FACT CHECK | ದೆಹಲಿಯ JNU ವಿವಿ ಹೆಸರನ್ನು ಡಾ. ಬಿಆರ್‌ ಅಂಬೇಡ್ಕರ್ ವಿವಿ ಎಂದು ಬದಲಾಯಿಸಲಾಗಿದೆ?

ದೆಹಲಿಯ ಜವಹರ್‌ ಲಾಲ್‌ ನೆಹರು ವಿಶ್ವವಿದ್ಯಾಲಯ (JNU) ಹೆಸರನ್ನು ಡಾ. ಬಿಆರ್‌ ಅಂಬೇಡ್ಕರ್ ಎಂದು ಬದಲಾಯಿಸಲಾಗಿದೆ ಎಂಬ ಫೋಟೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

@LogicLitLatte ಎಂಬ ಟ್ವಿಟರ್ ಬಳಕೆದಾರರು ಸಾಮಾಜಿಕ ಮಾಧ್ಯಮದಲ್ಲಿ ಫೋಟೋವನ್ನು ಹಂಚಿಕೊಂಡಿದ್ದಾರೆ. ಬಿಜೆಪಿ ಜೆಎಸ್‌ಯು ಹೆಸರನ್ನು ಡಾ ಭೀಮ್ ರಾವ್ ಅಂಬೇಡ್ಕರ್ ಎಂದು ಬದಲಾಯಿಸಿದೆ ಎಂದು ಬರೆದುಕೊಂಡಿದ್ದಾರೆ. ಫೋಟೋದಲ್ಲಿಯೂ ಜವಹರ್‌ ಲಾಲ್‌ ನೆಹರು ವಿಶ್ವವಿದ್ಯಾಲಯವು ಈಗ ಡಾ ಬಿ ಆರ್‌ ಅಂಬೇಡ್ಕರ್‌ ವಿಶ್ವವಿದ್ಯಾಲಯ ಎಂದು ದೊಡ್ಡದಾಗಿ ಬರೆದಿದ್ದಾರೆ.

ಫೇಸ್‌ಬುಕ್‌

ಮೀನಾಕ್ಷಿ ಸುಂದರಂ ಎಂಬ ಫೇಸ್‌ಬುಕ್ ಬಳಕೆದಾರರು ಈ ಚಿತ್ರವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಹೆಸರನ್ನು ಡಾ.ಭೀಮ್ ರಾವ್ ಅಂಬೇಡ್ಕರ್ ಎಂದು ಬದಲಾಯಿಸಲಾಗಿದೆ ಎಂದು ಬರೆದುಕೊಂಡಿದ್ದಾರೆ.

ಇದೇ ರೀತಿಯ ಹೇಳಿಕೆಯೊಂದಿಗೆ ಹಲವು ಸಾಮಾಜಿಕ ಮಾಧ್ಯಮಗಳ ಬಕೆದಾರರು ಪೋಸ್ಟ್‌ಅನ್ನು ಹಂಚಿಕೊಂಡಿದ್ದು ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಹಾಗಿದ್ದರೆ ನಿಜವಾಗಿಯೂ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯಂತೆ ಬಿಜೆಪಿ JNU ಹೆಸರನ್ನು ಡಾ ಭೀಮ್ ರಾವ್ ಅಂಬೇಡ್ಕರ್ ಎಂದು ಬದಲಾಯಿಸಿದೆ ಎಂಬುದು ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು JNU ಅಧಿಕೃತ ವೆಬ್‌ಸೈಟ್‌ನಲ್ಲಿ ಸರ್ಚ್ ಮಾಡಿದಾಗ,ಇದರ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಗೂಗಲ್‌ನಲ್ಲಿ ಹಲವು ವೆಬ್‌ಸೈಟ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ವಿಶ್ವವಿದ್ಯಾಲಯದ ಹೆಸರನ್ನು ಬದಲಾವಣೆ ಮಾಡುವ ಬಗ್ಗೆ ಈ ಹಿಂದೆ ಪ್ರಸ್ತಾವನೆ ಇತ್ತಾ ಎಂಬ ಬಗ್ಗೆ ಪರಿಶೀಲನೆ ನಡೆಸಿದಾಗ ಈ ಬಗ್ಗೆ ಹಲವು ಮಾಧ್ಯಮಗಳಲ್ಲಿ ವರದಿ ಮಾಡಿವೆ. ನವಭಾರತ್ ಟೈಮ್ಸ್‌ ವೆಬ್‌ಸೈಟ್‌ನಲ್ಲಿ 2021 ರ ವರದಿ ಲಭ್ಯವಾಗಿದೆ. ಅದರಲ್ಲಿ JNU ಹೆಸರನ್ನು ಬದಲಾಯಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಬಳಿ ಇಲ್ಲ ಎಂದು ಅಂದಿನ ಕೇಂದ್ರ ಶಿಕ್ಷಣ ಸಚಿವ ನಿಶಾಂಕ್ ತಿಳಿಸಿದ್ದಾರೆ.

a i (1)

ಪೋಸ್ಟ್‌ನಲ್ಲಿ ಹಂಚಿಕೊಂಡ ಫೋಟೋದ ಅಸಲೀಯತ್ತನ್ನು ತಿಳಿಯಲು decopy.ai ಹೆಸರಿನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದಾಗ ಫಲಿತಾಂಶಗಳ ಫೋಟೋ ಸುಳ್ಳು ಎಂದು ಬಂದಿದೆ. ಆ ನಂತರ ಟ್ರೂ ಮೀಡಿಯಾದಲ್ಲಿ ಫೋಟೋ ಅಪ್ಲೋಡ್ ಮಾಡಿದಾಗ ಅದರ ಫಲಿತಾಂಶದ ಪ್ರಕಾರ, ಫೋಟೋವನ್ನು ತಿದ್ಧಲಾಗಿದ್ದು, ಎಐ ರಚಿಸಿದ ಚಿತ್ರ ಎಂದು ಪತ್ತೆಯಾಗಿದೆ.

a 1

ಇತ್ತೀಚೆಗೆ ರಾಜ್ಯಸಭೆಯಲ್ಲಿ ಅಮಿತ್ ಶಾ ಡಾ ಬಿಆರ್‌ ಅಂಬೇಡ್ಕರ್ ಅವರ ಹೆಸರಿನ್ನು ಉಲ್ಲೇಖಿಸಿ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ನಡೆದ ಪ್ರತಿಭಟನೆಯ ಹಿನ್ನಲೆ ಲಾಭ ಪಡೆಯಲು ಕೆಲವು ಸಾಮಾಜಿಕ ಮಾಧ್ಯಮ ಬಳಕೆದಾರರು, ದೆಹಲಿಯ ಜವಹರ್‌ ಲಾಲ್‌ ನೆಹರು ವಿಶ್ವವಿದ್ಯಾಲಯ (JNU) ಹೆಸರನ್ನು ಡಾ. ಬಿಆರ್‌ ಅಂಬೇಡ್ಕರ್ ಎಂದು ಬದಲಾಯಿಸಲಾಗಿದೆ ಎಂಬ ಫೋಟೋವನ್ನು ಹಂಚಿಕೊಳ್ಳಲಾಗುತ್ತಿದೆ. ಆದರೆ ಇದು ಸುಳ್ಳು ಎಂಬುದು ಸ್ಪಷ್ಟವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಜೆಎನ್‌ಯು ಹೆಸರನ್ನು ಡಾ. ಬಿಆರ್‌ ಅಂಬೇಡ್ಕರ್ ಎಂದು ಬದಲಾಯಿಸಲಾಗಿದೆ ಎಂದು ಹಂಚಿಕೊಳ್ಳಲಾದ ಹೇಳಿಕೆ ಸಂಪೂರ್ಣ ಸುಳ್ಳು. ಆ ರೀತಿ ಯಾವುದೇ ಕ್ರಮವನ್ನು ಸರ್ಕಾರ, ಶಿಕ್ಷಣ ಇಲಾಖೆ ಮಾಡಿಲ್ಲ. ಇನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರವ ಫೋಟೋ AIನಿಂದ ರಚಿಸಲಾಗಿದೆ ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಬಾಬರಿ ಮಸೀದಿ ಕುರಿತ ಸಾಕ್ಷ್ಯಚಿತ್ರವನ್ನು ಬಾಂಗ್ಲಾದೇಶದಲ್ಲಿ ಸಾರ್ವಜನಿಕವಾಗಿ ಪ್ರದರ್ಶಿಸಲಾಗಿದೆಯೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights