FACT CHECK | ಮಹಾಕುಂಭ ಮೇಳದಲ್ಲಿ ನಟ ಅಕ್ಷಯ್‌ಕುಮಾರ್ ಮತ್ತು ಟೈಗರ್ ಶ್ರಾಫ್ ಭಾಗಿ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

ಬಾಲಿವುಡ್‌ ನಟರಾದ ಅಕ್ಷಯ್ ಕುಮಾರ್ ಮತ್ತು ಟೈಗರ್ ಶ್ರಾಫ್ ಅವರ ವಿಡಿಯೊ ಫೇಸ್‌ಬುಕ್ ಮತ್ತು ಇತರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಅಕ್ಷಯ್ ಕುಮಾರ್ ಮತ್ತು ಟೈಗರ್ ಶ್ರಾಫ್ ಭಾಗವಹಿಸಿದ್ದರು ಎಂದು ಪ್ರತಿಪಾದಿಸಿ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ.

akshay kumar and tiger shroff kumbh mela video is fake

ಫೇಸ್‌ಬುಕ್, ಟ್ವಿಟರ್‌ ಮತ್ತು ಇನ್‌ಸ್ಟಾಗ್ರಾಮ್ ಬಳಕೆದಾರರು ಮಹಾಕುಂಭ ಮೇಳದಲ್ಲಿ ಬಾಲಿವುಡ್‌ ನಟರಾದ ಅಕ್ಷಯ್ ಕುಮಾರ್ ಮತ್ತು ಟೈಗರ್ ಶ್ರಾಫ್ ಭಾಗವಹಿಸಿದ್ದಾರೆ ಎಂದು ಪೋಸ್ಟ್‌ಅನ್ನ ಹಂಚಿಕೊಂಡಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಇದೇ ಪ್ರತಿಪಾದನೆಯೊಂದಿಗೆ ಹಂಚಿಕೊಂಡ ಹಲವು ವಿಡಿಯೋಗಳು ಲಭ್ಯವಾಗಿವೆ. ದೈನಿಕ್ ಜಾಗರಣ್ ಅವರ ವೆಬ್‌ಸೈಟ್‌ನಲ್ಲಿ ವರದಿ ಕಂಡುಬಂದಿದೆ. ವರದಿಯ ಪ್ರಕಾರ, ‘ಬಡೆ ಮಿಯಾನ್ ಛೋಟೆ ಮಿಯಾನ್’ ಚಿತ್ರದ ಪ್ರಚಾರದ ಸಮಯದಲ್ಲಿ ಅಕ್ಷಯ್ ಕುಮಾರ್ ಮತ್ತು ಟೈಗರ್ ಶ್ರಾಫ್ ಅಬುಧಾಬಿಯ ಪ್ರಸಿದ್ಧ ಹಿಂದೂ ದೇವಾಲಯ ಅಕ್ಷರಧಾಮಕ್ಕೆ (BAPS) ಭೇಟಿ ನೀಡಲು ಬಂದಾಗ ವೈರಲ್ ವೀಡಿಯೊವಾಗಿದೆ.

ಅದರ ನಂತರ ವಿಶ್ವನ್ ನ್ಯೂಸ್ ತಂಡವು baps.org ವೆಬ್‌ಸೈಟ್‌ನಲ್ಲಿ ಕೆಲವು ಚಿತ್ರಗಳನ್ನು ಸಹ ಕಂಡುಕೊಂಡಿದೆ. ವೈರಲ್ ವೀಡಿಯೊಗೆ ಸಂಬಂಧಿಸಿದ ಚಿತ್ರಗಳನ್ನು ಏಪ್ರಿಲ್ 8, 2024 ರಂದು ಪ್ರಕಟಿಸಿದ ಲೇಖನದಲ್ಲಿ ಕಾಣಬಹುದು. ಇದರೊಂದಿಗೆ ಅಕ್ಷಯ್ ಕುಮಾರ್ ಮತ್ತು ಟೈಗರ್ ಶ್ರಾಫ್ ಇಬ್ಬರೂ ಕಳೆದ ವರ್ಷ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಈ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

2024ರ ಏ.10ರಂದು ಮಾಧ್ಯಮವೊಂದರಲ್ಲಿ ಪ್ರಕಟವಾದ ವರದಿ ಸಿಕ್ಕಿತು. ವರದಿಯಲ್ಲಿ ಇರುವ ಚಿತ್ರಕ್ಕೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊ ಕೀಫ್ರೇಮ್‌ನ ಚಿತ್ರಕ್ಕೂ ಹೋಲಿಕೆ ಕಂಡುಬಂತು. ‘ಬಡೇ ಮಿಯಾ ಛೋಟೇ ಮಿಯಾ’ ಚಿತ್ರದ ಬಿಡುಗಡೆಯ ಸಂದರ್ಭದಲ್ಲಿ ಅಕ್ಷಯ್ ಕುಮಾರ್ ಮತ್ತು ಶ್ರಾಫ್ ಅವರು ಅಬುಧಾಬಿಯ ಬಿಎಪಿಎಸ್ ಹಿಂದೂ ಮಂದಿರಕ್ಕೆ ಭೇಟಿ ನೀಡಿದ್ದ ವೇಳೆ ತೆಗೆದ ಚಿತ್ರ ಇದು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ನಟ ಅಕ್ಷಯ್ ಕುಮಾರ್ ಅವರು 2024ರ ಏ.9ರಂದು ಇದೇ ವಿಡಿಯೊ ಅನ್ನು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲೂ ಅಪ್‌ಲೋಡ್ ಮಾಡಿದ್ದಾರೆ. ಹಳೆಯ ವಿಡಿಯೊ ಅನ್ನು ಕೆಲವರು ಸುಳ್ಳು ಪ್ರತಿಪಾದನೆಗಳೊಂದಿಗೆ ಈಗ ಹಂಚಿಕೊಳ್ಳುತ್ತಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಮಹಾಕುಂಭ ಎಂದು ಹಂಚಿಕೊಳ್ಳಲಾಗುತ್ತಿರುವ ಅಕ್ಷಯ್ ಕುಮಾರ್ ಮತ್ತು ಟೈಗರ್ ಶ್ರಾಫ್ ಅವರ ವಿಡಿಯೋ ಕುಂಭಮೆಳದ್ದು ಅಲ್ಲ. ವೈರಲ್ ವೀಡಿಯೊ ಅಬುಧಾಬಿಯ ಸ್ವಾಮಿನಾರಾಯಣ ಅಕ್ಷರಧಾಮ ((BAPS) ದೇವಸ್ಥಾನಕ್ಕೆ ಕಳೆದ ವರ್ಷ ಇಬ್ಬರೂ ನಟರು ಭೇಟಿ ನೀಡಿದ್ದರು. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಶಾರುಖ್ ಖಾನ್ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಹಳೆಯ ವಿಡಿಯೋವನ್ನು ಮಹಾಕುಂಭ ಮೇಳಕ್ಕೆ ಭೇಟಿ ಎಂದು ತಪ್ಪಾಗಿ ಹಂಚಿಕೆ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights