FACT CHECK | ಶಾರುಖ್ ಖಾನ್ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಹಳೆಯ ವಿಡಿಯೋವನ್ನು ಮಹಾಕುಂಭ ಮೇಳಕ್ಕೆ ಭೇಟಿ ಎಂದು ತಪ್ಪಾಗಿ ಹಂಚಿಕೆ

ಶಾರುಖ್ ಖಾನ್ ದೇವಸ್ಥಾನದಿಂದ ಹೊರಬರುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ಮಹಾ ಕುಂಭಮೇಳದದ್ದು ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ವಿಡಿಯೋವನ್ನು ಹಂಚಿಕೊಂಡಿರುವ ಹಲವರು ಶಾರುಖ್‌ ಖಾನ್‌ ಬದಲಾಗಿದ್ದಾರೆ. ಈಗ ಅವರು ಹಿಂದೂಗಳ ಧಾರ್ಮಿಕ ವಿಧಿ ವಿಧಾನಗಳನ್ನು ಅನುಸರಿಸಲು ಮುಂದಾಗಿದ್ದಾರೆ. ಆ ಮೂಲಕ ತಮ್ಮ ಹಿಂದಿನ ತಪ್ಪುಗಳನ್ನು ಸರಿಪಡಿಸಿಕೊಳ್ಳುತ್ತಿದ್ದಾರೆ ಎಂದು ಉಲ್ಲೇಖಿಸುತ್ತಿದ್ದಾರೆ. 

ಇನ್ನೂ ಕೆಲವರು ಮಹಾ ಕುಂಭಮೇಳದಲ್ಲಿ ಶಾರುಖ್‌ ಖಾನ್‌ ಭಾಗಿಯಾಗಿರುವುದರ ಹಿಂದೆ ಏನೋ ದುರುದ್ದೇಶವಿದೆ ಎಂದು ಬರೆದುಕೊಂಡರೆ ಮತ್ತೆ ಕೆಲವರು ಶಾರುಖ್‌ ಖಾನ್‌ ಬಗ್ಗೆ ವ್ಯಂಗ್ಯವಾಡುತ್ತಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್‌ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಶಾರುಖ್‌ ಖಾನ್‌ ವಿಡಿಯೋ ಕುರಿತು ಕೆಲವು ಕೀ ಫ್ರೇಮ್‌ಗಳನ್ನು ಬಳಸಿಕೊಂಡು ಗೂಗಲ್‌ ರಿವರ್ಸ್‌ ಇಮೇಜ್‌ನಲ್ಲಿ ಸರ್ಚ್ ನಡೆಸಿದಾಗ, ವೈರಲ್‌ ವಿಡಿಯೋಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 5, 2023 ರಂದು NDTV ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾದ ವಿಡಿಯೋ ಲಭ್ಯವಾಗಿದೆ. ಇದರ ಪ್ರಕಾರ ಜವಾನ್‌ ಚಿತ್ರದ ಬಿಡುಡೆಗೂ ಮುನ್ನ, ನಿರ್ದೇಶಕ ವಿಘ್ನೇಶ್‌ ಶಿವನ್‌ ಹಾಗೂ ನಟಿ ನಯನತಾರ ದಂಪತಿಗಳೊಂದಿಗೆ ನಟ ಶಾರುಖ್‌ ಖಾನ್‌ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ದೇವಾಲಯಕ್ಕೆ ಭೇಟಿ ನೀಡಿದ್ದರು ಎಂದು ಉಲ್ಲೇಖಿಸಿರುವುದು ಕಂಡು ಬಂದಿದೆ.

ಶಾರುಖ್ ಖಾನ್ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಈ ವೀಡಿಯೊವನ್ನು ಸೆಪ್ಟೆಂಬರ್ 5, 2023 ರಂದು ಇಂಡಿಯನ್ ಎಕ್ಸ್‌ಪ್ರೆಸ್‌ನ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿರುವುದು ಕೂಡ ಕಂಡು ಬಂದಿದೆ. “ಜವಾನ್ ಬಿಡುಗಡೆಗೂ ಮುನ್ನ ಶಾರುಖ್ ಖಾನ್ ಮತ್ತು ನಯನತಾರಾ ತಿರುಮಲದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ” ಎಂಬ ಶೀರ್ಷಿಕೆಯೊಂದಿಗೆ ಈ ವರದಿಯನ್ನು ಪ್ರಕಟಿಸಲಾಗಿದೆ. ಈ ಕುರಿತು ಇನ್ನಷ್ಟು ಹುಡುಕಾಟವನ್ನು ನಡೆಸಿದಾಗ ವೈರಲ್‌ ವಿಡಿಯೋವನ್ನೇ ಹಂಚಿಕೊಂಡು ಹಲವು ವರದಿಗಳು ಪ್ರಕಟವಾಗಿರುವುದು ಕಂಡು ಬಂದಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಬಾಲಿವುಡ್ ನಟ ಶಾರುಖ್‌ ಖಾನ್‌ ಪ್ರಯಾಗ್‌ರಾಜ್‌ನಲ್ಲಿನ ಮಹಾ ಕುಂಭಮೇಳದಲ್ಲಿ ಭಾಗಿಯಾಗಿದ್ದಾರೆ ಎಂದು 2023ರಲ್ಲಿ ಜವಾನ್‌ ಚಿತ್ರಕ್ಕೂ ಮುನ್ನ ತಿರುಪತಿಯ ದೇವಾಲಯಕ್ಕೆ ಭೇಟಿ ನೀಡಿದ ವಿಡಿಯೋವನ್ನು ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ರಾಜ್ಯಸಭೆಯಲ್ಲಿ ವಕ್ಫ್ ಮಸೂದೆ ಅಂಗೀಕಾರ ಆಗಿದೆ ಎಂಬುದು ಸುಳ್ಳು


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights