FACT CHECK | ಟೀಂ ಇಂಡಿಯಾ ಆಟಗಾರರು ಹೋಳಿ ಆಚರಿಸಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೆ
ಹೋಳಿ ಹಬ್ಬದ ಹೆಸರಿನಲ್ಲಿ ಬಲವಂತವಾಗಿ ಬಣ್ಣ ಎರಚಿ ಪರಸ್ಪರ ಹಲ್ಲೆ ನಡೆದ ಸುದ್ದಿ ಸಮಾಚಾರಗಳ ನಡುವೆ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದ್ದು, ಟೀಂ ಇಂಡಿಯಾ ಆಟಗಾರರಾದ ವಿರಾಟ್ ಕೋಹ್ಲಿ, ರೋಹಿತ್ ಶರ್ಮಾ ಮತ್ತು ಶುಬ್ಮನ್ ಗಿಲ್ ಹೋಳಿ ಹಬ್ಬದ ಬಣ್ಣಗಳಲ್ಲಿ ನೃತ್ಯ ಮಾಡುತ್ತಿರುವುದನ್ನು ಕಾಣಬಹುದು. ಅನೇಕ ಬಳಕೆದಾರರು ಈ ವೀಡಿಯೊ ಭಾರತೀಯ ತಂಡದ ಇತ್ತೀಚಿನ ಹೋಳಿ ಆಚರಣೆಯ ದೃಶ್ಯಗಳು ಎಂದು ಹಂಚಿಕೊಳ್ಳುತ್ತಿದ್ದಾರೆ.

ಫೇಸ್ಬುಕ್ ಬಳಕೆದಾರರೊಬ್ಬರು ಮಾರ್ಚ್ 14, 2025 ರಂದು ಈ ವೀಡಿಯೊವನ್ನು ಹಂಚಿಕೊಂಡು, ‘‘ವಿರಾಟ್ ಕೊಹ್ಲಿ ಜೊತೆಗೆ ಹೋಳಿ ಹಬ್ಬದ ಬಣ್ಣ ಆಡುತ್ತಿರುವ ನಮ್ಮ ದೇಶದ ಕ್ರಿಕೆಟ್ ತಂಡದ ಆಟಗಾರರು’’ ಎಂದು ಬರೆದುಕೊಂಡಿದ್ದಾರೆ. (Archive) ಇದೇ ರೀತಿಯ ಹೇಳಿಕೆಯೊಂದಿಗೆ ವೈರಲ್ ಆಗುತ್ತಿರುವ ವೀಡಿಯೊವನ್ನು ನೀವು ಇಲ್ಲಿ, ಇಲ್ಲಿ ನೋಡಬಹುದು. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್‌ಚೆಕ್ :
ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವಿಡಿಯೋದ ಸ್ಕ್ರೀನ್ ಶಾಟ್ ತೆಗೆದುಕೊಂಡು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ 2023 ರಲ್ಲಿ ಪ್ರಕಟವಾದ ಹಲವು ಸುದ್ದಿ ವೆಬ್‌ಸೈಟ್‌ಗಳಲ್ಲಿ ಈ ವಿಡಿಯೋವ್ನು ಹಂಚಿಕೊಂಡಿರುವುದು ಲಭ್ಯವಾಗಿದೆ.

ಮಾರ್ಚ್ 7, 2023 ರಂದು ಇಂಡಿಯಾ ಟಿವಿ ಪ್ರಕಟಿಸಿದ ಸುದ್ದಿಯ ಪ್ರಕಾರ, ‘‘ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ 4ನೇ ಮತ್ತು ಅಂತಿಮ ಟೆಸ್ಟ್ ಪಂದ್ಯಕ್ಕೂ ಮುನ್ನ ಇಡೀ ಭಾರತ ತಂಡ ಹೋಳಿ ಆಚರಿಸಿದೆ. ಭಾರತದ ತಾರೆಯರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಶುಭ್‌ಮನ್ ಗಿಲ್ ಹ್ಯಾಪಿ ಮೂಡ್‌ನಲ್ಲಿ ಕಾಣಿಸಿಕೊಂಡರು. ಶುಭ್‌ಮನ್ ಗಿಲ್ ತಂಡದ ಬಸ್ಸಿನೊಳಗೆ ಹೋಳಿ ಆಚರಣೆಯ ವೀಡಿಯೊವನ್ನು ಇನ್ಸ್ಟಾಗ್ರಾಮ್ನಲ್ಲಿ ಅಪ್‌ಲೋಡ್ ಮಾಡಿದ್ದಾರೆ’’ ಎಂಬ ಮಾಹಿತಿ ಇದೆ.
View this post on Instagram
ಶುಭ್‌ಮನ್ ಗಿಲ್ ಅವರ ಇನ್ಸ್ಟಾಗ್ರಾಮ್ನಲ್ಲಿ ಈ ವೀಡಿಯೊವನ್ನು ಹುಡುಕಿದ್ದೇವೆ. ಮಾರ್ಚ್ 7, 2023 ರಂದು ಗಿಲ್ ಇದೇ ವೈರಲ್ ವೀಡಿಯೊವನ್ನು ಹಂಚಿಕೊಂಡಿರುವುದು ನಮಗೆ ಸಿಕ್ಕಿದೆ. ‘‘ಭಾರತೀಯ ಕ್ರಿಕೆಟ್ ತಂಡದಿಂದ ಹೋಲಿ ಹಬ್ಬದ ಶುಭಾಶಯಗಳು’’ ಎಂದು ಕ್ಯಾಪ್ಶನ್ ನೀಡಿದ್ದಾರೆ.
ಕೊಹ್ಲಿ ಮತ್ತು ಇತರ ಆಟಗಾರರು ಹೋಳಿ ಆಡುತ್ತಿರುವ ಇದೇ ವೈರಲ್ ವೀಡಿಯೊವನ್ನು ಹಲವು ಮಾಧ್ಯಮಗಳು 2023 ರ ಮಾರ್ಚ್ನಲ್ಲಿ ಹಂಚಿಕೊಂಡಿರುವುದನ್ನು ನೀವು ಇಲ್ಲಿ, ಇಲ್ಲಿ ನೋಡಬಹುದು.
ಒಟ್ಟಾರೆಯಾಗಿ ಹೇಳುವುದಾದರೆ, ಕೊಹ್ಲಿ ಮತ್ತು ರೋಹಿತ್ ಶರ್ಮಾ ಇತರ ಆಟಗಾರರೊಂದಿಗೆ ಹೋಳಿ ಆಡುತ್ತಿರುವ ಈ ವೀಡಿಯೊ 2023 ರದ್ದಾಗಿದೆ. 2025ರ ಹೋಳಿ ಹಬ್ಬಕ್ಕೂ ಈ ವೀಡಿಯೊಕ್ಕು ಯಾವುದೇ ಸಂಬಂಧವಿಲ್ಲ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | ಗೋವಿನ ಮೇಲೆ ಹೆಬ್ಬಾವೊಂದು ದಾಳಿ ನಡೆಸಿದೆ ಎಂದು AI ವಿಡಿಯೋ ಹಂಚಿಕೆ

