FACT CHECK | ಅಂಬೇಡ್ಕರ್ ಜಯಂತಿಯಂದು ಅಮೃತಸರದಲ್ಲಿ ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಲಾಗಿದೆಯೇ?

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಂದು, ಪಂಜಾಬ್‌ನ ಅಮೃತಸರದಲ್ಲಿ ಅವರ ಪ್ರತಿಮೆಯನ್ನು ಧ್ವಂಸಗೊಳಿಸುತ್ತಿರುವುದನ್ನು ತೋರಿಸುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು ಭಾರಿ ಕೋಲಾಹಲಕ್ಕೆ ಕಾರಣವಾಗುತ್ತಿವೆ.

ಒಬ್ಬ ಮಹಾನ್ ವ್ಯಕ್ತಿಗೆ ಹೀಗಾಗಬಹುದೇ ಎಂದು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೈರಲ್ ಆಗುತ್ತಿರುವ ವಿಡಿಯೋದಲ್ಲಿ, ಒಬ್ಬ ವ್ಯಕ್ತಿ ಅಂಬೇಡ್ಕರ್ ಪ್ರತಿಮೆಯ ಮುಂದೆ ಬೆಂಕಿ ಹಚ್ಚಿ ನಂತರ, ಪ್ರತಿಮೆಯ ಹಿಂದಿನ ಮೆಟ್ಟಿಲುಗಳ ಮೂಲಕ ಅಂಬೇಡ್ಕರ್ ಪ್ರತಿಮೆಯ ಮೇಲೆ ಹತ್ತಿ,  ತಲೆಗೆ ಸುತ್ತಿಗೆಯಿಂದ ಹೊಡೆಯುತ್ತಾನೆ. ಆದರೆ, ಅಲ್ಲಿದ್ದವರೆಲ್ಲರೂ ಈ ಘಟನೆಯನ್ನು ನೋಡಿದ್ದರೂ, ಯಾರೂ ಅದನ್ನು ತಡೆಯಲು ಪ್ರಯತ್ನಿಸಲಿಲ್ಲ ಎಂಬುದು ಗಮನಾರ್ಹ ಎಂದು ಪ್ರತಿಪಾದಿಸಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.

ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಂದು ವ್ಯಕ್ತಿಯೊಬ್ಬ ಅವರ ಪ್ರತಿಮೆಗೆ ಬೆಂಕಿ ಹಚ್ಚಿ, ನಂತರ ಅದನ್ನು ಸುತ್ತಿಗೆಯಿಂದ ಒಡೆಯಲು ಪ್ರಯತ್ನಿಸುತ್ತಿರುವ ವಿಡಿಯೋ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು, ವೈರಲ್ ವಿಡಿಯೋದದಲ್ಲಿ ಬರೆಯಲಾಗಿರುವ ಅಮೃತಸರ ಎಂದು ಬರೆದಿರುವುದನ್ನು ಬಳಸಿಕೊಂಡು ಕೀವರ್ಡ್‌ ಸರ್ಚ್ ಮಾಡಿದಾಗ, ಘಟನೆಗೆ ಸಂಬಂಧಿಸಿದ ಸುದ್ದಿಗಳು ಲಭ್ಯವಾಗಿವೆ. ವರದಿಯ ಪ್ರಕಾರ ಈ ಘಟನೆ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಜನವರಿ 26 ರಂದು ನಡೆದಿದೆ ಎಂದು ವರದಿಯಾಗಿದೆ.  ಇದಲ್ಲದೆ, ಪೊಲೀಸರು ದಾಳಿಕೋರನನ್ನು ಬಂಧಿಸಿದ್ದಾರೆ. ಈ ಘಟನೆ ಪಂಜಾಬ್‌ನಲ್ಲಿ ತೀವ್ರ ರಾಜಕೀಯ ಟೀಕೆಗೆ ಕಾರಣವಾಯಿತು. ಭಗವಂತ್ ಮಾನ್ ನೇತೃತ್ವದ ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಸರ್ಕಾರವನ್ನು ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ತೀವ್ರವಾಗಿ ಟೀಕಿಸಿವೆ.

ವೈರಲ್ ವಿಡಿಯೋದ ಕೀ ಫ್ರೇಮ್‌ಗಳನ್ನು ತೆಗೆದು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಅದಕ್ಕೆ ಸಂಬಂಧಿಸಿದ ಸುದ್ದಿಗಳು ಲಭ್ಯವಾಗಿವೆ. ಈ ವರ್ಷ, ಗಣರಾಜ್ಯೋತ್ಸವದ ಸಂದರ್ಭದಲ್ಲಿ, ಅಮೃತಸರದ ವ್ಯಕ್ತಿಯೊಬ್ಬರು ಈ ಕೃತ್ಯ ಎಸಗಿದ್ದಾನೆ. ಆದರೆ ಈಗ ಅಂಬೇಡ್ಕರ್ ಜಯಂತಿಯ ಸಂದರ್ಭದಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಮರು ಪ್ರಸಾರವಾಗುತ್ತಿದೆ. ಹಾಗಾಗಿ ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಘಟನೆಯನ್ನು ಖಂಡಿಸಿ ಹಂಚಿಕೊಳ್ಳುತ್ತಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಅಂಬೇಡ್ಕರ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ ಎಂಬುದು ನಿಜವಾದರೂ, ಈ ಘಟನೆ ಜನವರಿ 26, 2025ರಂದು ಗಣರಾಜ್ಯೋತ್ಸವ ಸಂದರ್ಭದಲ್ಲಿ ನಡೆದಿದೆ. ಆದರೆ ಈ ಘಟನೆಯನ್ನು ಅಂಬೇಡ್ಕರ್ ಜಯಂತಿಯಂದು ನಡೆದಿದೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | RSS ಅನ್ನು ಬ್ಯಾನ್ ಮಾಡ್ತಾ ಕೆನಡಾ ಸರ್ಕಾರ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights