FACT CHECK | ಜಮ್ಮು- ಕಾಶ್ಮೀರಲ್ಲಿ ತೆರೆದ ಜೀಪ್‌ನಲ್ಲಿ ಪ್ರಯಾಣಿಸಿದ ಮೊದಲ ಪ್ರಧಾನಿ ಮೋದಿ ಎಂಬುದು ಸುಳ್ಳು
ಇತ್ತೀಚೆಗೆ ಜಮ್ಮು – ಕಾಶ್ಮೀರ ಹಾಗೂ ಲಡಾಕ್ ನಡುವೆ ಸಂಪರ್ಕ ಸುಧಾರಿಸುವ ಉದ್ದೇಶದಿಂದ ಶ್ರೀನಗರ – ಲೆಹ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಿಸಲಾಗಿರುವ 6.5 ಕಿ.ಮೀ ಉದ್ದದ ‘ಝೆಡ್-ಮೋಡ್’ ಸುರಂಗ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದರು. ಈ ವೇಳೆ ಅವರು ತೆರೆದ ಜೀಪ್‌ನಲ್ಲಿ ಪ್ರಯಾಣಿಸಿದ್ದರು.
ಈ ಹಿನ್ನೆಲೆಯಲ್ಲಿ ಭಯೋತ್ಪಾದಕರ ಆತಂಕದ ನಡುವೆಯೂ ಕಣಿವೆ ರಾಜ್ಯದಲ್ಲಿ ತೆರೆದ ಜೀಪ್‌ನಲ್ಲಿ ಪ್ರಯಾಣಿಸಿದ ಮೊದಲ ಪ್ರಧಾನಿ ನರೇಂದ್ರ ಮೋದಿ ಎಂಬ ಪೋಸ್ಟ್‌ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.
ಸಂಘ ಪ್ರಚಾರಕ್ (संघ प्रचारक) ಎಂಬ ಫೇಸ್‌ಬುಕ್ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತೆರೆದ ಜೀಪ್‌ನಲ್ಲಿ ಪ್ರಯಾಣಿಸುತ್ತಿರುವ ಚಿತ್ರವನ್ನು ಹಂಚಿಕೊಳ್ಳಲಾಗಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ತೆರೆದ ಜೀಪ್‌ನಲ್ಲಿ ಪ್ರಯಾಣಿಸಿದ ಮೊದಲ ಪ್ರಧಾನಿ ಎಂದು ಬರೆಯಲಾಗಿದೆ.
ಇದೇ ರೀತಿಯ ಪೋಸ್ಟ್‌ಗಳನ್ನು ‘ನಮ್ಮ ನಾಡು Namma Nadu’ ಸೇರಿ ಇನ್ನೂ ಹಲವು ಫೇಸ್‌ಬುಕ್ ಖಾತೆಗಳಲ್ಲಿ ಹಂಚಿಕೊಳ್ಳಲಾಗಿದೆ. ಇವುಗಳನ್ನು ಇಲ್ಲಿ, ಇಲ್ಲಿ, ಇಲ್ಲಿ ನೋಡಬಹುದು.
ಹಾಗಿದ್ದರೆ ಇದುವರೆಗೂ ಪ್ರಧಾನಿ ಮೋದಿ ಹೊರತು ಪಡಿಸಿ ಬೇರೆ ಯಾರೂ ಕೂಡ ಜಮ್ಮು – ಕಾಶ್ಮೀರದಲ್ಲಿ ತೆರೆದ ಜೀಪ್‌ನಲ್ಲಿ ಹೋಗಿಲ್ಲವೆ ಎಂದು ಪರಿಶೀಲಿಸೋಣ.
ಫ್ಯಾಕ್ಟ್‌ಚೆಕ್ :
ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಜಮ್ಮು ಕಾಶ್ಮೀರದಲ್ಲಿ ತೆರೆದ ವಾಹನದಲ್ಲಿ ಪ್ರಧಾನಿ ಮೋದಿ ಪ್ರಯಾಣಿಸುತ್ತಿದ್ದಾರೆ ಎಂದು ಇದೇ ಮೊದಲ ಬಾರಿಗೆ ಪ್ರಧಾನಿಯೊಬ್ಬರು ಹೀಗೆ ಪ್ರಯಾಣಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಇದರ ಸತ್ಯಾಸತ್ಯತೆಯನ್ನು ಪರಿಶೀಲಿಸಲು,ಮೊದಲಿಗೆ Indian Prime Minister in Jammu And Kashmir ಎಂದು ಸರ್ಚ್ ನಡೆಸಲಾಯಿತು. ಆಗ 1996ರ ಜೂನ್ 1ರಿಂದ 1997ರ ಏಪ್ರಿಲ್ 21ರವರೆಗೆ ಪ್ರಧಾನಿಯಾಗಿದ್ದ ಎಚ್‌ಡಿ ದೇವೇಗೌಡರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿ ತೆರೆದ ಜೀಪ್‌ನಲ್ಲಿ ಪ್ರಯಾಣಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
![]()
ಇದನ್ನು ಖಚಿತಪಡಿಸಿಕೊಳ್ಳಲು ‘HD Deve Gowda in Jammu and Kashmir’ ಎಂಬ ಕೀವರ್ಡ್‌ಗಳನ್ನು ಬಳಸಿ ಸರ್ಚ್ ಮಾಡಿದಾಗ, ಜಮ್ಮು ಮತ್ತು ಕಾಶ್ಮೀರದಲ್ಲಿ ಆಗಿ ಸಿಎಂ ಆಗಿದ್ದ ಫಾರೂಕ್ ಅಬ್ದುಲ್ಲಾ ಅವರೊಂದಿಗೆ ದೇವೇಗೌಡರು ಜೀಪಿನಲ್ಲಿ ತೆರಳುತ್ತಿರುವ ಫೋಟೋ ಲಭ್ಯವಾಗಿದೆ. ‘ರಾಯ್ಟರ್ಸ್’ನ ಈ ಚಿತ್ರಕ್ಕೆ ‘ರಜೌರಿಯಲ್ಲಿ ಪ್ರಧಾನಿ ಎಚ್‌ಡಿ ದೇವೇಗೌಡರು ಕೈ ಬೀಸುತ್ತಿರುವ ಚಿತ್ರ’ ಎಂದು ಅಡಿ ಬರಹ ನೀಡಲಾಗಿದೆ.
ಇದನ್ನು ಖಚಿತಪಡಿಸಿಕೊಳ್ಳಲು ಮತ್ತಷ್ಟು ಸರ್ಚ್ ಮಾಡಿದಾಗ, ಪತ್ರಕರ್ತ ಸುಗತ ಶ್ರೀನಿವಾಸರಾಜು ಬರೆದಿರುವ ದೇವೇಗೌಡರ ಜೀವನ ಚರಿತ್ರೆ ‘Furrows In A Field: The Unexplored Life of H.D. Deve Gowda’ದಲ್ಲಿಯೂ ಈ ಚಿತ್ರ ಪ್ರಕಟವಾಗಿರುವ ಮಾಹಿತಿ ಲಭ್ಯವಾಗಿದೆ. ಅಮೆಜಾನ್‌ನಲ್ಲಿ ಈ ಪುಸ್ತಕ ಇದ್ದು, ಇದರಲ್ಲಿ ಅಡಕವಾಗಿರುವ ಚಿತ್ರವನ್ನು ಅಮೆಜಾನ್ ವೆಬ್‌ಸೈಟ್‌ನಲ್ಲಿ ಕಾಣಬಹುದಾಗಿದೆ.
![]()
‘ಡಾ. ಫಾರೂಕ್ ಅಬ್ದುಲ್ಲಾ ಹಾಗೂ ಲೆಫ್ಟಿನೆಂಟ್ ಜನರಲ್ ದಿಲ್ಲೋನ್ ಜೊತೆ ಪ್ರಧಾನಿ ಕಾಶ್ಮೀರದಲ್ಲಿ ತೆರೆದ ಜೀಪ್ ಪ್ರಯಾಣ’ ಎಂದು ಇದಕ್ಕೆ ಅಡಿ ಬರಹ ನೀಡಲಾಗಿದೆ.
ಒಟ್ಟಾರೆಯಾಗಿ ಹೇಳುವುದಾದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ ತೆರೆದ ಜೀಪ್‌ನಲ್ಲಿ ಪ್ರಯಾಣಿಸಿದ ಮೊದಲ ಪ್ರಧಾನಿ ನರೇಂದ್ರ ಮೋದಿ ಎಂಬುದು ಸುಳ್ಳು. ಮೋದಿಗೂ ಮುಂಚೆ ಕನ್ನಡಿಗರೇ ಆದ ಎಚ್‌ಡಿ ದೇವೇಗೌಡರು ಪ್ರಧಾನಿಯಾಗಿದ್ದ ವೇಳೆ ಜಮ್ಮು ಮತ್ತು ಕಾಶ್ಮೀರದಲ್ಲಿ ತೆರೆದ ಜೀಪ್‌ನಲ್ಲಿ ಪ್ರಯಾಣಿಸಿದ್ದಾರೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | ಡೊನಾಲ್ಡ್ ಟ್ರಂಪ್ ಆದೇಶದಿಂದ ಉಷಾ ವ್ಯಾನ್ಸ್ ಪೌರತ್ವ ಕಳೆದುಕೊಳ್ತಾರಾ ?

