FACT CHECK | ಭಾರತೀಯ ಸೇನೆ ಪಾಕಿಸ್ತಾನದ ಯುದ್ಧ ಸಾಮಗ್ರಿ ಡಿಪೋವನ್ನು ಉಡಾಯಿಸಿದೆ ಎಂಬುದು ಸುಳ್ಳು

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಪಾಕ್ ಆಕ್ರಮಿತ ಕಾಶ್ಮೀರದ ಲೀಪಾ ಕಣಿವೆಯಲ್ಲಿರುವ ಪಾಕಿಸ್ತಾನದ ಯುದ್ಧ ಸಾಮಗ್ರಿ ಡಿಪೋವನ್ನು ಭಾರತೀಯ ಸೇನೆ ಉಡಾಯಿಸಿದೆ ಎಂದು ಹೇಳುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಸ್ಫೋಟದ ಶಬ್ದಕೇಳುತ್ತಿದೆ.

ಇದೇ ರೀತಿಯ ಹೇಳಿಕೆಯೊಂದಿಗೆ ವೈರಲ್ ಆಗುತ್ತಿರುವ ವಿಡಿಯೋವನ್ನು ನೀವು ಇಲ್ಲಿ, ಇಲ್ಲಿ ನೋಡಬಹುದು. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಳಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ವಿಡಿಯೋದ ಸ್ಕ್ರೀನ್‌ಶಾಟ್ ತೆಗೆದುಕೊಂಡು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ,  ಮಾರ್ಚ್ 20, 2022 ರಂದು NDTV ಪ್ರಕಟಿಸಿದ ವರದಿ ಲಭ್ಯವಾಗಿದೆ.

ವರದಿಯ ಪ್ರಕಾರ, ಉತ್ತರ ಪಾಕಿಸ್ತಾನದ ಸಿಯಾಲ್‌ಕೋಟ್‌ನಲ್ಲಿರುವ ಶಸ್ತ್ರಾಗಾರದಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ಸುದ್ದಿ ಇದರಲ್ಲಿದೆ. ಈ ವರದಿಯು ಸಾಂಕ್ರಾಮಿಕ ರೋಗದ ಸಮಯದಲ್ಲಿ ಪ್ರಕಟವಾದ ಕಾರಣ, ಹೆಚ್ಚಿನ ಮಾಹಿತಿ ಲಭ್ಯವಿಲ್ಲ.

ಮತ್ತಷ್ಟು ಮಾಹಿತಿಗಾಗಿ ಕೀ ವರ್ಡ್ ಸರ್ಚ್ ಮಾಡಿದಾಗ, ವಿಡಿಯೋಗೆ ಸಂಬಂಧಿಸಿದ ಮತ್ತಷ್ಟು ವರದಿಗಳು ಲಭ್ಯವಾಗಿದೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದ ಈ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಮತ್ತು ಅಪಘಾತಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಎಬಿಪಿ ಲೈವ್ ವರದಿ ಮಾಡಿದೆ. ಈ ವರದಿಯಲ್ಲಿ ವೈರಲ್ ಆಗುತ್ತಿರುವ ವೀಡಿಯೊದ ಸ್ಕ್ರೀನ್‌ಶಾಟ್ ಅನ್ನು ಸಹ ನೀವು ನೋಡಬಹುದು.

ನಂತರದ ತನಿಖೆಯಲ್ಲಿ ಡೆಕ್ಕನ್ ಕ್ರಾನಿಕಲ್ ಸೇರಿದಂತೆ ವಿವಿಧ ಮಾಧ್ಯಮಗಳು ಈ ಘಟನೆಯನ್ನು ವರದಿ ಮಾಡಿದ್ದವು ಎಂದು ತಿಳಿದುಬಂದಿದೆ. ಪಾಕಿಸ್ತಾನಿ ಮಾಧ್ಯಮ ಸಂಸ್ಥೆ ಪಾಕಿಸ್ತಾನ್ ಟುಡೇ ಕೂಡ ಈ ಘಟನೆಯನ್ನು ವರದಿ ಮಾಡಿದೆ. ಈ ಅಪಘಾತಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂಬುದು ಸ್ಪಷ್ಟವಾಗಿ ಬರೆಯಲಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಮಾರ್ಚ್ 2022 ರಲ್ಲಿ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸಿಯಾಲ್‌ಕೋಟ್‌ನಲ್ಲಿರುವ ಶಸ್ತ್ರಾಗಾರದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಬೆಂಕಿಯ ದೃಶ್ಯಾವಳಿಗಳನ್ನು, POK ಯಲ್ಲಿರುವ ಪಾಕಿಸ್ತಾನದ ಸೇನೆಯ ಶಸ್ತ್ರಾಸ್ತ್ರಗಳ ಡಿಪೋವನ್ನು ಭಾರತೀಯ ಸೇನೆ ಉಡಾಯಿಸಿದೆ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿ ವಿರೋಧ ಪಕ್ಷದ ನಾಯಕರು ಮಾತನಾಡಿಲ್ಲವೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights