FACT CHECK | EVM ಸಾಗಿಸುವಾಗ BJP ಕಾರ್ಯಕರ್ತರು ಸಿಕ್ಕಿಬಿದ್ದಿದ್ದಾರೆ ಎಂಬುದು ನಿಜವೇ?
ಮಹಾರಾಷ್ಟ್ರದ ನಾಗ್ಪುರದಲ್ಲಿ ಚುನಾವಣೆಯಲ್ಲಿ ಬಳಸಲಾದ ಇವಿಎಂಗಳನ್ನು ಬಿಜೆಪಿ ಕಾರ್ಯಕರ್ತರು ಸಾಗಿಸುವಾಗ ಸಿಕ್ಕಿಬಿದ್ದಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.
ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಕಾರ್ಯಚರಣೆಯಲ್ಲಿ ಸಿಕ್ಕಿಬಿದ್ದ ಬಿಜೆಪಿಯ ಬೆಂಬಲಿಗರು ಇವಿಎಂ ಯಂತ್ರಗಳನ್ನು ಬಿಟ್ಟು, ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರ ನೆರವಿನಿಂದ ಅವರನ್ನು ಬಂಧಿಸಲಾಗಿದೆ. ಇದರಿಂದ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಮೇಲುಗೈ ಸಾಧಿಸಲು ಕಾರಣ ಏನು ಎಂಬುದು ಈಗ ಸ್ಪಷ್ಟವಾಗಿದೆ ಎಂದು ಹಲವರು ವಿಡಿಯೋವೊಂದನ್ನು ಹಂಚಿಕೊಳ್ಳುತ್ತಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್‌ಚೆಕ್ :
ವೈರಲ್ ವಿಡಿಯೋದ ಪ್ರಮುಖ ಕೀ ಫ್ರೇಮ್‌ಗಳನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಪರಿಶೀಲನೆ ಮಾಡಿದಾಗ ಈ ವಿಡಿಯೋವನ್ನು ಹಲವು ಸುದ್ದಿ ವರದಿಗಳಲ್ಲಿ ಕಾಣಿಸಿಕೊಂಡಿರುವುದು ಲಭ್ಯವಾಗಿದೆ. ವರದಿಯ ಪ್ರಕಾರ ಇದು ನಾಗ್ಪುರದಲ್ಲಿ ಮತಗಟ್ಟೆಯ ಮೇಲೆ ದಾಳಿ ಮಾಡಿದ ಪ್ರಕರಣವಾಗಿದೆ, ಕೆಲವು ಜನರು ಇವಿಎಂಗಳನ್ನು ಸಾಗಿಸುತ್ತಿದ್ದ ಚುನಾವಣಾ ಅಧಿಕಾರಿಯ ವಾಹನದ ಮೇಲೆ ದಾಳಿ ಮಾಡಿದ್ದಾರೆ ಎಂದು ವರದಿಗಳಲ್ಲಿ ಉಲ್ಲೇಖವಾಗಿರುವುದು ಕಂಡು ಬಂದಿದೆ.

ಈ ಕುರಿತು ಹಲವು ವರದಿಗಳು ಲಭ್ಯವಾಗಿದ್ದು, ಅದರಲ್ಲಿ ದಾಳಿಗೊಳಗಾದ ವಾಹನದಲ್ಲಿ ಇರಿಸಲಾದ ಇವಿಎಂ ಮೀಸಲು ಇವಿಎಂ ಆಗಿದ್ದು, ಮತದಾನದಲ್ಲಿ ಬಳಸಿದ ಇವಿಎಂ ಅಲ್ಲ ಎಂದು ನಾಗ್ಪುರ ಡೆಪ್ಯುಟಿ ಕಲೆಕ್ಟರ್ ಪ್ರವೀಣ್ ಮಹಿರೆ ಅವರು ಹೇಳಿಕೆ ನೀಡಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಯಾವುದೇ ವರದಿಗಲ್ಲಿ ಕೂಡ ಬಿಜೆಪಿ ಬೆಂಬಲಿಗರು ಇವಿಎಂ ಯಂತ್ರಗಳನ್ನು ತೆಗೆದುಕೊಂಡು ಹೋಗುವಾಗ ಸಿಕ್ಕಿಬಿದ್ದಿದ್ದಾರೆ ಎಂಬ ಅಂಶವೇ ಉಲ್ಲೇಖವಾಗಿಲ್ಲ. ಹೀಗಾಗಿ ವೈರಲ್ ಪೋಸ್ಟ್ ನಂಬಲು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ.
ಒಟ್ಟಾರೆಯಾಗಿ ಹೇಳುವುದಾದರೆ, ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ರೀತಿಯಲ್ಲಿ ಮಹಾರಾಷ್ಟ್ರದ ನಾಗ್ಪುರದಲ್ಲಿ ಚುನಾವಣೆಯಲ್ಲಿ ಬಳಸಲಾದ ಇವಿಎಂಗಳನ್ನು ಬಿಜೆಪಿ ಕಾರ್ಯಕರ್ತರು ಸಾಗಿಸುವಾಗ ಸಿಕ್ಕಿಬಿದ್ದಿದ್ದಾರೆ ಎಂಬುದು ಸುಳ್ಳು. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | ಒಂದು ದಿನಕ್ಕೆ ರೂ 1ಲಕ್ಷ ಸಂಪಾದನೆ ಮಾಡುವಂತೆ ಹೇಳಿದ್ರಾ ಸುಧಾಮೂರ್ತಿ?

