FACT CHECK | 2022ರಲ್ಲಿ ನಡೆದ ಹಾವೇರಿ ರೈತ ರುದ್ರಪ್ಪನ ಆತ್ಮಹತ್ಯೆಯನ್ನು ವಕ್ಫ್‌ಗೆ ಲಿಂಕ್ ಮಾಡಿ ಸುಳ್ಳು ಪೋಸ್ಟ್‌ ಹಂಚಿಕೊಂಡ ಸಂಸದ ತೇ.ಸೂರ್ಯ

ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದಾದ ಕಾರಣದಿಂದಾಗಿ ಹಾವೇರಿಯ ರೈತರೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುದ್ದಿಯೊಂದು ಹರಿದಾಡಿದೆ.

Fact Check: ಜಮೀನು ಪಹಣಿಯಲ್ಲಿ ವಕ್ಫ್‌ ಹೆಸರು ನಮೂದಾದ್ದರಿಂದ ಹಾವೇರಿ ರೈತ ಆತ್ಮಹತ್ಯೆ? ಸತ್ಯ ಇಲ್ಲಿದೆ

ಆದರೆ, ವಕ್ಫ್‌ ಬೋರ್ಡಿಗೆ ಸಂಬಂಧಿಸಿದಂತೆ ಈ ಕಾಯ್ದೆಯನ್ನೇ ರದ್ದುಗೊಳಿಸಬೇಕು ಎಂದು ವಾದಿಸುತ್ತಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಈ ಪ್ರಕರಣವನ್ನು ಇನ್ನಷ್ಟು ವಿವಾದಕ್ಕೆ ತಿರುಗಿಸಲು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಒಂದನ್ನು ಹಂಚಿಕೊಂಡಿದ್ದು ಅದರಲ್ಲಿ, ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದಾದ ಕಾರಣದಿಂದ ಮನನೊಂದು ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

ಕನ್ನಡ ನ್ಯೂಸ್ ನೌ, ಕನ್ನಡ ದುನಿಯಾ, ಪಬ್ಲಿಕ್ ಟಿವಿ ಸೇರಿದಂತೆ ಕೆಲವು ಮಾಧ್ಯಮಗಳು ಹಾವೇರಿಯಲ್ಲಿ ರೈತರೊಬ್ಬರು ಪಹಣಿಯಲ್ಲಿ ವಕ್ಫ್ ಹೆಸರು ನಮೂದಾಗಿದ್ದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿ ಮಾಡಿದೆ. ಕೆಲವು ಮಾಧ್ಯಮಗಳು ಸಂಸದ ತೇಜಸ್ವಿ ಸೂರ್ಯ ಅವರ ಟ್ವಿಟ್ ಆಧಾರದಲ್ಲೇ ಸುದ್ದಿ ಮಾಡಿದ್ದವು.

Fact Check: ಜಮೀನು ಪಹಣಿಯಲ್ಲಿ ವಕ್ಫ್‌ ಹೆಸರು ನಮೂದಾದ್ದರಿಂದ ಹಾವೇರಿ ರೈತ ಆತ್ಮಹತ್ಯೆ? ಸತ್ಯ ಇಲ್ಲಿದೆ

ಇದೇ ರೀತಿಯ ಹೇಳಿಕೆಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಕರ್ನಾಟಕ ಮೇಲ್ಮನೆ ವಿರೋಧ ಪಕ್ಷದ ನಾಯಕಛಲವಾದಿ ನಾರಾಯಣ ಸ್ವಾಮಿ ಅವರೂ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಗಳು ಇಲ್ಲಿ, ಇಲ್ಲಿನೋಡಬಹುದು. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ ಚೆಕ್:‌

ಸಂಸದ ತೇಜಸ್ವಿ ಸೂರ್ಯ ಅವರು ಹಂಚಿಕೊಂಡಿರುವ ಮಾಹಿತಿ ಸುಳ್ಳು ಎಂದು ಹಾವೇರಿ ಪೋಲಿಸರು ಸ್ಪಷ್ಟಪಡಿಸಿದ್ದಾರೆ. ಸದ್ಯ ಸುಳ್ಳು ಸುದ್ದಿ ಹರಡಿದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಕೆಲವು ಮಾಧ್ಯಮಗಳು ಈ ಸುದ್ದಿ ಪ್ರಕಟಿಸುತ್ತಿದ್ದಂತೆ ಸ್ಪಷ್ಟನೆ ನೀಡಿದ ಹಾವೇರಿ ಪೊಲೀಸರು ಕನ್ನಡ ನ್ಯೂಸ್ ನೌ ಎಂಬ ಹೆಸರಿನ ಡಿಜಿಟಲ್ ನ್ಯೂಸ್ನಲ್ಲಿ ಹಾವೇರಿ ಜಿಲ್ಲೆಯ ಹರಣಗಿ ಗ್ರಾಮದ ರೈತ ಚೆನ್ನಪ್ಪ ಎಂಬುವವರ ಪುತ್ರ ರುದ್ರಪ್ಪ ಎಂಬ ರೈತ ಪಹಣಿಯಲ್ಲಿ ವಕ್ಫ್ ಹೆಸರು ಬಂದಿರುವುದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹಾವೇರಿ ರೈತರು ಆರೋಪಿಸಿದ್ದಾರೆ ಎಂದು ವರದಿ ಪ್ರಕಟಿಸಿದೆ. ಆದರೆ ಈ ಸುದ್ದಿ ಸುಳ್ಳು, ಈ ರೀತಿ ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲ ಎಂದು ತಿಳಿಸಿದ್ದಾರೆ.

ರೈತ ಚೆನ್ನಪ್ಪ ಬಾಳಿಕಾಯಿ ನೀಡಿರುವ ದೂರಿನ ಪ್ರಕಾರ ಅವರ ಪುತ್ರ ರೈತ ರುದ್ರಪ್ಪ ಐಸಿಐಸಿಐ ಬ್ಯಾಂಕ್ ನ ಹಾವೇರಿ ಖಾತೆಯಲ್ಲಿ 3 ಲಕ್ಷ ರೂಪಾಯಿ ಮತ್ತು ಖಾಸಗಿಯಾಗಿ ನಾಲ್ಕು ಲಕ್ಷ ರೂಪಾಯಿ ಕೈ ಸಾಲ ಮಾಡಿಕೊಂಡಿದ್ದರು. ಅತಿ ಹೆಚ್ಚು ಮಳೆಯಾಗಿ ಬೆಳೆಯು ಹಾನಿಯಾಗಿದ್ದರಿಂದ ಮನನೊಂದು ದಿನಾಂಕ 06.01.2022 ರಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹಾವೇರಿ ಪೊಲೀಸರು ತಿಳಿಸಿದ್ದಾರೆ.

ಹಾಗೆಯೇ ಸಾಲವಿರುವಾಗ ಬೆಳೆಯು ಹಾನಿಯಾದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಬಗ್ಗೆ ಸಾಕ್ಷಾಧಾರಗಳನ್ನು ಸಂಗ್ರಹಿಸಿ ಅಂತಿಮ ವರದಿಯನ್ನು ತಹಶೀಲ್ದಾರ ಹಾನಗಲ್ ಅವರಿಗೆ ಸಲ್ಲಿಸಲಾಗಿದೆ. ಈ ಸಂಬಂಧ ಮೃತರ ಕುಟುಂಬಕ್ಕೆ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ನೀಡಿದೆ ಎಂದು ಮಾಹಿತಿ ನೀಡಿದ್ದಾರೆ.

ತನ್ನ 4 ಎಕರೆ ಜಮೀನಿನ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದು ಆಗಿದ್ದಕ್ಕೆ ಮನನೊಂದು ಹಾವೇರಿ ಜಿಲ್ಲೆಯ ಹರನಗಿ ಗ್ರಾಮದ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಕ್ಫ್ ನೋಟಿಸ್ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹುಬ್ಬಳ್ಳಿಗೆ ಆಗಮಿಸಿದ ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆ ಪರಿಶೀಲನೆಯ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಂಬಿಕಾ ಪಾಲ್ ಅವರಿಗೂ ರೈತರು ಈ ಕುರಿತು ದೂರು ನೀಡಿದ್ದಾರೆ’ ಎಂದು ವರದಿಗಳಲ್ಲಿ ಹೇಳಿತ್ತು.

ಇದೇ ಸುದ್ದಿಯನ್ನು ಸಂಸದ ತೇಜಸ್ವಿ ಸೂರ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಎಕ್ಸ್‌ನಲ್ಲಿ ಹಂಚಿಕೊಂಡು, ಬಳಿಕ ಡಿಲಿಟ್ ಮಾಡಿದ್ದರು. ಆದರೆ, ರೈತ ರುದ್ರಪ್ಪ ಐಸಿಐಸಿಐ ಬ್ಯಾಂಕ್ ಹಾವೇರಿ ಶಾಖೆಯಲ್ಲಿ 3 ಲಕ್ಷ ಹಾಗೂ ಖಾಸಗಿಯಾಗಿ 4 ಲಕ್ಷ ರೂಪಾಯಿ ಕೈಸಾಲ ಮಾಡಿಕೊಂಡಿದ್ದು, ಅತೀ ಹೆಚ್ಚು ಮಳೆಯಾಗಿ ಬೆಳೆ ಹಾನಿಯಾಗಿದ್ದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಅವರ ಆತ್ಮಹತ್ಯೆಗೂ ವಕ್ಫ್ ವಿಷಯಕ್ಕೂ ಸಂಬಂಧವಿಲ್ಲ ಎಂದು ಹಾವೇರಿ ಪೊಲೀಸರು ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದು ಒಬ್ಬ ಜವಬ್ದಾರಿಯುತ ಸಂಸದನಾಗಿ ಸುಳ್ಳು ಸುದ್ದಿಯನ್ನು ಹಂಚಿಕೊಳ್ಳುವ ಮೂಲಕ ಜನರ ದಿಕ್ಕುತಪ್ಪಿಸುತ್ತಿರುವ ಇಂತವರ ವಿರುದ್ಧ ಪೋಲಿಸ್‌ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಹಾಗೆಯೇ ಜನರ ವಿಶ್ವಾಸಕ್ಕೆ ಅರ್ಹವಿಲ್ಲದಂತೆ ಸುಳ್ಳು ಸುದ್ದಿಯನ್ನು ವರದಿ ಮಾಡಿರುವ ಮಾಧ್ಯಮಗಳ ವಿರುದ್ಧವೂ ಕ್ರಮ ತೆಗೆದುಕೊಳ್ಳಬೇಕು ಎಂದು ಹಾವೇರಿ ಪೋಲಿಸರನ್ನು ಒತ್ತಾಯಿಸಿದ್ದಾರೆ.

ಈ ವಿಚಾರವಾಗಿ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸೆನ್(ಸೈಬರ್, ಆರ್ಥಿಕ ಹಾಗೂ ಮಾದಕ ದ್ರವ್ಯ ನಿಯಂತ್ರಣ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೇ ವಿಚಾರವಾಗಿ ಕನ್ನಡ ದುನಿಯ ಇ-ಪೇಪರ್ ಸಂಪಾದಕ, ಕನ್ನಡ ನ್ಯೂಸ್ ಇ-ಪೇಪರ್ ಸಂಪಾದಕರ ವಿರುದ್ಧವೂ FIR ದಾಖಲಾಗಿದೆ. ಸುನೀಲ್ ಹುಚ್ಚಣ್ಣನವರ ಎಂಬವರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

Fact Check: ಜಮೀನು ಪಹಣಿಯಲ್ಲಿ ವಕ್ಫ್‌ ಹೆಸರು ನಮೂದಾದ್ದರಿಂದ ಹಾವೇರಿ ರೈತ ಆತ್ಮಹತ್ಯೆ? ಸತ್ಯ ಇಲ್ಲಿದೆ

‘4 ಎಕರೆ ಜಮೀನಿನ ಪಹಣಿಯಲ್ಲಿ ವಕ್ಫ್ ಆಸ್ತಿ ಎಂಬುದು ನಮೂದು ಆಗಿದ್ದರಿಂದ ಮನನೊಂದು ಹಾವೇರಿ ಜಿಲ್ಲೆಯ ಹರನಗಿ ಗ್ರಾಮದ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಕ್ಫ್ ನೋಟಿಸ್ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ’ ಎಂದು ಸುಳ್ಳು ಸುದ್ದಿ ಪ್ರಕಟಿಸಲಾಗಿತ್ತು. ಇದೇ ಸುದ್ದಿಯನ್ನು ‘ಎಕ್ಸ್’ನಲ್ಲಿ ಟ್ಯಾಗ್ ಮಾಡಿದ್ದ ತೇಜಸ್ವಿ ಸೂರ್ಯ, ಸುಳ್ಳು ಸುದ್ದಿ ಹರಿಬಿಟ್ಟಿದ್ದರು’ ಎಂದು ಎಸ್ಪಿ ತಿಳಿಸಿದರು.

ಒಟ್ಟಾರೆಯಾಗಿ ಹೇಳುವುದಾದರೆ, ಹಾವೇರಿ ರೈತ ರುದ್ರಪ್ಪ ಐಸಿಐಸಿಐ ಬ್ಯಾಂಕ್ ನ ಹಾವೇರಿ ಖಾತೆಯಲ್ಲಿ 3 ಲಕ್ಷ ರೂಪಾಯಿ ಮತ್ತು ಖಾಸಗಿಯಾಗಿ ನಾಲ್ಕು ಲಕ್ಷ ರೂಪಾಯಿ ಕೈ ಸಾಲ ಮಾಡಿಕೊಂಡಿದ್ದರು. ಅತಿ ಹೆಚ್ಚು ಮಳೆಯಾಗಿ ಬೆಳೆಯು ಹಾನಿಯಾಗಿದ್ದರಿಂದ ಮನನೊಂದು ದಿನಾಂಕ 06.01.2022 ರಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ ಮಾಧ್ಯಮಗಳಲ್ಲಿ ಜಮೀನು ಪಹಣಿಯಲ್ಲಿ ವಕ್ಫ್ ಹೆಸರಿದೆ ಎಂಬ ಕಾರಣಕ್ಕೆ ರೈತ ರುದ್ರಪ್ಪ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಮಾಧ್ಯಮಗಳು ಸೇರಿದಂತೆ, ಸಂಸದ ತೇಜಸ್ವಿ ಸೂರ್ಯ ಸುಳ್ಳು ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಫುಟ್ಬಾಲ್ ಪಂದ್ಯಾವಳಿಯಲ್ಲಿ ಸಿಡಿಸಿದ ಪಟಾಕಿ ದೃಶ್ಯಗಳನ್ನು ನಾಗಲ್ಯಾಂಡ್‌ನಲ್ಲಿ ಹಿಂದೂಗಳ ದೀಪಾವಳಿ ಆಚರಣೆ ಎಂದು ತಪ್ಪಾಗಿ ಹಂಚಿಕೆ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights