FACT CHECK | ಅಣ್ಣಾಮಲೈ ಚಾಟಿಯಲ್ಲಿ ಹೊಡೆದುಕೊಳ್ಳುವಾಗ ನೋವು ತಾಳಲಾರದೇ ಮೂತ್ರ ಮಾಡಿಕೊಂಡರೆ?
ಇತ್ತೀಚೆಗೆ ತಮಿಳುನಾಡಿನ ಅಣ್ಣಾ ವಿಶ್ವವಿದ್ಯಾಲಯದಲ್ಲಿ ನಡೆದ ಲೈಂಗಿಕ ಕಿರುಕುಳದ ವಿರುದ್ಧ ತಮಿಳುನಾಡು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ಚಾಟಿಯಲ್ಲಿ ಹೊಡೆದುಕೊಂಡು ಪ್ರತಿಭಟಿಸಿದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿತ್ತು.
ಈಗ ಒಂದು ಹೆಜ್ಜೆ ಮುಂದೆ ಹೋಗಿ ತಮಗೆ ತಾವೇ ಚಾಟಿಯಲ್ಲಿ ಹೊಡೆದುಕೊಂಡು ಅಣ್ಣಮಲೈ ಪ್ರತಿಭಟಿಸಿದ ವೇಳೆ ಹೊಡೆದುಕೊಳ್ಳುವಾಗ ನೋವು ತಡೆಯಲಾರದೆ ತಮ್ಮ ಪಂಚೆಯಲ್ಲಿ ಮೂತ್ರ ಮಾಡಿಕೊಂಡಿದ್ದಾರೆ ಎಂದು ಪ್ರತಿಪಾದಿಸಿ ಫೋಟೋವನ್ನು ಹಂಚಿಕೊಳ್ಳಲಾಗುತ್ತಿದೆ.
ವೈರಲ್ ಫೋಟೋದಲ್ಲಿ ಕೂಡ ಅಣ್ಣಾಮಲೈ ಅವರ ಪಂಚೆ ತೇವವಾಗಿರುವುದು ಕಂಡು ಬಂದಿದ್ದು, ಇದನ್ನು ಹಲವು ಸಾಮಾಜಿಕ ಮಾಧ್ಯಮಗಳಬಳಕೆದಾರರು ಹಂಚಿಕೊಳ್ಳುತ್ತಿದ್ದಾರೆ. ಹಾಗಿದ್ದರೆ ಈ ಪೋಸ್ಟ್‌ಗಳಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್‌ಚೆಕ್ :
ಸಾಮಾಜಿಕ ಮಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ವೈರಲ್ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, saimunna_bjp_ ಮತ್ತು @amarprasadreddy ಎಂಬ ಎರಡು ಸಾಮಾಜಿಕ ಮಾಧ್ಯಮಗಳ ಖಾತೆಗಳಲ್ಲಿ ವೈರಲ್ ಫೋಟೋವಿನ ಮೂಲ ಫೋಟೋಗಳು ಕಂಡುಬಂದಿದೆ. ಆದರೆ ಇದರಲ್ಲಿ ಎಲ್ಲಿಯೂ ಕೂಡ ಅಣ್ಣಾಮಲೈ ಅವರ ಉಡುಪು ತೇವವಾಗಿರುವುದು ಕಂಡು ಬಂದಿಲ್ಲ.
ಸುದ್ದಿ ಮಾಧ್ಯಮಗಳ ವರದಿಗಳೀಗಾಗಿ ಸರ್ಚ್ ಮಾಡಿದಾಗ, ನ್ಯೂಸ್ 18 ತಮಿಳುನಾಡು ಸೇರಿದಂತೆ ಹಲವು ಸುದ್ದಿ ಮಾಧ್ಯಮಗಳು ಅಣ್ಣಾಮಲೈ ಅವರು ನಡೆಸಿದ ಪ್ರತಿಭಟನೆಯ ಕುರಿತು ಸಂಪೂರ್ಣ ವಿಡಿಯೋ ವರದಿಗಳನ್ನು ಪ್ರಕಟಿಸಿರುವುದು ಕಂಡುಬಂದಿದೆ. ಈ ಎಲ್ಲಾ ವಿಡಿಯೋ ವರದಿಗಳಲ್ಲಿ ಎಲ್ಲಿಯೂ ಅಣ್ಣಾಮಲೈ ಅವರ ಉಡುಪು ತೇವವಾಗಿರುವುದು ಕಂಡು ಬಂದಿಲ್ಲ. ಹೀಗಾಗಿ ವೈರಲ್ ವಿಡಿಯೋವನ್ನು ತಿರುಚಲಾಗಿದೆ ಎಂಬುದು ಸ್ಪಷ್ಟವಾಗಿದೆ
ಒಟ್ಟಾರೆಯಾಗಿ ಹೇಳುವುದಾದರೆ, ತಮಿಳುನಾಡಿನ ಅಣ್ಣಾ ವಿಶ್ವವಿದ್ಯಾಲಯದಲ್ಲಿ ನಡೆದ ಲೈಂಗಿಕ ಕಿರುಕುಳದ ವಿರುದ್ಧ ಅಣ್ಣಾಮಲೈ ಪ್ರತಿಭಟಿಸಿದ ವಿಡಿಯೋವನ್ನು ಎಡಿಟ್ ಮಾಡಿ ಚಾಟಿಯಲ್ಲಿ ಹೊಡೆದುಕೊಳ್ಳುವಾಗ ನೋವು ತಾಳಲಾರದೆ ಮೂತ್ರ ಮಾಡಿಕೊಂಡಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | 2015ರ ನೇಪಾಳದ ಭೂಕಂಪನದ ಹಳೆಯ ವಿಡಿಯೋವನ್ನು ಟಿಬೆಟ್‌ನದ್ದು ಎಂದು ತಪ್ಪಾಗಿ ಹಂಚಿಕೆ

