FACT CHECK | ತಮಿಳು ನಟ ವಿಜಯ್ ತಮ್ಮ ಟಿವಿಕೆ ಪಕ್ಷವನ್ನು BJPಯೊಂದಿಗೆ ಮೈತ್ರಿ ಮಾಡಿಕೊಂಡಿರುವುದು ನಿಜವೇ?

ತಮಿಳುನಾಡಿನಲ್ಲಿ ಇತ್ತೀಚೆಗೆ ತಮಿಳು ಚಿತ್ರರಂಗದ ಖ್ಯಾತ ನಟ ವಿಜಯ್ ಅವರು ತಮ್ಮ ರಾಜಕೀಯ ಮಹತ್ವಾಕಾಂಕ್ಷೆಯೊಂದಿಗೆ  ‘ತಮಿಳಗ ವೆಟ್ರಿ ಕಳಗಂ–ಟಿವಿಕೆ’ (Tamilaga Vettri Kazhagam) ಎಂಬ ಪಕ್ಷವನ್ನು ತಮಿಳಿಗರ ಮುಂದೆ ತೆರೆದಿಟ್ಟಿದ್ದರು. 11 ಅಕ್ಟೋಬರ್ 2024 ರಂದು ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯಲ್ಲಿ ತಮ್ಮ ತಮಿಳಿಗ ವೆಟ್ರಿ ಕಳಗಂ ಪಕ್ಷದ ಬೃಹತ್ ಸಮಾವೇಶವನ್ನು ನಡೆಸಿದ್ದರು. ಈಗ ತಮ್ಮ ಪಕ್ಷ ತಮಿಳಗ ವೆಟ್ರಿ ಕಳಗಂ–ಟಿವಿಕೆ BJP ಯೊಂದಿಗೆ ಮೈತ್ರಿ ಮಾಡಿಕೊಂಡಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ಲಂಡನ್‌ನಲ್ಲಿ ವಿಜಯ್ ಅವರು ತಮಿಳುನಾಡು ಬಿಜೆಪಿ ರಾಜ್ಯಧ್ಯಕ್ಷ ಅಣ್ಣಮಲೈ ಅವರನ್ನು ಭೇಟಿಯಾಗಿದ್ದಾರೆ. ಹೀಗಾಗಿ ವಿಜಯ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವುದು ಖಚಿತವಾಗಿದೆ ಎಂದು ಹಂಚಿಕೊಳ್ಳಲಾಗುತ್ತಿದೆ.

2026ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ವಿಜಯ್ ಅವರ ನೇತೃತ್ವದ ತಮಿಳಿಗ ವೆಟ್ರಿ ಕಳಗಂ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ. ಆ ಮೂಲಕ ದಕ್ಷಿಣ ಭಾರತದ ದ್ರಾವಿಡ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಡಿಎಂಕೆ ಮತ್ತು ಬಿಜೆಪಿ ಬೆಂಬಲಿಗರು ಪೋಸ್ಟ್ ಮಾಡುತ್ತಿದ್ದಾರೆ.

ಹಾಗಿದ್ದರೆ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವಂತೆ ನಟ ವಿಜಯ್ ಅವರ ಪಕ್ಷವು BJPಯೊಂದಿಗೆ ಮೈತ್ರಿ ಮಾಡುಕೊಳ್ಳುವ ಸೂಕನೆ ನೀಡಿರುವುದು ನಿಜವೇ ಎಂದು ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಕೀ ವರ್ಡ್‌ಗಳನ್ನು ಬಳಸಿ ಗೂಗಲ್ ಸರ್ಚ್ ಮಾಡಿದಾಗ, ಟಿವಿಕೆ ಪ್ರಧಾನ ಕಾರ್ಯದರ್ಶಿ, ಬುಸ್ಸಿ ಆನಂದ್ ಅವರ ಅಧಿಕೃತ ಎಕ್ಸ್ ಖಾತೆಯಲ್ಲಿ 18 ನವಂಬರ್ 2024 ರಂದು ಹಂಚಿಕೊಂಡ ಪೋಸ್ಟ್‌ವೊಂದು ಲಭ್ಯವಾಗಿದೆ. ಇದರಲ್ಲಿ ಅವರು ಎಐಎಡಿಎಂಕೆ ಜೊತೆಗಿನ ಮೈತ್ರಿ ವದಂತಿಯನ್ನು ನಿರಾಕರಿಸಿರುವುದು ಕಂಡುಬಂದಿದೆ

ಈ ಬಗ್ಗೆ ಮತ್ತಷ್ಟು ಮಾಹಿತಿ ತಿಳಿಯಲು ಕೀವರ್ಡ್‌ಗಳನ್ನು ಬಳಸಿಕೊಂಡು ಟಿವಿಕೆ ಮತ್ತು ಬಿಜೆಪಿ ನಡುವಿನ ಮೈತ್ರಿ ಬಗ್ಗೆ ಯಾವುದಾದರೂ ವರದಿಗಳು ಪ್ರಕಟವಾಗಿದೆಯೇ ಎಂದು ಸರ್ಚ್ ಮಾಡಿದಾಗ ಅದಕ್ಕೆ ಸಂಬಂಧಪಟ್ಟ ಯಾವುದೇ ಅಧಿಕೃತ ವರದಿಗಳು ಕಂಡುಬಂದಿಲ್ಲ. ಇನ್ನು ವೈರಲ್ ಫೋಟೋದ ಕೀ ಫ್ರೇಮ್‌ಗಳನ್ನು ಇನ್ನಷ್ಟು ಪರಿಶೀಲನೆಗೆ ಒಳಪಡಿಸಿದಾಗ, 2 ಫೆಬ್ರವರಿ 2022 ರಂದು ಟೈಮ್ಸ್ ಆಫ್ ಇಂಡಿಯಾ ಮತ್ತು ಝೀ ನ್ಯೂಸ್‌ನ ವರದಿ ಲಭ್ಯವಾಗಿದೆ. ಈ ವರದಿಗಳಲ್ಲಿ ತಮಿಳುನಾಡು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಹಿನ್ನೆಲೆಯಲ್ಲಿ ಪುದುಚೇರಿಯ ರಂಗಸ್ವಾಮಿ ಅವರು ವಿಜಯವರನ್ನು ಪಣಯೂರಿನಲ್ಲಿ ಅವರ ನಿವಾಸಕ್ಕೆ ತೆರಳಿ ಭೇಟಿ ಮಾಡಿದ್ದಾರೆ ಎಂದು ಫೋಟೋ ಹಂಚಿಕೊಂಡಿರುವುದು ಕಂಡು ಬಂದಿದೆ. ಈ ಫೋಟೋ ವೈರಲ್ ಫೋಟೋಗೆ ಸಾಕಷ್ಟು ಹೋಲಿಕೆ ಇದ್ದು ಇದು ಡಿಜಿಟಲ್ ಆಗಿ ಎಡಿಟ್ ಮಾಡಲಾಗಿದೆ ಎಂಬುದು ಕಂಡು ಬಂದಿದೆ.

ಇನ್ನು ವೈರಲ್‌ ಪೋಸ್ಟ್‌ನಲ್ಲಿ ಹಂಚಿಕೊಂಡಿರುವುದು ನಿಜವೇ ಆಗಿದ್ದರೆ ಆ ಬಗ್ಗೆ ಟಿವಿಕೆ ತನ್ನ ಅಧಿಕೃತ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಸ್ಪಷ್ಟನೆಯನ್ನು ನೀಡಬೇಕಿತ್ತು. ಹೀಗಾಗಿ ಹೆಚ್ಚಿನ ಮಾಹಿತಿಗಾಗಿ ಟಿವಿಕೆಯ ಅಧಿಕೃತ ಸಾಮಾಜಿಕ ಜಾಲತಾಣದ ಖಾತೆಗಳನ್ನು ಕೂಡ ನಾವು ಪರಿಶೀಲನೆ ನಡೆಸಿದೆವು. ಆದರೆ ಇದಕ್ಕೆ ಸಂಬಂಧಪಟ್ಟಂತೆ ಯಾವುದೇ ಅಧಿಕೃತ ಮಾಹಿತಿಗಳು ಟಿವಿಕೆಯ  ಖಾತೆಗಳಲ್ಲಿ ಕಂಡುಬಂದಿಲ್ಲ. ಹಾಗಾಗಿ ವೈರಲ್ ಪೋಸ್ಟ್ ಸುಳ್ಳು ಎಂಬುದು ಇದರಿಂದ ಸ್ಪಷ್ಟವಾಗುತ್ತದೆ.

ಒಟ್ಟಾರೆಯಾಗಿ ಹೇಳುವುದಾದರೆ,ಇತ್ತೀಚಿಗೆ ಲಂಡನ್‌ನಲ್ಲಿ ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್‌ ಅವರು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾದ ಅಣ್ಣಾಮಲೈ ಅವರನ್ನು ಭೇಟಿಯಾಗಿದ್ದಾರೆ ಮತ್ತು ಬಿಜೆಪಿಯೊಂದಿಗೆ ಟಿವಿಕೆ 2026 ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲಿದ್ದಾರೆ ಎಂಬ ಪೋಸ್ಟ್ ಸುಳ್ಳಾಗಿದೆ. ಹಾಗೆ ಅಣ್ಣಾಮಲೈ ಅವರೊಂದಿಗೆ ವಿಜಯ್ ನಿಂತಿರುವ ಫೋಟೋವನ್ನು ಡಿಜಿಟಲ್ ಆಗಿ ಎಡಿಟ್ ಮಾಡಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಸೈನಿಕನ ತಾಯಿ ಎಳನೀರು ವ್ಯಾಪಾರ ಮಾಡುವಾಗ ನಡೆದ ಅನಿರೀಕ್ಷಿತ ಘಟನೆ ಎಂದು ಸ್ಕ್ರಿಪ್ಟ್‌ ಮಾಡಿದ ವಿಡಿಯೋ ಹಂಚಿಕೆ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights