FACT CHECK | ಚುನಾವಣೆಯಲ್ಲಿ ಸೋಲುವ ಭಯದಿಂದ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಿದ್ರಾ ಅರವಿಂದ್ ಕೇಜ್ರಿವಾಲ್?
ಮಾಜಿ ಸಿಎಂ ಹಾಗೂ ಎಎಪಿಯ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೆ ಸೋಲಿನ ಭಯ ಕಾಡುತ್ತಿದ್ದು, ಅವರು ಎರಡೆರಡು ಕ್ಷೇತ್ರಗಳಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ವೊಂದು ವೈರಲ್ ಆಗುತ್ತಿದೆ.
खबर आ रही है कि
केजरीवाल दो सीटों से चुनाव लड़ेंगे,
अब उन्हें दिल्ली और खुद की
हार का डर सताने लगा है।#पूर्वांचल_विरोधी_AAP #पूर्वांचल_विरोधी_AAP #BB18 #bbvipks3 #shailenzo #yrkkh
pic.twitter.com/xvwFCBCECo— Ranjit kumar Chaudhary (@RanjitRjk) January 9, 2025
@samudragupta15 ಹೆಸರಿನ ‘ಎಕ್ಸ್’ ಬಳಕೆದಾರರು , “ಚುನಾವಣೆಯಲ್ಲಿ ಸೋಲುವ ಭಯದಿಂದ ಅರವಿಂದ್ ಕೇಜ್ರಿವಾಲ್ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುತ್ತಿದ್ದಾರೆ ಎಂದು ವಿಷಯ ಕೇಳಿಬರುತ್ತಿದೆ. ನಿಜವಾಗಿಯೂ ದಿಲ್ಲಿಯಲ್ಲಿ ನಿಮ್ಮನ್ನು ಬೆಂಬಲಿಸುವ ಒಬ್ಬ ಮತದಾರನೂ ಇಲ್ಲ,” ಎಂಬ ಬರಹದೊಂದಿಗೆ ಪೋಸ್ಟ್ಅನ್ನು ಹಂಚಿಕೊಂಡಿದ್ದಾರೆ.
ಇದಲ್ಲದೆ ಇನ್ನೂ ಹಲವು ಖಾತೆಗಳಲ್ಲಿ ಇದೇ ರೀತಿಯ ಪೋಸ್ಟ್ಗಳನ್ನು ಮಾಡಲಾಗಿದೆ. @RanjitRjk ಎಂಬ ಎಕ್ಸ್ ಬಳಕೆದಾರರು, ‘ಕೇಜ್ರಿವಾಲ್ ಎರಡು ಸ್ಥಾನಗಳಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಬರುತ್ತಿದೆ. ಈಗ ಅವರು ದಿಲ್ಲಿ ಮತ್ತು ಸ್ವಂತ ಸೋಲಿನ ಭಯದಲ್ಲಿದ್ದಾರೆ’ ಎಂದು ಬರೆದುಕೊಂಡಿದ್ದಾರೆ. ಹಾಗಿದ್ದರೆ ನಿಜವಾಗಿಯೂ ಅರವಿಂದ್ ಕೇಜ್ರಿವಾಲ್ಗೆ ಸೋಲಿನ ಭೀತಿ ಎದುರಾಗಿದಯೇ? ಹಾಗಾಗಿ ಅವರು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದಾರೆಯೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್ಚೆಕ್ :
ಸಾಮಾಜಿಕ ಮಧ್ಯಮಗಳಲ್ಲಿ ಅರವಿಂದ್ ಕೇಜ್ರಿವಾಲ್ ಸ್ಪರ್ಧೆ ಕುರಿತು ಹಂಚಿಕೊಳ್ಳಲಾದ ಪೋಸ್ಟ್ಗಳನ್ನು ಪರಿಶೀಲಿಸಲು ಗೂಗಲ್ ಸರ್ಚ್ ಮಾಡಿದಾಗ, ಆಮ್ ಆದ್ಮಿ ಪಕ್ಷದ ಸಾಮಾಜಿಕ ಮಾಧ್ಯಮಗಳಲ್ಲಿ ಈ ರೀತಿಯ ಯಾವುದೇ ಪೋಸ್ಟ್, ಅಪ್ಡೇಟ್ಗಳೂ ಸಿಗಲಿಲ್ಲ.
ಇನ್ನು ಅರವಿಂದ್ ಕೇಜ್ರಿವಾಲ್ ಅವರು ಎರಡು ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದೇನೆ ಎಂದು ಎಲ್ಲಾದರೂ ಹೇಳಿದ್ದಾರೆಯೇ ಎಂದು ತಿಳಿದುಕೊಳ್ಳಲು ‘Arvind Kejriwal Contesting in Two Assembly Constituencies of Delhi’ ಎಂದು ಸರ್ಚ್ ಮಾಡಿದಾಗ, ಅಲ್ಲಿ ‘ಭಾರತ್ 24’ನ ವಿಡಿಯೋವೊಂದು ಲಭ್ಯವಾಗಿದೆ. ಇದರಲ್ಲಿ ಅರವಿಂದ್ ಕೇಜ್ರಿವಾಲ್ ಒಂದು ಕ್ಷೇತ್ರದಲ್ಲಿ ಮಾತ್ರ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ ಎಂದು ಹೇಳಲಾಗಿದೆ.
ಇನ್ನಷ್ಟು ಪರಿಶೀಲನೆ ನಡೆಸಿದಾಗ ಟೈಮ್ಸ್ ಆಫ್ ಇಂಡಿಯಾದ ವರದಿಯೊಂದು ಲಭ್ಯವಾಗಿದೆ. ಇದರಲ್ಲಿ, “ಅರವಿಂದ್ ಕೇಜ್ರಿವಾಲ್ ಅವರು ಎರಡು ಸ್ಥಾನಗಳಲ್ಲಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಗಳನ್ನು ತಳ್ಳಿ ಹಾಕಿದ್ದಾರೆ, ಹೊಸದಿಲ್ಲಿ ವಿಧಾನಸಭಾ ಕ್ಷೇತ್ರದಿಂದ ಮಾತ್ರ ಅವರು ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ,” ಎಂದು ಸ್ಪಷ್ಟಪಡಿಸಲಾಗಿದೆ.
![]()
ಇನ್ನು ಎಎಪಿ ವಿವಿಧ ಸಂದರ್ಭಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದನ್ನು ಒಟ್ಟಾಗಿ ‘ಮನಿಕಂಟ್ರೋಲ್’ ಪ್ರಕಟಿಸಿದೆ. ಇಲ್ಲೂ ಕೇಜ್ರಿವಾಲ್ ಒಂದೇ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಇದೆ. ಹೀಗಾಗಿ ದಿಲ್ಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಎರಡು ಕ್ಷೇತ್ರಗಳಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಸುದ್ದಿಯು ಸುಳ್ಳು ಎಂಬುದು ಸ್ಪಷ್ಟವಾಗಿದೆ.
ಒಟ್ಟಾರೆಯಾಗಿ ಹೇಳುವುದಾದರೆ, ಅರವಿಂದ್ ಕೇಜ್ರಿವಾಲ್ ಸೋಲಿನ ಭಯದಿಂದ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಸುಳ್ಳು. ತಾವು ಒಂದು ಕ್ಷೇತ್ರದಲ್ಲಿ ಮಾತ್ರ ಸ್ಪರ್ಧಿಸುತ್ತಿದ್ದು, ಅದನ್ನು ಸ್ವತಃ ಅವರೇ ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | 6 ಜನ ಮುಸ್ಲಿಂ ಅಣ್ಣಂದಿರು ತಮ್ಮ ಸ್ವಂತ ಸಹೋದರಿಯರನ್ನು ಮದುವೆಯಾಗಿದ್ದಾರೆ ಎಂಬುದು ನಿಜವೇ?

