FACT CHECK | ಲಾಲು ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಚಿಂತಾಜನಕ ಎಂದು ಹಳೆಯ ಪೋಟೊ ಹಂಚಿಕೆ
ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಆಸ್ಪತ್ರೆಯ ಬೆಡ್ ಮೇಲೆ ಮಲಗಿರುವ ಫೋಟೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ಚಿತ್ರದಲ್ಲಿ ಲಾಲು ಯಾದವ್ ಆಸ್ಪತ್ರೆಯ ಬೆಡ್ ಮೇಲೆ ಮಲಗಿದ್ದಾರೆ. ಅವರ ಮುಖಕ್ಕೆ ಆಕ್ಸಿಜನ್ ಮಾಸ್ಕ್ ಕೂಡ ಅಳವಡಿಸಲಾಗಿದೆ. ಅವರ ಸದ್ಯದ ಸ್ಥಿತಿ ಹೀಗಿದೆ ಎಂಬ ಹೇಳಿಕೆಗಳೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಚಿತ್ರವನ್ನು ಹಂಚಿಕೊಂಡಿದ್ದಾರೆ.
लगता है समय आ गया है
pic.twitter.com/EjdfJLSBP8— ocean jain (@ocjain4) April 2, 2025
ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ಎಕ್ಸ್ (ಟ್ವಿಟರ್) ನಲ್ಲಿ ಚಿತ್ರವನ್ನು ಹಂಚಿಕೊಂಡಿರುವ, ಓಸಿನ್ ಜೈನ್ ಎಂಬ ಎಕ್ಸ್ ಬಳಕೆದಾರರು, ‘ಸಮಯ ಬಂದಂತೆ ತೋರುತ್ತಿದೆ’ ಎಂದು ಬರೆದುಕೊಂಡು ಪೋಸ್ಟ್ ಮಾಡಿದ್ದಾರೆ.
ಇದೇ ರೀತಿಯ ಪ್ರತಿಪಾದನೆಯೊಂದಿಗೆ ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಪೋಸ್ಟ್‌ಅನ್ನು ಹಂಚಿಕೊಂಡಿದ್ದು ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸೋಣ.
ಫ್ಯಾಕ್ಟ್‌ಚೆಕ್ :
ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಕೆಲವು ವರದಿಗಳು ಲಭ್ಯವಾಗಿದ್ದು,ಲಾಲು ಪ್ರಸಾದ್ ಯಾದವ್ ಅಸ್ವಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ, ಆದರೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಫೋಟೋ ಸುಮಾರು ಮೂರು ವರ್ಷಗಳಷ್ಟು ಹಳೆಯದು ಎಂದು ತಿಳಿದು ಬಂದಿದೆ.

ಜುಲೈ 7, 2022 ರ ಅಮರ್ ಉಜಾಲಾ ವರದಿಯ ಪ್ರಕಾರ, ಲಾಲು ಪ್ರಸಾದ್ ಯಾದವ್ ಅವರ ಸ್ಥಿತಿ ತುಂಬಾ ಗಂಭೀರವಾಗಿದೆ ಮತ್ತು ಅವರನ್ನು ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ತಡರಾತ್ರಿ ಲಾಲು ಯಾದವ್ ಅವರನ್ನು ಏರ್ ಆಂಬುಲೆನ್ಸ್ ಮೂಲಕ ದೆಹಲಿಗೆ ಕರೆತರಲಾಯಿತು ಎಂದು ಉಲ್ಲೇಖಿಸಲಾಗಿದೆ.
ಇದಲ್ಲದೆ, ಜುಲೈ 8, 2022 ರ ಜೀ ನ್ಯೂಸ್‌ನ ಸುದ್ದಿಯಲ್ಲಿ ಅದೇ ಚಿತ್ರ ಮತ್ತು ಮಾಹಿತಿಯನ್ನು ನಾವು ಕಂಡುಕೊಂಡಿದ್ದೇವೆ. ಇಂತಹ ಪರಿಸ್ಥಿತಿಯಲ್ಲಿ, ಲಾಲು ಪ್ರಸಾದ್ ಯಾದವ್ ಅವರ ಮೂರು ವರ್ಷಗಳ ಹಳೆಯ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಇತ್ತೀಚಿನದು ಎಂಬಂತೆ ಹಂಚಿಕೊಳ್ಳಲಾಗಿದೆ ಎಂಬುದು ಸ್ಪಷ್ಟವಾಗಿದೆ.
ಒಟ್ಟಾರೆಯಾಗಿ ಹೇಳುವುದಾದರೆ, ಲಾಲು ಪ್ರಸಾದ್ ಯಾದವ್ ಅವರ ಮೂರು ವರ್ಷಗಳ ಹಳೆಯ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಹೇಳಿಕೆಯೊಂದಿಗೆ ಇತ್ತೀಚಿನದ್ದು ಎಂಬಂತೆ ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯ ಎಡಿಟ್ ವಿಡಿಯೋ ಹಂಚಿಕೆ

