FACT CHECK | ಸೋನಿಯಾ ಗಾಂಧಿ ಕಾಲಿಗೆ ನಮಸ್ಕರಿಸಿದ್ರಾ ಡಾ. ಮನಮೋಹನ್ ಸಿಂಗ್?
ಇತ್ತೀಚೆಗೆ ನಿಧನರಾದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್‌ರವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರ ಕಾಲಿಗೆ ನಮಸ್ಕರಿಸಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದ್ದು, ಪೋಸ್ಟ್‌ನಲ್ಲಿ ವ್ಯಕ್ತಿಯೊಬ್ಬ ಸೋನಿಯಾ ಗಾಂಧಿಯವರ ಪಾದಗಳನ್ನು ಸ್ಪರ್ಶಿಸಿ ನಮಸ್ಕರಿಸಿರುವ ಚಿತ್ರವನ್ನು ಕಾಣಬಹುದು.
ಟ್ವಿಟರ್‌ನಲ್ಲಿ ಹಂಚಿಕೊಳ್ಳಲಾಗಿರುವ ಚಿತ್ರದಲ್ಲಿ ವ್ಯಕ್ತಿಯನ್ನು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಎಂದು ಬಣ್ಣಿಸಲಾಗಿದೆ. “ಚಮ್ಚಾಗಳು ಎಲ್ಲಿದ್ದಾರೆ?” ಎಂಬ ಶೀರ್ಷಿಕೆಯೊಂದಿಗೆ ಫೋಟೋವನ್ನು ಹಂಚಿಕೊಳ್ಳಲಾಗುತ್ತಿದೆ. ಇದೇ ಪ್ರತಿಪಾದನೆಯೊಂದಿಗೆ ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಪೋಸ್ಟ್‌ಅನ್ನು ಹಂಚಿಕೊಂಡಿದ್ದು, ಈ ಹೇಳಿಕೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್‌ಚೆಕ್ :
ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ಅನ್ನು ಪರಿಶೀಲಿಸಲು, ಫೋಟೊವನ್ನು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಗೆಟ್ಟಿ ಇಮೇಜಸ್‌ನಲ್ಲಿ ಹಂಚಿಕೊಳ್ಳಲಾದ ಮೂಲ ಚಿತ್ರವೊಂದು ಲಭ್ಯವಾಗಿದೆ. ಈ ಚಿತ್ರದಲ್ಲಿ ಕಂಡುಬರುವ ವ್ಯಕ್ತಿಯು ಡಾ. ಮನಮೋಹನ್ ಸಿಂಗ್ ಅಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಈ ಪೋಟೊದಲ್ಲಿ ಸೋನಿಯಾ ಗಾಂಧಿಯವರ ಪಾದ ಮುಟ್ಟಿ ನಮಸ್ಕರಿಸಿರುವ ವ್ಯಕ್ತಿಯನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಪ್ರತಿನಿಧಿ ಎಂದು ಗುರುತಿಸಲಾಗಿದೆ. ಈ ಫೋಟೋವನ್ನು 2011ರ ಡಿಸೆಂಬರ್ 29 ರಂದು ಭಾರತೀಯ ಯುವ ಕಾಂಗ್ರೆಸ್ ಸಮಾವೇಶದಲ್ಲಿ ತೆಗೆಯಲಾಗಿದೆ.
“2011 ನವೆಂಬರ್ 29ರಂದು ನವದೆಹಲಿಯಲ್ಲಿ ನಡೆದ ಭಾರತೀಯ ಯುವ ಕಾಂಗ್ರೆಸ್‌ನ ಚುನಾಯಿತ ಪದಾಧಿಕಾರಿಗಳ ರಾಷ್ಟ್ರೀಯ ಮಟ್ಟದ ಸಮಾವೇಶದ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಪ್ರತಿನಿಧಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಪಾದಗಳನ್ನು ಸ್ಪರ್ಶಿಸಿ ನಮಸ್ಕರಿಸಿದ್ದಾರೆ.

ಭಾರತೀಯ ಯುವ ಕಾಂಗ್ರೆಸ್ ಸಮಾವೇಶದ ಇತರ ಚಿತ್ರಗಳು ಲಭ್ಯವಾಗಿದ್ದು, ಡಾ. ಮನಮೋಹನ್ ಸಿಂಗ್ ಅವರು ನೀಲಿ ಬಣ್ಣದ ಪೇಟವನ್ನು ಧರಿಸಿದ್ದಾರೆ. ವೈರಲ್ ಫೋಟೋದಲ್ಲಿ ಗಾಂಧಿಯವರ ಪಾದಗಳನ್ನು ಸ್ಪರ್ಶಿಸಿರುವ ವ್ಯಕ್ತಿ ಕೇಸರಿ ಬಣ್ಣದ ಪೇಟವನ್ನು ಧರಿಸಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಂಗ್‌ರು ಮತ್ತು ಇತರ ಕಾಂಗ್ರೆಸ್ ಗಣ್ಯರ ಫೋಟೋ ದೊರೆತಿದೆ.
ಹಿಂದಿನಿಂದಲು ಪ್ರಧಾನಿ ಮನಮೋಹನ್ ಸಿಂಗ್‌ಅವರನ್ನು ಕಾಂಗ್ರೆಸ್ ಹೈಕಮಾಂಡ್‌ಗೆ ರಬ್ಬರ್ ಸ್ಟಾಂಪ್ ಎಂದು ದುರ್ಬಲ ಪ್ರಧಾನಿ ಎಂದು ಹೀಗಳೆಯುತ್ತಿದ್ದ ವಿರೋಧಿಗಳ ಮಾತಿಗೆ “ಸಮಕಾಲೀನ ಮಾಧ್ಯಮಗಳಿಗಿಂತ ಅಥವಾ ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಗಿಂತ ಇತಿಹಾಸವು ನನಗೆ ದಯೆ ತೋರುತ್ತದೆ ಎಂದು ನಾನು ಪ್ರಾಮಾಣಿಕವಾಗಿ ನಂಬುತ್ತೇನೆ” ಎಂದು ಮನಮೋಹನ್ ಸಿಂಗ್ ಹೇಳಿದ್ದರು. ವಿರೋಧ ಪಕ್ಷಗಳಳು ಎಷ್ಟೇ ಟೀಕೆಗಳನ್ನು ಮಾಡಿದಾಗಲೂ ಮೌನವಾಗಿಯೇ ಎದುರಿಸಿದ್ದರು.
ಒಟ್ಟಾರೆಯಾಗಿ ಹೇಳುವುದಾದರೆ, ಡಾ.ಮನಮೋಹನ ಸಿಂಗ್ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕಾಲಿಗೆ ಬಿದ್ದು ನಮಸ್ಕರಿಸಿದ್ದರು ಎಂದು ಸುಳ್ಳು ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಫೋಟೋವನ್ನು ಹಂಚಿಕೊಳ್ಳುತ್ತಿದ್ದಾರೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | ನಾನು ಕ್ರಿಶ್ಚಿಯನ್ ಎಂದು ಹೇಳಿಕೊಂಡ ಉದಯನಿಧಿ ಸ್ಟಾಲಿನ್ ಹೇಳಿಕೆಯ ಅಸಲೀಯತ್ತೇನು ಗೊತ್ತೇ?

