FACT CHECK | ಪ್ರಧಾನಿ ಮೋದಿ ಭಾಗವಹಿಸಿದ್ದ ಕುವೈತ್‌ ಕಾರ್ಯಕ್ರಮದಲ್ಲಿ ಕುರ್ಚಿಗಳು ಖಾಲಿ ಖಾಲಿ ಇದ್ದವೇ?

ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ 2 ದಿನಗಳ ಕುವೈತ್‌ ಪ್ರವಾಸ ಕೈಗೊಂಡಿದ್ದರು, ಅಲ್ಲಿ ನಡೆದ ಮೋದಿ ಭಾಷಣ ಕಾರ್ಯಕ್ರಮದಲ್ಲಿ ಖಾಲಿ ಕುರ್ಚಿಗಳು ಇದ್ದವು ಎಂಬ ವಿಡಿಯೋ, ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿವೆ. ಪ್ರಧಾನಿ ಮೋದಿ

ಟ್ವೀಟರ್‌ ಸೇರಿದಂತೆ ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಪ್ರಧಾನಿ ಮೋದಿಯವರ ಧ್ವನಿ ಇರುವ ವಿಡಿಯೋ ಹಂಚಿಕೊಂಡಿದ್ದಾರೆ. ಆ ವಿಡಿಯೋದಲ್ಲಿ ಪ್ರಧಾನಿ ಮೋದಿ ಅವರ ಭಾಷಣ ಧ್ವನಿ, ಖಾಲಿ ಕುರ್ಚಿಗಳಿರುವ ಸ್ಟೇಡಿಯಂ ದೃಶ್ಯಗಳು ಬರುತ್ತವೆ. ಕುವೈತ್‌ನಲ್ಲಿ ಪ್ರಧಾನಿ ಮೋದಿಯವರ ಸಮಾರಂಭದಲ್ಲಿ ಖರ್ಚಿಗಳೆಲ್ಲಾ ಖಾಲಿ ಖಾಲಿ ಎಂದು ಹೇಳಿಕೊಂಡಿದ್ದಾರೆ.

ಟ್ವೀಟರ್‌ ಬಳಕೆದಾರ @BPPDELNP ಎಂಬುವವರು ಸ್ಟೇಡಿಯಂವೊಂದರ ಸಮಾರಂಭದಲ್ಲಿ ಖಾಲಿ ಕುರ್ಚಿಗಳ ವಿಡಿಯೋಗಳನ್ನು ಹಂಚಿಕೊಂಡು. ಕುವೈತ್‌ನಲ್ಲಿ ಮೋದಿಜಿಯವರ ಕಾರ್ಯಕ್ರಮದಲ್ಲಿ ಲಕ್ಷಾಂತರ ಜನರು? ಸೋಷಿಯಲ್ ಮೀಡಿಯಾದಲ್ಲಿ ವೈರಲ್ ವಿಡಿಯೋ, ಕುರ್ಚಿಗಳೆಲ್ಲಾ ಖಾಲಿ!” ಎಂದು ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರ @KoYiKkoDaNnS ಇದೇ ವಿಡಿಯೋ ಹಂಚಿಕೊಂಡು “ಕುವೈತ್‌ನಲ್ಲಿ ಪ್ರಧಾನಿ ಮೋದಿ ಅವರ ಕಾರ್ಯಕ್ರಮ ” ಎಂದು ಬೆರೆದುಕೊಂಡಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪ್ರರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಕೀವರ್ಡ್ಗಳನ್ನು ಬಳಸಿಕೊಂಡು ಗೂಊಗಲ್ ಸರ್ಚ್ ಮಾಡಿದಾಗ, ಭಾರತದ X ಖಾತೆಗಳು ಮತ್ತು MEA ವಕ್ತಾರ ರಣಧೀರ್ ಜೈಸ್ವಾಲ್ ಹಂಚಿಕೊಂಡ ವಿಡಿಯೋ ಕ್ಲಿಪ್ ಲಭ್ಯವಾಗಿದೆ.

ಈ ಇಡಿಯೋದ 0:49 ರ ಟೈಮ್‌ಸ್ಟ್ಯಾಂಪ್‌ನಲ್ಲಿ ಪ್ರಧಾನಿ ಮೋದಿ ಕ್ರೀಡಾಂಗಣದಲ್ಲಿ ತುಂಬಿದ ಜನರನ್ನು ಉದ್ದೇಶಿಸಿ ಮಾತನಾಡುವುದನ್ನು ಪೋಸ್ಟ್‌ನಲ್ಲಿ ನೋಡಬಹುದು. ಕುವೈತ್‌ನಲ್ಲಿ ನಡೆದ ಹಲೋ ಮೋದಿ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾರತೀಯ ವಲಸಿಗರನ್ನು ಉದ್ದೇಶಿಸಿ ಮಾತನಾಡಿದರು. ಮೋದಿಯವರ ಮಾತು ಕೇಳಲು ಜನಸಾಗರವೇ ಕಾರ್ಯಕ್ರಮಕ್ಕೆ ಬಂದಿರುವುದನ್ನು ಆ ವಿಡಿಯೋಗಳಲ್ಲಿ ಸ್ಪಷ್ಟವಾಗಿ ಕಾಣಬಹುದು.

ವೈರಲ್ ವೀಡಿಯೊವು ಈವೆಂಟ್‌ನ ಪ್ರಾರಂಭದಿಂದಲೂ, ಜನರು ಇನ್ನೂ ಆಗಮಿಸುವ ಮತ್ತು ಅವರ ಆಸನಗಳು ತುಂಬಿರದ ಸಂದರ್ಭದಲ್ಲಿ ಚಿತ್ರೀಕರಿಸಲಾದ ವಿಡಿಯೋವನ್ನು ಪ್ರಧಾನಿ ಮೋದಿ ಭಾಷಣದ ವೇಳೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ. 12 ನಿಮಿಷಗಳ ವಿಡಿಯೋದಲ್ಲಿ ಪ್ರಧಾನಿ ಮೋದಿ ಭಾರತೀಯ ವಲಸಿಗರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಕಾರ್ಯಕ್ರಮದಲ್ಲಿ ಎಲ್ಲಾ ಕುರ್ಚಿಗಳು ಸಂಪೂರ್ಣ ಭರ್ತಿಯಾಗಿರುವುದು ಕಂಡುಬರುತ್ತದೆ.

ಇದರೊಂದಿಗೆ, ಪ್ರಧಾನಿ ಮೋದಿಯವರ ಸಾಮಾಜಿಕ ಮಾಧ್ಯಮಗಳ ಫೋಸ್ಟ್‌ ಅನ್ನು ಪರಿಶೀಲಿಸಿದಾಗ, ಅವುಗಳಲ್ಲಿಯೂ ಜನ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿರುವುದು ಕಂಡುಬಂದಿದೆ. PMO ಇಂಡಿಯಾದ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾದ ವಿಡಿಯೋಗಳಲ್ಲಿಯೂ ಜನದಟ್ಟಣೆ ಹೆಚ್ಚಿರುವುದನ್ನು ಕಾಣಬಹುದು. ಸುದ್ದಿ ಸಂಸ್ಥೆ ANI ಅನೇಕ ಫೋಟೋಗಳಲ್ಲಿಯೂ ಕುವೈತ್‌ನಲ್ಲಿ ಪ್ರಧಾನಿ ಮೋದಿ ಅವರ ಭಾಷಣ ನಡೆದ ಸ್ಟೇಡಿಯಂದಲ್ಲಿ ಕಾಲಿಡಲು ಜಾಗವಿರಲಿಲ್ಲ ಎಂದು ತಿಳಿದುಬಂದಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಕುವೈತ್‌ನಲ್ಲಿ ನಡೆದ ಹಾಲಾ ಮೋದಿ ಕಾರ್ಯಕ್ರಮದಲ್ಲಿ ಖಾಲಿ ಕುರ್ಚಿಗಳ ಇದ್ದವು ಎಂಬ ವಿಡಿಯೋ, ಫೋಟೋಗಳು ಸುಳ್ಳು. ವಾಸ್ತವವಾಗಿ ಪ್ರಧಾನಿ ಮೋದಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಕ್ರೀಡಾಂಗಣ ಭರ್ತಿಯಾಗಿತ್ತು. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಅಂಬೇಡ್ಕರ್ ಪ್ರತಿಮೆಗೆ ಹೂ ಮಾಲೆ ಹಾಕಿದ್ರಾ ಅಲ್ಲು ಅರ್ಜನ್‌ ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights