FACT CHECK | ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮೀಸಲಾತಿ ರದ್ದಾಗುವುದೇ?

ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ನಾನಾ ಪಟೋಲೆ ಅವರ ವಿಡಿಯೋವನ್ನು  ಬಿಜೆಪಿಯ ಹಲವು ಬೆಂಬಲಿಗರು ಹಂಚಿಕೊಳ್ಳುತ್ತಿದ್ದಾರೆ. ಭಾರತದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಮೀಸಲಾತಿಯನ್ನು ಅಂತ್ಯಗೊಳಿಸುವುದಾಗಿ ರಾಹುಲ್ ಗಾಂಧಿ ಅವರು ಅಮೆರಿಕದಲ್ಲಿ ಹೇಳಿರುವುದಾಗಿಯೂ, ಅದನ್ನು ನಾನಾ ಪಟೋಲೆ ಒಪ್ಪಿ, ಸಮರ್ಥಿಸಿಕೊಂಡಿದ್ದಾರೆ ಎಂದು ಪ್ರತಿಪಾದಿಸಿ ಬಿಜೆಪಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ, ಪಕ್ಷದ ವಕ್ತಾರ ಪ್ರದೀಪ್ ಭಂಡಾರಿ, ಶಿವಸೇನಾ (ಶಿಂದೆ ಬಣ) ಮುಖಂಡ ಸಂಜಯ್ ನಿರುಪಮ್ ಅವರೂ ವಿಡಿಯೊ ಅನ್ನು ಹಂಚಿಕೊಂಡಿದ್ದಾರೆ.

ಬಿಜೆಪಿ ವಕ್ತಾರ ಪ್ರದೀಪ್ ಭಂಡಾರಿ ಕೂಡ ಇದೇ ಹೇಳಿಕೆಯೊಂದಿಗೆ ವಿಡಿಯೋವನ್ನು ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.

ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯಂತೆ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮೀಸಲಾತಿ ತೆಗೆಯುವ ಮಾತುಗಳನ್ನಾಡಿದ್ದಾರೆ ಎಂಬ ಪ್ರತಿಪಾದನೆಯನ್ನು ಪರಿಶೀಲಿಸಲು ಗುಘಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, 25 ಅಕ್ಟೋಬರ್ 2024ರಂದು ಹಿಂದಿ ಸುದ್ದಿ ವಾಹಿನಿ ಇಂಡಿಯಾ ಟಿವಿಯಲ್ಲಿಅಪ್‌ಲೋಡ್ ಮಾಡಿದ ಪಟೋಲೆ ಅವರ ಭಾಷಣದ ಮೂಲ ವಿಡಿಯೋ ಲಭ್ಯವಾಗಿದೆ.

ನಾನಾ ಪಟೊಲೆ ಅವರ ವಿಡಿಯೊ, ಸುದ್ದಿ ವಾಹಿನಿಯ ಚರ್ಚೆಯೊಂದರ ತುಣುಕು. ವಾಹಿನಿಯ ನಿರೂಪಕನ ಪ್ರಶ್ನೆಗೆ ಉತ್ತರಿಸುವ ವೇಳೆ ಸಂವಿಧಾನ, ಮೀಸಲಾತಿ ಬಗ್ಗೆ ರಾಹುಲ್ ಗಾಂಧಿ ಅವರ ಅಭಿಪ್ರಾಯದ ಬಗ್ಗೆ ಮಾತನಾಡುತ್ತಾ ಪಟೋಲೆ ಈ ಮಾತು ನುಡಿದಿದ್ದಾರೆ. ‘ಭಾರತದಲ್ಲಿ ಎಲ್ಲರೂ ಸಮಾನರಾಗಿ ಬದಲಾದ ದಿನ ಮೀಸಲಾತಿಯನ್ನು ಅಂತ್ಯಗೊಳಿಸುವ ಬಗ್ಗೆ ಯೋಚಿಸಬಹುದು ಎಂಬುದಾಗಿ ರಾಹುಲ್ ಹೇಳಿದ್ದಾರೆ.’ ಎಂದು ಪಟೋಲೆ ಹೇಳಿದ್ದಾರೆ.

ಮೂಲ ವಿಡಿಯೋದಲ್ಲಿ ಪಟೋಲೆಯವರು ಮೀಸಲಾತಿ ಕುರಿತು ಕಾಂಗ್ರೆಸ್‌ನ ನಿಲುವಿನ ಬಗ್ಗೆ ಮತ್ತು ಬಿಜೆಪಿಯ ಆರೋಪಗಳನ್ನು ಕುರಿತು ಚರ್ಚಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮೀಸಲಾತಿಯನ್ನು ತೆಗೆದುಹಾಕುವುದಾಗಿ ಹೇಳಿಲ್ಲ ಎಂದು ಅವರ ಬೆಂಬಲಕ್ಕೆ ನಿಂತು ಪಟೋಲೆ ಮಾತನಾಡಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಮಹಾರಾಷ್ಟ್ರ ಕಾಂಗ್ರೆಸ್‌ನ ರಾಜ್ಯ ಅಧ್ಯಕ್ಷರಾದ ನಾನಾ ಪಟೊಲೆ ಅವರ ವಿಡಿಯೋವನ್ನು ತಪ್ಪು ಅರ್ಥ ಬರುವಂತೆ ಕತ್ತರಿಸಿ, ಸುಳ್ಳು ಪ್ರತಿಪಾದನೆಗಳೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಹಾಹಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಕೋಮು ದ್ವೇಷದ ಹಿನ್ನಲೆಯಲ್ಲಿ ಹಳೆಯ ವಿಡಿಯೋ ಪೋಸ್ಟ್‌ ಮಾಡಿದ ಚಕ್ರವರ್ತಿ ಸೂಲಿಬೆಲೆ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights