FACT CHECK | ಬಾಂಗ್ಲಾದೇಶದ ಹಳ್ಳಿಗಳಲ್ಲಿ ಹಿಂದೂಗಳನ್ನು ಮುಸ್ಲಿಮರು ಹತ್ಯೆ ಮಾಡುತ್ತಿದ್ದಾರೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ
‘‘ಬಾಂಗ್ಲಾದೇಶದ ಮುಸ್ಲಿಮರು ಈಗ ಹಳ್ಳಿಗಳಲ್ಲಿ ಮತ್ತು ಬಾಂಗ್ಲಾದೇಶದ ದೂರದ ಪ್ರದೇಶಗಳಲ್ಲಿ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಹಿಂದೂಗಳನ್ನು ಕೊಲ್ಲುತ್ತಿದ್ದಾರೆ. ಹಿಂದೂಗಳ ಮನೆಗಳನ್ನು ಸುಡುವುದು, ಅವರ ಹೊಲಗಳನ್ನು ಆಕ್ರಮಿಸಿಕೊಳ್ಳುತ್ತಿದ್ದಾರೆ. ನಮ್ಮ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಮಾಡುತ್ತಿದ್ದಾರೆ’’ ಎಂದು ಬರೆದು ಎಕ್ಸ್ ಬಳಕೆದಾರರೊಬ್ಬರು ಈ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಈ ವೀಡಿಯೊದ 0:50 ಸೆಕಂಡ್ನ ಕ್ಲಿಪ್ನಲ್ಲಿ ವೈರಲ್ ವೀಡಿಯೊವನ್ನು ಹೋಲುವ ದೃಶ್ಯಾವಳಿಗಳನ್ನು ಕಾಣಬಹುದು.

ಹಾಗೆಯೆ ಬಾಂಗ್ಲಾದೇಶ ಮತ್ತೊಂದು ಸುದ್ದಿ ಮಾಧ್ಯಮ ಜಮುನ ಟಿವಿ ಕೂಡ ತನ್ನ ಯೂಟ್ಯೂಬ್ ಚಾನೆಲ್ನಲ್ಲಿ ನವೆಂಬರ್ 28, 2024ರಂದು ‘‘ಶೇರ್ಪುರ್ ದರ್ಬಾರ್ ಷರೀಫ್ ಧ್ವಂಸ ಮತ್ತು ಲೂಟಿ’’ ಎಂದ ಶೀರ್ಷಿಕೆಯಲ್ಲಿ ವೀಡಿಯೊವನ್ನು ಹಂಚಿಕೊಂಡಿದೆ. ಈ ವೀಡಿಯೊದ 1 ನಿಮಿಷ 8 ಸೆಕಂಡ್ನ ಕ್ಲಿಪ್ನಲ್ಲಿ ವೈರಲ್ ವೀಡಿಯೊವನ್ನು ಹೋಲುವ ದೃಶ್ಯಾವಳಿಗಳಿವೆ.
ಈ ವೀಡಿಯೊದ ವಿವರಣೆಯಲ್ಲಿ, ‘‘ಶೇರ್ಪುರ್ ಸದರ್ನಲ್ಲಿರುವ ದೋಜಾ ಪೀರ್ನ ದರ್ಬಾರ್ನಲ್ಲಿ ದಾಳಿ, ವಿಧ್ವಂಸಕ ಕೃತ್ಯ ಮತ್ತು ಬೆಂಕಿ ಹಚ್ಚಿದ ಘಟನೆ ನಡೆದಿದೆ. ಅನೈತಿಕ ಚಟುವಟಿಕೆಗಳ ಆರೋಪ ಹೊರಿಸಿ ಮುರ್ಷಿದ್ಪುರ ಗ್ರಾಮಸ್ಥರು ಸ್ಥಳೀಯ ಕ್ವಾಮಿ ಮದರಸಾದ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಜತೆಗೂಡಿ ದರ್ಬಾರ್ ಷರೀಫ್ ಮುಚ್ಚುವಂತೆ ಒತ್ತಾಯಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಮಂಗಳವಾರ ಗ್ರಾಮಸ್ಥರು ಪೀರನ ಹಿಂಬಾಲಕರೊಂದಿಗೆ ವಾಗ್ವಾದ ನಡೆಸಿದ್ದಾರೆ’’ ಎಂಬ ಮಾಹಿತಿ ಇದೆ.
ಈ ಆಧಾರದ ಮೇಲೆ ನಾವು ಗೂಗಲ್ನಲ್ಲಿ ಕೀವರ್ಡ್ ಸರ್ಚ್ ಗಳನ್ನು ನಡೆಸಿದ್ದು ಈ ಘಟನೆಯ ಕುರಿತ ವರದಿಗಳನ್ನು ನೋಡಿದ್ದೇವೆ. ಢಾಕಾ ಟ್ರಿಬ್ಯೂನ್ 26 ನವೆಂಬರ್ 2024 ರಂದು, ‘‘ಶೇರ್ಪುರದ ಲಚ್ಮನ್ಪುರ ಪ್ರದೇಶದಲ್ಲಿ ಖ್ವಾಜಾ ಬದ್ರುದ್ದೀನ್ ಹೈದರ್ ನೇತೃತ್ವದ ಮುರ್ಷಿದ್ಪುರ್ ದರ್ಬಾರ್ ಷರೀಫ್ ಮೇಲೆ ನಡೆದ ವಿಧ್ವಂಸಕ ಮತ್ತು ಲೂಟಿಗೆ ಸಂಬಂಧಿಸಿದಂತೆ ಪೊಲೀಸರು ಏಳು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ದರ್ಬಾರ್ ನಲ್ಲಿ ಇಸ್ಲಾಂ ವಿರೋಧಿ ಚಟುವಟಿಕೆಗಳು ನಡೆದಿವೆ. ಸ್ಥಳೀಯ ಮದ್ರಸಾ ಶಿಕ್ಷಕರು ಮತ್ತು ನಿವಾಸಿಗಳ ಆರೋಪದ ನಂತರ ಈ ದಾಳಿ ನಡೆದಿದೆ. ಸುಮಾರು 400-500 ಜನರು ಸೈಟ್ಗೆ ನುಗ್ಗಿದ್ದು, ಬೇಲಿಗಳನ್ನು ಮುರಿದು ಆಸ್ತಿಯನ್ನು ಹಾನಿಗೊಳಿಸಿದ್ದಾರೆ’’ ಎಂದು ವರದಿ ಮಾಡಿದೆ.
ನವೆಂಬರ್ 28, 2024ರ ದಿ ಡೈಲಿ ಸ್ಟಾರ್ ಇದೇ ವೈರಲ್ ವೀಡಿಯೊಕ್ಕೆ ಹೋಲುವ ಫೋಟೋವನ್ನು ಹಂಚಿಕೊಂಡು ವರದಿ ಮಾಡಿದೆ. ‘‘ಶೇರ್ಪುರ್ ಸದರ್ ಉಪಜಿಲ್ಲೆಯಲ್ಲಿರುವ ಮುರ್ಷಿದ್ಪುರ್ ದರ್ಬಾರ್ ಷರೀಫ್ ಎಂದೂ ಕರೆಯಲ್ಪಡುವ ದೋಜಾ ಪಿರೇರ್ ದರ್ಬಾರ್ ಮೇಲೆ ನೂರಕ್ಕೂ ಹೆಚ್ಚು ಜನರ ಗುಂಪೊಂದು ನಿನ್ನೆ ಮತ್ತೊಮ್ಮೆ ದಾಳಿ ಮಾಡಿದೆ. ಇದು ಮೂರು ದಿನಗಳಲ್ಲಿ ಶ್ರದ್ಧಾಕೇಂದ್ರದ ಮೇಲೆ ಎರಡನೇ ದಾಳಿಯಾಗಿದೆ. ಮಂಗಳವಾರ, ಶ್ರದ್ಧಾಕೇಂದ್ರದ ಮೇಲೆ ನಡೆದ ದಾಳಿಯ ನಂತರ ಘರ್ಷಣೆ ಸಂಭವಿಸಿತು, ಇದರ ಪರಿಣಾಮವಾಗಿ ಒಬ್ಬರು ಸಾವನ್ನಪ್ಪಿದರು. ನಿನ್ನೆಯ ದಾಳಿಯು ಸುಮಾರು ಮೂರು ಗಂಟೆಗಳ ಕಾಲ ಮುಂದುವರೆಯಿತು, ಈ ಸಮಯದಲ್ಲಿ ಜನಸಮೂಹವು ಶ್ರದ್ಧಾಕೇಂದ್ರದ ಲೂಟಿ ಮಾಡಿ ಸುಟ್ಟುಹಾಕಿತು’’ ಎಂದಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | BJP ಗೆ ಮತ ಹಾಕಬೇಡಿ ಎಂದು ಬಾಲಿವುಡ್ ನಟ ಪ್ರಚಾರ ಮಾಡುತ್ತಿರುವ ವಿಡಿಯೋದ ಅಸಲೀಯತ್ತೇನು?

