FACT CHECK | ದೆಹಲಿ ರೈಲು ನಿಲ್ದಾಣದ ಕಾಲ್ತುಳಿತ ಸಂತ್ರಸ್ತರನ್ನು ರಾಹುಲ್, ಪ್ರಿಯಾಂಕಾ ಭೇಟಿ ಮಾಡಿದ್ರಾ?
‘ಪ್ರಯಾಗ್ರಾಜ್ಗೆ ತೆರಳುವ ರೈಲುಗಳು ವಿಳಂಬವಾದ ಕಾರಣ ದೆಹಲಿ ರೈಲು ನಿಲ್ದಾಣದಲ್ಲಿ ಜನಸಂದಣಿ ಉಂಟಾಗಿ ಭಾರಿ ಕಾಲ್ತುಳಿತ ಸಂಭವಿಸಿದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿ ಹಲವು ಜನ ಸಾವನಪ್ಪಿದ್ದರು. ಫೆಬ್ರವರಿ 15 ರಂದು ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿತ್ತು. ಈ ಘಟನೆಯ ಹಿನ್ನಲೆಯಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ವೊಂದು ವೈರಲ್ ಆಗುತ್ತಿದ್ದು, ರಾಹುಲ್ ಮತ್ತು ಪ್ರಿಯಾಂಕ ಗಾಂಧಿ ಮೃತರನ್ನು ನೋಡಲು ಆಸ್ಪತ್ರೆಗೆ ಬಂದಿದ್ದಾರೆ ಎಂದು ಪ್ರತಿಪಾದಿಸಿ ಪೋಸ್ಟ್ಅನ್ನು ಹಂಚಿಕೊಳ್ಳಲಾಗುತ್ತಿದೆ.
दिल्ली रेलवे स्टेशन पर भगदड़ में हुई मोतों की जीमेदारी किसकी हैं विपक्ष की ?
देश के प्रधानमंत्री व रेल मंत्री को जल्द से जल्द इस्तीफा देना चाहिए।
आदरणीय श्री राहुल गांधी जी खड़े हैं देश की जनता व दिल्ली हादसे में मृत व्यक्तियों के परिवार के साथ।@RahulGandhi @narendramodi pic.twitter.com/l387Jk3KiS
— Rukmanand Swami (@RukmanandSwami_) February 17, 2025
X ಬಳಕೆದಾರರು ವೀಡಿಯೊವನ್ನು ಹಂಚಿಕೊಂಡು, “ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಸಂಭವಿಸಿದ ಸಾವುಗಳಿಗೆ ಯಾರು ಹೊಣೆ – ವಿರೋಧ ಪಕ್ಷ? ಪ್ರಧಾನಿ ಮತ್ತು ರೈಲ್ವೆ ಸಚಿವರು ಆದಷ್ಟು ಬೇಗ ರಾಜೀನಾಮೆ ನೀಡಬೇಕು. ಗೌರವಾನ್ವಿತ ರಾಹುಲ್ ಗಾಂಧಿ ದೇಶದ ಜನರು ಮತ್ತು ದೆಹಲಿ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳೊಂದಿಗೆ ಇದ್ದಾರೆ” ಎಂದು ಬರೆದಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಮಾಸ್ಕ್ ಧರಿಸಿ ಆಸ್ಪತ್ರೆಯಂತಹ ಸ್ಥಳಕ್ಕೆ ಭೇಟಿ ನೀಡುತ್ತಿರುವುದನ್ನು ತೋರಿಸಲಾಗಿದೆ. ಪ್ರಿಯಾಂಕಾ ಗಾಂಧಿ ಮೃತರ ಸಂಬಂಧಿಕರನ್ನು ಸಂತೈಸುತ್ತಿರುವುದನ್ನು ಕಾಣಬಹುದು. ಗಾಂಧಿ ಸಹೋದರರು ನವದೆಹಲಿ ರೈಲು ನಿಲ್ದಾಣದ ಕಾಲ್ತುಳಿತದ ಸಂತ್ರಸ್ಥರನ್ನು ಭೇಟಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಿದ್ದರೆ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್ಚೆಕ್ :
ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್ಗಳಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್ನಲ್ಲಿ ಸರ್ಚ್ ಮಾಡಿದಾಗ, ಆಗಸ್ಟ್ 2024 ರಂದು ಹಲವು X ಬಳಕೆದಾರರು ವಿಡಿಯೋವನ್ನು ಹಂಚಿಕೊಂಡಿರುವುದು ಲಭ್ಯವಾಗಿದೆ (ಲಿಂಕ್ಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು) ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಕೇರಳದ ವಯನಾಡಿನ ಆಸ್ಪತ್ರೆಗೆ ಭೂಕುಸಿತ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಲು ಭೇಟಿ ನೀಡಿದ್ದಾರೆ ಎಂದು ಹೇಳಲಾಗಿದೆ.
This is so painful to watch
Rahul Gandhi & Priyanka Gandhi met the landslide victim families in a hospital in Wayanad
Seeing their pain, RaGa & PGV couldn’t hold their tears
Look how they are hugging their Wayanad family, so painful… pic.twitter.com/RVJC2MK5Hi
— Ankit Mayank (@mr_mayank) August 2, 2024
ಆಗಸ್ಟ್ 2, 2024 ರಂದು ಪ್ರಕಟವಾದ ಹಿಂದೂಸ್ತಾನ್ ಟೈಮ್ಸ್ ವಿಡಿಯೋ ವರದಿಯಲ್ಲಿ ಇದೇ ರೀತಿಯ ದೃಶ್ಯಗಳು ಕಂಡುಬಂದಿದೆ, ‘ವಯನಾಡ್ ಭೂಕುಸಿತಗಳು: ಸಂತ್ರಸ್ತರನ್ನು ಭೇಟಿಯಾದ ನಂತರ ರಾಹುಲ್ ಗಾಂಧಿ ಭಾವುಕರಾದರು, 100+ ಮನೆಗಳನ್ನು ನಿರ್ಮಿಸುವ ಭರವಸೆ ನೀಡಿದರು’ ಎಂದು ಉಲ್ಲೇಖಿಸಿದೆ. ವರದಿಯಲ್ಲಿ, ಇಬ್ಬರೂ ಕಾಂಗ್ರೆಸ್ ನಾಯಕರು ವೈರಲ್ ವೀಡಿಯೊದಲ್ಲಿರುವಂತೆಯೇ ಅದೇ ಬಟ್ಟೆಗಳನ್ನು ಧರಿಸಿರುವುದನ್ನು ಕಾಣಬಹುದು.
ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ರಕ್ಷಣಾ ಕಾರ್ಯಾಚರಣೆಗಳ ಮೇಲ್ವಿಚಾರಣೆಗೆ ವಯನಾಡಿನಲ್ಲಿದ್ದರು. ಗಾಂಧಿ ಸಹೋದರರು ಪರಿಹಾರ ಶಿಬಿರಕ್ಕೆ ಭೇಟಿ ನೀಡಿ, ಸಂತ್ರಸ್ತರನ್ನು ಭೇಟಿ ಮಾಡಿ ಸಹಾಯ ನೀಡಿದರು. ರಾಹುಲ್ ಮತ್ತು ಪ್ರಿಯಾಂಕಾ ಇಬ್ಬರೂ ಭೂಕುಸಿತ ಸಂತ್ರಸ್ತರಿಗೆ ಸಾಂತ್ವಾನ ಹೇಳುತ್ತಿದ್ದಾರೆ.
The depth of suffering being experienced by survivors of the landslides in Wayanad is unimaginable.
Whole families have been swept away leaving sole survivors, children left without a single relative, grandmothers without any family member to take care of them, a young nurse… pic.twitter.com/93WhJ74HgM
— Priyanka Gandhi Vadra (@priyankagandhi) August 1, 2024
ಆಗಸ್ಟ್ 1, 2024 ರಂದು, ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ತಮ್ಮ ಅಧಿಕೃತ X ಖಾತೆಗಳಲ್ಲಿ ತಮ್ಮ ಭೇಟಿಯ ವೀಡಿಯೊಗಳನ್ನು ಹಂಚಿಕೊಂಡಿರುವುದನ್ನು ಕಾಣಬಹುದು ಅದರಲ್ಲಿ ಅವರು ಸಾರ್ವಜನಿಕರು ಮತ್ತು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡುವುದನ್ನು ನೋಡಬಹುದು.
ಒಟ್ಟಾರೆಯಾಗಿ ಹೇಳುವುದಾದರೆ, ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಇಬ್ಬರು 2024 ರಲ್ಲಿ ವಯನಾಡ್ ಭೂಕುಸಿತ ಸಂತ್ರಸ್ತರನ್ನು ಭೇಟಿ ಮಾಡಿ ಸಾಂತ್ವಾನ ಹೇಳಿದ ವಿಡಿಯೋವನ್ನು, ನವದೆಹಲಿ ರೈಲ್ವೆ ನಿಲ್ದಾಣದ ಕಾಲ್ತುಳಿತದ ಸಂತ್ರಸ್ತರನ್ನು ಭೇಟಿಯಾಗಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | ಪಾಕ್ನ ಭೂ ಕಂಪನದ ವಿಡಿಯೋವನ್ನು ದೆಹಲಿಯದ್ದು ಎಂದು ತಪ್ಪಾಗಿ ಹಂಚಿಕೆ

