದ್ದಾರೆ. ಈ ಸಂದರ್ಭದಲ್ಲಿ ಪರಸ್ಪರರಲ್ಲಿ  ಜಗಳಕ್ಕೆ ಕಾರಣವಾಯಿತು ಎಂದು ತನಿಖೆಯಿಂದ ತಿಳಿದುಬಂದಿದೆ. ಯಾವುದೇ ರೀತಿಯ ಕಿರುಕುಳದ ಘಟನೆ ನಡೆದಿಲ್ಲ. ವಿಚಾರಣೆಗಾಗಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಪಂಚಮುಖಿ ಹನುಮಾನ್ ಮಂದಿರದ ಆವರಣದಲ್ಲಿ ರೀಲ್ಸ್‌ ಮಾಡುತ್ತಿದ್ದವರ ಬಗ್ಗೆ ಕೆಟ್ಟ ಕಮೆಂಟ್ ಮಾಡಿದ್ದರ ಪರಿಣಾಮ ನಡೆದ ಜಗಳವನ್ನು, ಅಯೋಧ್ಯಯಲ್ಲಿ ಸನ್ಯಾಸಿಗಳಂತೆ ವೇಷ ಧರಿಸಿ ಹುಡುಗಿಯರಿಗೆ ಕಿರುಕುಳ ನೀಡಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಪ್ರಿಯಾಂಕ ಗಾಂಧಿ ವಯನಾಡಿನಲ್ಲಿ ನಾಮಪತ್ರ ಸಲ್ಲಿಸುವಾಗ ಪಾಕ್ ಧ್ವಜಗಳನ್ನು ಪ್ರದರ್ಶಿಸಲಾಗಿದೆಯೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights