FACT CHECK | ಮಹಿಳೆಯೊಬ್ಬರು ಪ್ರಧಾನಿ ಮೋದಿ ಮತ್ತು ಸಿಎಂ ಯೋಗಿ ವಿರುದ್ಧ ಘೋಷಣೆ ಕೂಗುತ್ತಿರುವ ವಿಡಿಯೋದ ಅಸಲೀಯತ್ತೇನು?
ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದ್ದು. ಈ ಸಂದರ್ಭದಲ್ಲಿ ಮಹಿಳೆಯೊಬ್ಬರು ಬಿಜೆಪಿ ಧ್ವಜವಿರುವ ವಾಹನವನ್ನು ತಡೆದು ಪ್ರಧಾನಿ ಮೋದಿ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ. ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಈ ವೀಡಿಯೊವನ್ನು ಹಂಚಿಕೊಂಡು ಈ ವಿಡಿಯೋ ಇತ್ತೀಚಿನ ಪ್ರತಿಭಟನೆಗೆ ಸಂಬಂಧಿಸಿದ್ದು ಎಂದು ಹೇಳಿಕೊಳ್ಳುತ್ತಿದ್ದಾರೆ.
ಧಮ್ಮನಾದ್ ಎಂಬ ಯೂಟ್ಯೂಬ್‌ನಲ್ಲಿ ಈ ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದು, ‘ಈ ಮಹಿಳೆಯರು ಯೋಗಿ ಮತ್ತು ಮೋದಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು ಮತ್ತು ಅವರ ಬೆಂಗಾವಲು ಪಡೆಯ ಮೇಲೆ ದಾಳಿ ಮಾಡಿ, ಅವ್ಯವಸ್ಥೆಯನ್ನು ಸೃಷ್ಟಿಸಿದರು’ ಎಂದು ಬರೆದಿದ್ದಾರೆ.
ಇದೇ ರೀತಿಯ ಪ್ರತಿಪಾದನೆಯೊಂದಿಗೆ ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ವಿಡಿಯೋವನ್ನು ಹಂಚಿಕೊಂಡಿದ್ದು, ಇದರ ಸತ್ಯಾಸತ್ಯೆಯನ್ನು ಪರಿಶೀಲಿಸೋಣ.
अरे ये मैडम क्या कह रही हैं, भक्तों मैने सही सुना ना या मेरे कान बज रहे हैं pic.twitter.com/Ov8VslY38T
— Imranzeemi (@imranzeemi) April 20, 2025
ಫ್ಯಾಕ್ಟ್‌ಚೆಕ್ :
ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿರುವ ವಿಡಿಯೋದ ಕೀ ಫ್ರೇಮ್‌ಗಳನ್ನು ತೆಗೆದು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಸೆಪ್ಟೆಂಬರ್ 7, 2020 ರಂದು ಎಂಡಿ ಅನ್ಸಾರ್ ಎಆರ್ ಎಂಬುವವರು ತಮ್ಮ ಫೇಸ್‌ಬುಕ್ ಪುಟದಲ್ಲಿ ವೈರಲ್ ವೀಡಿಯೊದ ದೀರ್ಘ ಆವೃತ್ತಿಯನ್ನು ಮರು ಹಂಚಿಕೊಂಡಿದ್ದಾರೆ.
ಈ ವಿಡಿಯೋವನ್ನು ಎಂಡಿ ಅನ್ಸಾರ್ ಎಆರ್ ತಮ್ಮ ಫೇಸ್‌ಬುಕ್ ಪುಟದಲ್ಲಿ ಮರುಹಂಚಿಕೊಂಡಿದ್ದಾರೆ. ಆ ವೀಡಿಯೊವನ್ನು ರುಹುಲ್ ಅಮೀನ್ ಎಂಬ ಬಳಕೆದಾರರು ಸೆಪ್ಟೆಂಬರ್ 7, 2020 ರಂದು ಹಂಚಿಕೊಂಡಿದ್ದಾರೆ.
ಇದರಿಂದ ಸ್ಪಷ್ಟವಾಗಿ ತಿಳಿಯುವುದೇನೆಂದರೆ, ಈ ವಿಡಿಯೋ ಇತ್ತೀಚಿನದಲ್ಲ ಎಂದು ಸ್ಪಷ್ಟಪಡಿಸಿತು. ಈ ವೈರಲ್ ವಿಡಿಯೋ 2020 ರಿಂದ ಅಂತರ್ಜಾಲದಲ್ಲಿ ಲಭ್ಯವಿದೆ. ವಿಡಿಯೋ ಎಲ್ಲಿಂದ ಬಂದಿದೆ ಎಂಬುದು ಇನ್ನೂ ತಿಳಿದುಬಂದಿಲ್ಲವಾದರೂ, ವಿಡಿಯೋ ಹಳೆಯದು ಎಂಬುದು ಸ್ಪಷ್ಟವಾಗಿದೆ.
ಒಟ್ಟಾರೆಯಾಗಿ ಹೇಳುವುದಾದರೆ, ಪ್ರಧಾನಿ ಮೋದಿ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಮಹಿಳೆಯೊಬ್ಬರು ಘೋಷಣೆಗಳನ್ನು ಕೂಗುತ್ತಿರುವ ಈ ವಿಡಿಯೋ 5 ವರ್ಷ ಹಳೆಯದು ಎಂದು ತನಿಖೆಯ ನಂತರ ಕಂಡುಬಂದಿದೆ. ಈ ಹಳೆಯ ವೀಡಿಯೊವನ್ನು ಮತ್ತೆ ಹಂಚಿಕೊಳ್ಳಲಾಗುತ್ತಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | ಬಾಂಗ್ಲಾ ಮುಸ್ಲಿಮರು ದೋಣಿ ಮೂಲಕ ಅಕ್ರಮವಾಗಿ ಪಶ್ಚಿಮ ಬಂಗಾಳಕ್ಕೆ ಆಗಮಿಸುತ್ತಿದ್ದಾರೆ ಎಂಬುದು ನಿಜವೇ?

