FACT CHECK | ಕೇರಳದಲ್ಲಿ ಮುಸ್ಲಿಂ ಎಂಬ ಕಾರಣಕ್ಕೆ ಮಹಿಳೆಗೆ ಕಾರಿನಲ್ಲಿ ಡಿಕ್ಕಿ ಹೊಡೆದಿರುವುದು ನಿಜವೇ?

ಕಾರು ಅಪಘಾತದ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಮಗುವಿನೊಂದಿಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿ ಹೊಡೆದು ಮಹಿಳೆ ಹಾರಿ ಹೋಗುವುದನ್ನು ಕಾಣಬಹುದು. ಮಹಿಳೆ ಮುಸ್ಲಿಂ ಎಂಬ ಕಾರಣದಿಂದ ಕಾರು ಚಾಲಕ ಮಹಿಳೆಗೆ ಅಪಘಾತ ಮಾಡಿದ್ದಾನೆ ಎಂದು ಪ್ರತಿಪಾದಿಸಿ ಪೋಸ್ಟ್‌ಅನ್ನು ಹಂಚಿಕೊಂಡಿದ್ದಾನೆ. ಈ ಘಟನೆ ಕೇರಳದಲ್ಲಿ ನಡೆದಿದ್ದು, ಮುಸ್ಲಿಂ ವಿರುದ್ದ ಈ ರೀತಿ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.

ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ವಿಡಿಯೋವನ್ನು ಹಂಚಿಕೊಂಡಿದ್ದು ಇದೇ ರೀತಿಯ ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳುತ್ತಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ವಿಡಿಯೋದ ಕೀ ಫ್ರೇಮ್‌ಗಳನ್ನು ಬಳಸಿಕೊಂಡು, ಗೂಗಲ್ ಸರ್ಚ್ ಮಾಡಿದಾಗ, Matribhoomi.com ಎಂಬ ಕೇರಳದ ಸ್ಥಳೀಯ ಸುದ್ದಿ ಪೋರ್ಟಲ್  ವರದಿಯೊಂದು ಲಭ್ಯವಾಗಿದೆ.

ವರದಿಯ ಪ್ರಕಾರ “ಮಲಪ್ಪುರಂನ ಕೊಟ್ಟಕ್ಕಲ್‌ನಲ್ಲಿ ಮಗುವಿನೊಂದಿಗೆ ಹೋಗುತ್ತಿದ್ದ ಮಹಿಳಾ ಪಾದಚಾರಿಯೊಬ್ಬರಿಗೆ ಕಾರು ಡಿಕ್ಕಿ ಹೊಡೆದಿದೆ. ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಮಗು ಪವಾಡಸದೃಶವಾಗಿ ಪಾರಾಗಿದೆ. ಕಳೆದ ಶನಿವಾರ ಕೊಟ್ಟಕ್ಕಲ್ ಎಚ್‌ಎಂಎಸ್ ಆಸ್ಪತ್ರೆಯ ಬಳಿ ಈ ಅಪಘಾತ ಸಂಭವಿಸಿದ್ದು, ಕೊಟ್ಟಕ್ಕಲ್‌ನ ಸ್ವಾಗತಮಡು ನಿವಾಸಿ ಬದ್ರಿಯಾ ಅಂಗನವಾಡಿಯಿಂದ ತಮ್ಮ ಮಗ ಅಮೀರ್ ಮೊಹಮ್ಮದ್ ಅವರನ್ನು ಕರೆದುಕೊಂಡು ಬರುತ್ತಿದ್ದಾಗ ಈ ಘಟನೆ ನಡೆದಿದೆ” ಎಂದು ಉಲ್ಲೇಖಿಸಲಾಗಿದೆ.

ಈ ಘಟನೆಯನ್ನು ಮೇ 2 ರ ಇಂಡಿಯಾ ಟುಡೆ ವರದಿಯಲ್ಲಿಯೂ ಉಲ್ಲೇಖಿಸಲಾಗಿದೆ. ಈ ವರದಿಯ ಪ್ರಕಾರ ಅಪಘಾತದಲ್ಲಿ ಗಾಯಗೊಂಡ ಮಹಿಳೆಗೆ ಅಪಘಾತಕ್ಕೆ ಕಾರಣವಾದ ಕಾರು ಚಾಲಕ ಸಹಾಯ ಮಾಡಿದ್ದಾನೆ. ಮಹಿಳೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಕೊಡಿಸಲಾಗಿದ್ದು, ತದ ನಂತರ ಆಕೆ ಗುಣಮುಖಳಾಗಿದ್ದಾಳೆ ಎಂಬುದು ತಿಳಿದು ಬಂದಿದೆ. ಹೀಗಾಗಿ ಈ ಘಟನೆಯಲ್ಲಿ ಯಾವುದೇ ರೀತಿಯಾದ ಕೋಮು ಆಯಾಮಗಳು ಇಲ್ಲ ಎಂಬುದು ಕೂಡ ಸ್ಪಷ್ಟವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಕೇರಳದಲ್ಲಿ ವ್ಯಕ್ತಿಯೊಬ್ಬ ಕೋಮು ದ್ವೇಷದ ಕಾರಣಕ್ಕೆ ಮುಸ್ಲಿಂ ಮಹಿಳೆಯ ಮೇಲೆ ಕಾರು ಚಲಾಯಿಸಿದ್ದಾನೆ ಎಂಬುದು ಸುಳ್ಳು. ವೈರಲ್‌ ವಿಡಿಯೋ ಸಾಮಾನ್ಯ ರಸ್ತೆ ಅಪಘಾತಕ್ಕೆ ಸಂಬಂಧಿಸಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಪಾಕ್ ವಿರುದ್ದ ಯುದ್ದಕ್ಕೆ ಹೊರಟ ಭಾರತೀಯ ಸೈನಿಕರಿಗೆ ಸಲ್ಯೂಟ್ ಹೊಡೆಯುತ್ತಿರುವ ಯುವತಿಯ ವಿಡಿಯೋ! ವಾಸ್ತವವೇನು?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights