FACT CHECK | ಆಸ್ಟ್ರೇಲಿಯಾ ಸರ್ಕಾರ ಭಾರತದ ವಿದ್ಯಾರ್ಥಿಗಳ ಪ್ರವೇಶ ನಿಷೇಧಿಸಿದೆಯೇ?

ವೀಸಾ ವಂಚನೆ ಮತ್ತು ನಕಲಿ ದಾಖಲೆ  ಬಗ್ಗೆ ಕಳವಳ ವ್ಯಕ್ತಪಡಿಸಿ ಆಸ್ಟ್ರೇಲಿಯಾ ಸರ್ಕಾರ ಗುಜರಾತ್, ಹರಿಯಾಣ, ಉತ್ತರ ಪ್ರದೇಶ ಮತ್ತು ಬಿಹಾರ ರಾಜ್ಯದ ಭಾರತೀಯ ವಿದ್ಯಾರ್ಥಿಗಳನ್ನು ಆಸ್ಟ್ರೇಲಿಯಾದ ವಿಶ್ವವಿದ್ಯಾಲಯಗಳಿಗೆ ದಾಖಲಾಗುವುದನ್ನು ನಿಷೇಧಿಸಿದೆ ಎಂದು ಹೇಳುವ ಪೋಸ್ಟ್ (ಇಲ್ಲಿ ಮತ್ತು ಇಲ್ಲಿ) ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

ಆಸ್ಟ್ರೇಲಿಯಾ ಸರ್ಕಾರವು ಭಾರತದ ಗುಜರಾತ್, ಹರಿಯಾಣ, ಉತ್ತರ ಪ್ರದೇಶ ಮತ್ತು ಬಿಹಾರ ರಾಜ್ಯದ ವಿದ್ಯಾರ್ಥಿಗಳು ತನ್ನ ದೇಶದ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆಯುವುದನ್ನು ನಿಷೇಧಿಸಿದೆ ಎಂದು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಂಚಿಕೊಳ್ಳುತ್ತಿದ್ದಾರೆ. ನಕಲಿ ವೀಸಾ ಮತ್ತು ಇತರೆ ವಂಚನೆ ಪ್ರಕರಣಗಳಿಂದ ಆಸ್ಪ್ರೇಲಿಯಾ ಈ ನಿರ್ಧಾರಕ್ಕೆ ಬಂದಿದೆ ಎಂದು ಪೋಸ್ಟ್ ಹಂಚಿಕೊಳ್ಳುತ್ತಿರುವವರು ಪ್ರತಿಪಾದನೆ ಮಾಡುತ್ತಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಲಾಗುತ್ತಿರುವ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಪೋಸ್ಟ್‌ಗೆ ಸಂಬಂಧಿಸಿದ ಕೀ ವರ್ಡ್‌ಗಳನ್ನು ಬಳಸಿಕೊಂಡು ಗೂಗಲ್ ಸರ್ಚ್ ಮಾಡಿದಾಗ, ಆಸ್ಟ್ರೇಲಿಯಾ ಸರ್ಕಾರದಿಂದ ಯಾವುದೇ ಅಧಿಕೃತ ಹೇಳಿಕೆ ಅಥವಾ ನಿರ್ದಿಷ್ಟ ರಾಜ್ಯಗಳಿಂದ ಭಾರತೀಯ ವಿದ್ಯಾರ್ಥಿಗಳ ಮೇಲಿನ ನಿಷೇಧವನ್ನು ದೃಢೀಕರಿಸುವ ವಿಶ್ವಾಸಾರ್ಹ ಮಾಧ್ಯಮ ವರದಿಗಳು ಲಭ್ಯವಾಗಿಲ್ಲ.

A black text on a white background  AI-generated content may be incorrect.

ಈ ಕುರಿತು ಮತ್ತಷ್ಟು ಗೂಗಲ್ ಸರ್ಚ್ ಮಾಡಿದಾಗ, 2023 ರಲ್ಲಿ ಕೆಲವು ಆಸ್ಟ್ರೇಲಿಯಾದ ವಿಶ್ವವಿದ್ಯಾಲಯಗಳು ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಗುಜರಾತ್ ಮತ್ತು ಇತರ ಕೆಲವು ಭಾರತದ ರಾಜ್ಯಗಳ ವಿದ್ಯಾರ್ಥಿಗಳ ನೇಮಕಾತಿಯನ್ನು ತಾತ್ಕಾಲಿಕವಾಗಿ ತಡೆಹಿಡಿದಿವೆ ಅಥವಾ ನಿರ್ಬಂಧಿಸಿವೆ ಎಂದು ತಿಳಿದುಬಂದಿದೆ. ವಂಚನೆ ಮತ್ತು ವೀಸಾ ನಿರಾಕರಣೆ ಪ್ರಕರಣಗಳು ಹೆಚ್ಚಾಗಿ ಕಂಡುಬಂದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಭಾರತದಿಂದ ಸುಮಾರು ನಾಲ್ಕು ಅರ್ಜಿಗಳಲ್ಲಿ ಒಂದನ್ನು “ವಂಚನೆ” ಅಥವಾ “ಅಸಲಿ ಅಲ್ಲ” ಎಂದು ಪರಿಗಣಿಸಲಾಗಿದೆ ಎಂದು ಗೃಹ ವ್ಯವಹಾರಗಳ ಇಲಾಖೆ ವರದಿ ಮಾಡಿದೆ.

A screenshot of a website  AI-generated content may be incorrect.

2023ರಲ್ಲಿ ಆಸ್ಟ್ರೇಲಿಯಾದ ಕೆಲವು ವಿಶ್ವವಿದ್ಯಾಲಯಗಳು ಭಾರತದ ಕೆಲವು ರಾಜ್ಯಗಳ ವಿದ್ಯಾರ್ಥಿಗಳ ಪ್ರವೇಶಗಳನ್ನು ಕೆಲ ಕಾಲ ನಿರ್ಬಂಧಿಸಿದ್ದವು.  ಅದಕ್ಕೆ ವೀಸಾ ನಿರಾಕರಣೆಯಲ್ಲಿ ಹೆಚ್ಚಳ ಮತ್ತು ವಿದ್ಯಾರ್ಥಿಗಳು ಡ್ರಾಪ್ ಔಟ್‌ಗಳಾಗುತ್ತಿದ್ದುದು ಕಾರಣವಾಗಿತ್ತು. ಅದು ವಿ.ವಿ.ಗಳ ಸ್ವತಂತ್ರ ನಿರ್ಧಾರವಾಗಿತ್ತು. ನಂತರ ಆ ನಿರ್ಬಂಧವನ್ನು ತೆಗೆದುಹಾಕಲಾಗಿತ್ತು. ಅದನ್ನು ಆಧರಿಸಿ ಈಗ ಸುಳ್ಳು ಪ್ರತಿಪಾದನೆ ಮಾಡಲಾಗುತ್ತಿದೆ ಎಂದು ಫ್ಯಾಕ್ಟ್‌ಲಿ ಫ್ಯಾಕ್ಟ್ ಚೆಕ್ ವರದಿ ಪ್ರಕಟಿಸಿದೆ.

A screenshot of a graph  AI-generated content may be incorrect.

ಒಟ್ಟಾರೆಯಾಗಿ ಹೇಳುವುದಾದರೆ, ಆಸ್ಟ್ರೇಲಿಯಾ ಸರ್ಕಾರ ಅಂತಹ ಯಾವುದೇ ನಿಷೇಧವನ್ನು ವಿಧಿಸಿಲ್ಲ. ಹೆಚ್ಚಿನ ವೀಸಾ ನಿರಾಕರಣೆ ಮತ್ತು ಡ್ರಾಪ್ಔಟ್ ಗಳಿಂದಾಗಿ ಕೆಲವು ವಿಶ್ವವಿದ್ಯಾಲಯಗಳು 2023 ರಲ್ಲಿ ಕೆಲವು ಭಾರತೀಯ ರಾಜ್ಯಗಳಿಂದ ಪ್ರವೇಶವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದವು, ಆದರೆ ಇವು ಸ್ವತಂತ್ರ ನಿರ್ಧಾರಗಳಾಗಿದ್ದವು ಮತ್ತು ನಂತರ ಅವುಗಳನ್ನು ತೆಗೆದುಹಾಕಲಾಯಿತು. ಹಾಗಾಗಿ ಇದು ಎರಡು ವರ್ಷಗಳ ಹಿಂದಿನ ಮತ್ತು ಅರ್ಧ ಸತ್ಯದಿಂದ ಕೂಡಿದೆ ಎಂದು ತಿಳಿದುಬಂದಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾದಲ್ಲಿ ಅಂಬೇಡ್ಕರ್ ಚಿತ್ರ ಪ್ರದರ್ಶಿಸಲಾಗಿದೆಯೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights