FACT CHECK | ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಕಾಂಗ್ರೆಸ್ ಪ್ರಚಾರದಲ್ಲಿ ಪಾಕಿಸ್ತಾನ ಧ್ವಜದ ಪ್ರರ್ದಶನ ಮಾಡಲಾಗಿದೆಯೇ?

ಮಹಾರಾಷ್ಟ್ರ ವಿಧಾನಸಭೆ ಚುನಾವಣಾ ಪ್ರಚಾರ ಸೋಮವಾರ ಸಂಜೆ ಅಂತ್ಯಗೊಂಡಿದೆ. ನವೆಂಬರ್ 20 ರಂದು ಮಹಾರಾಷ್ಟ್ರದ ಎಲ್ಲಾ 288 ಸ್ಥಾನಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಇತ್ತ ಮತದಾನ ಮಾಡಲು ತಯಾರಿ ನಡೆಸುತ್ತಿರುವಾಗ, ಕಾಂಗ್ರೆಸ್ ಪಕ್ಷದ ರ್‍ಯಾಲಿಯನ್ನು ತೋರಿಸುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಕ್ಲಿಪ್‌ನಲ್ಲಿ, ಬೈಕ್ ಮತ್ತು ಕಾರುಗಳಲ್ಲಿ ಜನರ ದೊಡ್ಡ ಗುಂಪನ್ನು ಕಾಣಬಹುದು. ಇದು ಅಕೋಲಾ ಪಶ್ಚಿಮ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಜಿದ್ ಖಾನ್ ಅವರ ಚುನಾವಣಾ ರ್ಯಾಲಿ, ಇದರಲ್ಲಿ ಪಾಕಿಸ್ತಾನ ಧ್ವಜ ಪ್ರದರ್ಶಿಸಲಾಗಿದೆ ಎಂದು ಪ್ರತಿಪಾದಿಸಿ ಕೆಲವು ಸಾಮಾಜಿಕ ಮಾಧ್ಯಮ ಬಳಕೆದಾರರು ಪೋಸ್ಟ್‌ಅನ್ನು ಹಂಚಿಕೊಳ್ಳುತ್ತಿದ್ದಾರೆ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು, ವೈರಲ್ ವಿಡಿಯೋದ ಕೀಫ್ರೇಮ್‌ಗಳನ್ನು ತೆಗೆದು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಅಕ್ಟೋಬರ್ 2024 ರಲ್ಲಿ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿದ ಅದೇ ವಿಡಿಯೋ ಲಭ್ಯವಾಗಿದೆ. ವಿಡಿಯೋ ಶೀರ್ಷಿಕೆಯ ಪ್ರಕಾರ, ವಿಡಿಯೋ ಮಹಾರಾಷ್ಟ್ರದ ಲಾತೂರ್‌ನಲ್ಲಿ ನಡೆದ ಈದ್-ಇ-ಮಿಲಾದ್ ಬೈಕ್ ರ್ಯಾಲಿಯದ್ದಾಗಿದೆ.

ಈ ಮಾಹಿತಿಯ ಆಧಾರದ ಮೇಲೆ ಲಾತೂರ್‌ನಲ್ಲಿ ನಡೆದ ಈದ್-ಎ-ಮಿಲಾದ್ ರ್‍ಯಾಲಿಯ ಹಲವು ಇತರ ವಿಡಿಯೋಗಳು ಲಭ್ಯವಾಗಿವೆ. ಸೆಪ್ಟೆಂಬರ್ 19, 2024 ರಂದು ಲಾತೂರ್ ನ್ಯೂಸ್ ಅಪ್‌ಲೋಡ್ ಮಾಡಿದ ವಿಡಿಯೋದಲ್ಲಿ, ವೈರಲ್ ವೀಡಿಯೊವನ್ನು ಹೋಲುವ ದೃಶ್ಯಗಳನ್ನು ಕಾಣಬಹುದು.

ವಿಡಿಯೋ ಕುರಿತು ಹೆಚ್ಚಿನ ಮಾಹಿತಿಗಾಗಿ, ಖಾಸಗಿ ವೆಬ್​ಸೈಟ್‌ವೊಂದು ಅಕೋಲಾ ಪಶ್ಚಿಮದ ಕಾಂಗ್ರೆಸ್ ಅಭ್ಯರ್ಥಿ ಸಾಜಿದ್ ಖಾನ್ ಪಠಾಣ್ ಅವರನ್ನು ಸಂಪರ್ಕಿಸಿದೆ. ವೈರಲ್ ವಿಡಿಯೋ ಅವರ ರ್‍ಯಾಲಿಯದ್ದಲ್ಲ ಅಥವಾ ಅಂತಹ ಯಾವುದೇ ರ್‍ಯಾಲಿಯನ್ನು ಅವರು ಮಡಿಲ್ಲ ಎಂದು ಸಾಜಿದ್ ಖಾನ್ ತಿಳಿಸಿದ್ದಾರೆ.

ಸೋಶಿಯಲ್ ಮೀಡಿಯಾ ಬಳಕೆದಾರರು ಕೆಲವು ತಿಂಗಳ ಹಿಂದೆ ಹರ್ಯಾಣದ ಮೇವಾತ್‌ನಲ್ಲಿ ನಡೆದ ಕಾಂಗ್ರೆಸ್ ರ್‍ಯಾಲಿಗೆ ಲಿಂಕ್ ಮಾಡಿ ಇದೇ ವೈರಲ್ ಕ್ಲಿಪ್ ಅನ್ನು ಹಂಚಿಕೊಂಡಿದ್ದರು. ಅಕೋಲಾ ಪಶ್ಚಿಮ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಜಿದ್ ಖಾನ್ ಪಠಾಣ್ ಅವರ ಚುನಾವಣಾ ಪ್ರಚಾರದ ವಿಡಿಯೋಗಳನ್ನು ಕೂಡ ನಾವು ನೋಡಿದ್ದೇವೆ. ಅದು ಈ ವೈರಲ್ ಕ್ಲಿಪ್‌ಗೆ ಯಾವುದೇ ಹೋಲಿಕೆಯನ್ನು ಹೊಂದಿಲ್ಲ.

ಒಟ್ಟಾರೆಯಾಗಿ ಹೇಳುವುದಾದರೆ, ಲಾತೂರ್‌ನಲ್ಲಿ ನಡೆದ ಈದ್-ಎ-ಮಿಲಾದ್ ರ್‍ಯಾಲಿಯ ವಿಡಿಯೋವನ್ನು ಕಾಂಗ್ರೆಸ್ ಅಭ್ಯರ್ಥಿಯ 2024ರ ಚುನಾವಣಾ ರ್ಯಾಲಿ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೊಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ದೇವಸ್ಥಾನಗಳಲ್ಲಿ ‘ಓಂ ನಮಃ ಶಿವಾಯ’ ಎಂಬ ಮಂತ್ರ ಪಠಿಸುವುದನ್ನು ತಮಿಳುನಾಡು ಸರ್ಕಾರ ನಿರ್ಭಂಧಿಸಿದಿಯೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights