FACT CHECK | ಕರ್ನಾಟಕದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಪೊಲೀಸರಿಗೆ ಧಮ್ಕಿ ಹಾಕಿದ್ದಾನೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

ವ್ಯಕ್ತಿಯೊಬ್ಬ ಪೊಲೀಸರಿಗೆ ಬೆದರಿಕೆ ಹಾಕುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.  ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಇರುವುದರಿಂದ ಮುಸಲ್ಮಾನರು ಪೊಲೀಸರಿಗೆ ಹೆದರುತ್ತಿಲ್ಲ. ಅವರು ಏನೆ ತಪ್ಪು ಮಾಡಿದರು ಪೊಲೀಸರು ಹೆದರುತ್ತಿದ್ದಾರೆ ಎಂದು ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ.

 

 

 

 

 

 

 

 

 

 

 

 

 

 

 

 

 

 

 

ಇದೆ ಪ್ರತಿಪಾದನೆಯೊಂದಿಗೆ ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ.ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್‌

ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ಅನ್ನು ಪರಿಶೀಲಿಸಲು ಕೀ ವರ್ಡ್‌ಗಳನ್ನು ಬಳಸಿ ಗೂಗಲ್ ಸರ್ಚ್ ನಡೆಸಿದಾಗ, ಸೋಪಾನ್ ಜಾಧವ್ ಹೆಸರಿನ ಫೇಸ್‌ಬುಕ್ ಖಾತೆಯಲ್ಲಿ ಸೆಪ್ಟೆಂಬರ್ 24, 2018 ರಂದು ಅಪ್‌ಲೋಡ್ ಮಾಡಲಾದ ವೈರಲ್ ವಿಡಿಯೋವೊಂದು ಲಭ್ಯವಾಗಿದೆ. ಅದರಲ್ಲಿ ಮಾಹಿತಿಯ ಪ್ರಕಾರ ಈ ಘಟನೆ ಮಹಾರಾಷ್ಟ್ರದ ಚೋಪ್ರಾ ಬಸ್ ನಿಲ್ದಾಣದಲ್ಲಿ ನಡೆದಿದೆ ಎನ್ನಲಾಗಿದೆ.

 

 

 

 

 

 

 

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೀ ವರ್ಡ್‌ಗಳನ್ನು ಬಳಸಿ ಮತ್ತಷ್ಟು ಸರ್ಚ್ ಮಾಡಿದಾಗ,  ಸೆಪ್ಟೆಂಬರ್ 20, 2018 ರಂದು ಜುಬಿಲಿಹಿಲ್ಸ್ ಫಿರೋಜ್ ಖಾನ್ ಹೆಸರಿನ ಪುಟದಲ್ಲಿ ಈ ವೀಡಿಯೊವನ್ನು ಅಪ್‌ಲೋಡ್ ಮಾಡಿರುವುದು ಕಂಡು ಬಂದಿದ್ದು, ಇದೇ ರೀತಿಯಲ್ಲಿ ಹಲವರು ವೈರಲ್‌ ವಿಡಿಯೋವನ್ನು ಹಂಚಿಕೊಂಡಿದ್ದು, ಅವುಗಳಲ್ಲಿ ಇದೇ ಅಂಶವನ್ನು ಉಲ್ಲೇಖಿಸಲಾಗಿದೆ. ಇನ್ನು ಈ ಬಗ್ಗೆ ವಿಶ್ವಾಸ್‌ ನ್ಯೂಸ್‌ ಮಹಾರಾಷ್ಟ್ರದ ಚೋಪ್ರಾ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದಿದ್ದು, ಅದರ ಪ್ರಕಾರ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಅವತಾರ್ ಸಿಂಗ್ ಚೌಹಾಣ್, ‘ಈ ಘಟನೆ 2018 ರಲ್ಲಿ ಸಂಭವಿಸಿದ್ದು, ಕೆಲವರು ಚೋಪ್ರಾ ಬಸ್ ನಿಲ್ದಾಣದ ಬಳಿ ವಾಹನವನ್ನು ನಿಲ್ಲಿಸಿದಾಗ ಸಂಚಾರಕ್ಕೆ ತೊಂದರೆಯಾಗಿತ್ತು. ಅದನ್ನು ತೆಗೆಯುವ ವಿಚಾರದಲ್ಲಿ ವಾಗ್ವಾದ ನಡೆದಿದ್ದು, ಅಲ್ಲಿನ ಜನರು ಪೊಲೀಸರಿಗೆ ಬೆದರಿಕೆ ಹಾಕಿದ್ದಾರೆ ಎಂದು ಮಾಹಿತಿಯನ್ನು ನೀಡಲಾಗಿದೆ.

 

 

 

 

 

 

 

 

ಒಟ್ಟಾರೆಯಾಗಿ ಹೇಳುವುದಾದರೆ,2018ರಲ್ಲಿ ಮಹಾರಾಷ್ಟ್ರದ ಚೋಪ್ರಾ ಬಸ್ ನಿಲ್ದಾಣದ ಬಳಿ , ವಾಹನ ನಿಲುಗಡೆಯ ವಿಚಾರದಲ್ಲಿ ಜನ ಸಾಮಾನ್ಯರಿಗೂ ಪೊಲೀಸರಿಗೂ ನಡೆದ ವಾಗ್ವಾದವನ್ನು, ಕರ್ನಾಟಕದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಪೊಲೀಸರಿಗೆ ಬೆದರಿಕೆ ಹಾಕಿದ್ದಾನೆ  ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ದೀಪಾವಳಿ ಪ್ರಯುಕ್ತ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ 5 ಸಾವಿರ ನೀಡುತ್ತಿದೆ ಎಂಬುದು ಸುಳ್ಳು


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights