FACT CHECK | ದೀಪಾವಳಿ ಪ್ರಯುಕ್ತ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ 5 ಸಾವಿರ ನೀಡುತ್ತಿದೆ ಎಂಬುದು ಸುಳ್ಳು

ದೀಪಾವಳಿ ಹಬ್ಬದ ಪ್ರಯುಕ್ತ ಕೇಂದ್ರ ಸರ್ಕಾರದ ದೊಡ್ಡ ಕೊಡುಗೆ.. ಈ ದೀಪಾವಳಿಗೆ ಮೋದಿ ಸರ್ಕಾರ ಜನ ಸಾಮನ್ಯರಿಗೆ ವಿವಿಧ ಉಡುಗೊರೆಗಳನ್ನು ನೀಡಲಿದೆ. ಇದಕ್ಕಾಗಿ ಕೇಂದ್ರ ಎಲ್ಲಾ ರೀತಿಯ ತಯಾರಿಗಳನ್ನು ಮಾಡಿಕೊಂಡಿದೆ. ಈ ಉಡುಗೊರೆ ಯೋಜನೆಯ ಅಡಿಯಲ್ಲಿ ಎಲ್ಲಾ ದೇಶವಾಸಿಗಳಿಗೆ ಐದು ಸಾವಿರ ರೂ. ಹಣವನ್ನು ನೀಡಲಾಗುತ್ತಿದೆ. ಈ ಯೋಜನೆಯ ಲಾಭ ಪಡೆಯಲು ಕೇಂದ್ರದ ಸರ್ಕಾರ ವೆಬ್‌ಸೈಟ್‌ಗೆ ಹೋಗಿ ನಿಮ್ಮ ಮಾಹಿತಿ ಮತ್ತು ಫೋನ್ ಸಂಖ್ಯೆಯನ್ನು ನೀಡುವಂತೆ ಕೇಳಲಾಗಿದೆ. ಈ ಕುರಿತು ಇಂಡಿಯಾ ಟಿವಿ ಕೂಡ  ವರದಿ ಮಾಡಿದೆ.” ಎಂದು ಪೋಸ್ಟ್‌ವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

 

 

 

 

 

 

 

 

 

 

 

 

 

 

 

ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಇದೇ ಪ್ರತಿಪಾದನೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್‌

ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್‌ ಪೋಸ್ಟ್‌ ಕುರಿತು ಪರಿಶೀಲನೆ  ಇಂಡಿಯಾ ಟಿವಿಯೊಂದನ್ನು ಹೊರತು ಪಡಿಸಿ, ವೈರಲ್‌ ಪೋಸ್ಟ್‌ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಯಾವುದಾದರೂ ಯೋಜನೆಯ ಕುರಿತು ಇತರೆ ಮಾಧ್ಯಮಗಳಲ್ಲಿ ವರದಿಗಳು ಬಂದಿವವೆಯೇ ಎಂದು ಪರಿಶೀಲನೆ ನಡೆಸಲು ಗೂಗಲ್ ಸರ್ಚ್ ನಡೆಸಿದಾಗ ವೈರಲ್‌ ಪೋಸ್ಟ್‌ಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ವರದಿಗಳು ಲಭ್ಯವಾಗಿಲ್ಲ.

ಮತ್ತಷ್ಟು ಮಾಹಿತಿಗಾಗಿ ಇಂಡಿಯಾ ಟಿವಿಯ ಕ್ಲಿಪ್‌ಗಳನ್ನು ಗೂಗಲ್‌ ರಿವರ್ಸ್‌ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಇಂಡಿಯಾ ಟಿವಿಯ ಯೂಟ್ಯೂಬ್ ಚಾನೆಲ್‌ನಲ್ಲಿ 19 ಅಕ್ಟೋಬರ್ 2022 ರಂದು ಅಪ್‌ಲೋಡ್ ಮಾಡಲಾಗಿದೆ. ಇದರಲ್ಲಿ ವೈರಲ್ ವೀಡಿಯೊದಲ್ಲಿ ಬಳಸಲಾದ ಕ್ಲಿಪ್ ಅನ್ನು ಸಹ ಕಾಣಬಹುದು. ವಿಡಿಯೋ ಸುದ್ದಿಗಳ ಪ್ರಕಾರ, ದೀಪಾವಳಿಯಂದು ಪ್ರಧಾನಿ ಮೋದಿ ದೇಶದ 75 ಸಾವಿರ ಯುವಕರಿಗೆ ಉದ್ಯೋಗ ಪ್ರಮಾಣಪತ್ರವನ್ನು ನೀಡುವ ಮೂಲಕ ದೊಡ್ಡ ಉಡುಗೊರೆಯನ್ನು ನೀಡಲಿದ್ದಾರೆ ಎಂದು ಎರಡು ವರ್ಷದ ಹಿಂದೆ ಹೇಳಲಾಗಿದೆ ಎಂಬುದು ತಿಳಿದು ಬಂದಿದೆ. ಇಲ್ಲಿಗೆ ವೈರಲ್‌ ವಿಡಿಯೋದ ಕ್ಲಿಪ್‌ ಹಳೆಯದು ಎಂಬುದು ಸ್ಪಷ್ವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ. ಕೇಂದ್ರ ಸರ್ಕಾರ ದೀಪಾವಳಿ ಹಬ್ಬದ ಸಲುವಾಗಿ, ದೇಶದ ಜನ ಸಾಮಾನ್ಯರ ಖಾತೆಗಳಿಗೆ 5000 ರೂ.ಗಳನ್ನು ಜಮೆ ಮಾಡಲಿದೆ ಎಂಬುದು ಸುಳ್ಳು. ವೈರಲ್‌ ಆಗುತ್ತಿರುವ ಇಂಡಿಯಾ ಟಿವಿಯ ವಿಡಿಯೋ ಕ್ಲಿಪ್‌ 2022ರದ್ದಾಗಿದೆ. ಹಾಗಾಗಿ ವೈರಲ್‌ ಪೋಸ್ಟ್‌ ಸುಳ್ಳು ನಿರೂಪಣೆಯೊಂದಿಗೆ ಕೂಡಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಹೈದರಾಬಾದ್‌ನ ಪಟಾಕಿ ಅಂಗಡಿಯಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 35 ಜನ ಸಾವನಪ್ಪಿದ್ದಾರೆ ಎಂಬುದು ಸುಳ್ಳು


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights