FACT CHECK | ಭಾರತದಿಂದ ಪಾಕ್ ಮೇಲೆ ಸಾವಿರಾರು ಮಿಸೇಲ್ ಮೂಲಕ ದಾಳಿ ನಡೆಸಲಾಗಿದೆ ಎಂದು ಗ್ರಾಫಿಕ್ಸ್ ವಿಡಿಯೋ ಹಂಚಿಕೆ
ಮೇ 8 ರಂದು ಪಾಕಿಸ್ತಾನ ಸೇನೆಯು ಭಾರತದ ಗಡಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಕ್ಷಿಪಣಿ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ತೀವ್ರಗೊಂಡಿದೆ. ವಾಯು ರಕ್ಷಣಾ ವ್ಯವಸ್ಥೆಗಳನ್ನು ಬಳಸಿಕೊಂಡು ಭಾರತೀಯ ಸೇನೆಯು ಒಳಬರುವ ಎಲ್ಲಾ ಕ್ಷಿಪಣಿಗಳನ್ನು ಯಶಸ್ವಿಯಾಗಿ ತಡೆದು ನಾಶಪಡಿಸಿದೆ. ಅಲ್ಲದೆ ಭಾರತೀಯ ಸೇನೆಯು ವಾಯುಪ್ರದೇಶವನ್ನು ಉಲ್ಲಂಘಿಸಲು ಪ್ರಯತ್ನಿಸಿದ ಮೂರು ಪಾಕಿಸ್ತಾನಿ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ. ಇದರ ಮಧ್ಯೆ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ.
ಫೇಸ್ಬುಕ್ ಬಳಕೆದಾರರೊಬ್ಬರು ಈ ವಿಡಿಯೋವನ್ನು ಹಂಚಿಕೊಂಡು, ‘‘ಪಾಕಿಸ್ತಾನದಿಂದ ಜಮ್ಮು ಮತ್ತು ಪಂಜಾಬ್ ಮೇಲೆ ಏಕಕಾಲಕ್ಕೆ 100 ಮಿಸೆಲ್ ನಿಂದ ದಾಳಿ. ಅದಕ್ಕೆ ಉತ್ತರವಾಗಿ ಸಾವಿರಾರು ಮಿಸೇಲ್ ಮೂಲಕ ಭಾರತದಿಂದ ದಾಳಿ ಆರಂಭ ಬೆಳಿಗ್ಗೆ ವೇಳೆಗೆ ಪಾಕಿಸ್ತಾನ ಏನಾಗುತ್ತೋ ಕಾದು ನೋಡಬೇಕು, ಹಿಂದೂಸ್ತಾನವನ್ನು ಕೆಣಕಿದ ಪಾಕಿಸ್ತಾನದ ನಾಶ ಕಟ್ಟಿಟ್ಟ ಬುತ್ತಿ’’ ಎಂದು ಬರೆದುಕೊಂಡಿದ್ದಾರೆ. ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಒಂದೇ ಬಾರಿಗೆ ಅನೇಕ ಕ್ಷಿಪಣಿಗಳನ್ನು ರಿಲೀಸ್ ಮಾಡುತ್ತಿರುವುದನ್ನು ಕಾಣಬಹುದು.
ಇದೇ ರೀತಿಯ ಪ್ರತಿಪಾದನೆಯೊಂದಿಗೆ ಹಲವು ಸಾಮಾಜಿಕ ಮಾಧ್ಯಮಗಳ ಬಳಖೆದಾರರು ವಿಡಿಯೋವನ್ನು ಹಂಚಿಕೊಂಡಿದ್ದು, ಅವುಗಳನ್ನು ಇಲ್ಲಿ ನೋಡಬಹುದು. ಹಾಗಿದ್ದರೆ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್ಚೆಕ್ :
ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್ಗಳಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು, ವೈರಲ್ ವಿಡಿಯೋದ ಕೀ ಫ್ರೇಮ್ಗಳನ್ನು ತೆಗೆದು ಗೂಗಲ್ ಸರ್ಚ್ ಮಾಡಿದಾಗ, Compared Comparison ಎಂಬ ಯೂಟ್ಯೂಬ್ ಚಾನೆಲ್ನಲ್ಲಿ ಇದೇ ವಿಡಿಯೋದ ಪೂರ್ಣ ಆವೃತ್ತಿಯನ್ನು ಉತ್ತಮ ಕ್ವಾಲಿಟಿಯಲ್ಲಿ ಅಪ್ಲೋಡ್ ಮಾಡಿರುವುದು ಲಭ್ಯವಾಗಿದೆ.
ವೈರಲ್ ಆಗುತ್ತಿರುವ ವಿಡಿಯೋ ನಿಜವಾದ ಕ್ಷಿಪಣಿ ದಾಳಿಯದ್ದಲ್ಲ, ಬದಲಾಗಿ ಇದು ಗೇಮಿಂಗ್ ಕ್ಲಿಪ್ ಆಗಿದೆ. ಗ್ರಾಫಿಕ್ಸ್ ತಂತ್ರಜ್ಞಾನಗಳನ್ನು ಬಳಸಿಕೊಂಡು ನೈಜ-ಪ್ರಪಂಚದ ಘಟನೆಗಳನ್ನು ಅನುಕರಿಸುವ ಮೂಲಕ ರಚಿಸಲಾದ ವಿಡಿಯೋ ಇದಾಗಿದೆ.
ಈ ಚಾನಲ್ನಲ್ಲಿ ನಾವು ಅಂತಹ ಹಲವಾರು ವಿಡಿಯೋಗಳನ್ನು ಕಂಡುಕೊಂಡಿದ್ದೇವೆ. ಈ ಎಲ್ಲಾ ವಿಡಿಯೋಗಳು ಗೇಮಿಂಗ್ ವಿಡಿಯೋಗಳಾಗಿವೆ. ನಮ್ಮ ತನಿಖೆಯಿಂದ ವೈರಲ್ ವಿಡಿಯೋ ನಿಜವಾದದ್ದಲ್ಲ, ಬದಲಾಗಿ ಇದು ಗ್ರಾಫಿಕ್ಸ್ ಗೇಮಿಂಗ್ ದೃಶ್ಯಾವಳಿಯಾಗಿದೆ ಎಂದು ಸ್ಪಷ್ಟವಾಗಿ ತಿಳಿದುಬಂದಿದೆ.
ಒಟ್ಟಾರೆಯಾಗಿ ಹೇಳುವುದಾದರೆ, ಸಾಮಾಜಿಕ ಮಾಧ್ಯಮಗಳಲ್ಲಿ ಭಾರತ ಪಾಕ್ ನಡುವಿಸಿ ಸಂಘರ್ಷದ ವಿಡಿಯೋ ಎಂದು ಹಂಚಿಕೊಳ್ಳಲಾಗುತ್ತಿರುವ ವಿಡಿಯೋ ಗ್ರಾಫಿಕ್ಸ್ ಗೇಮಿಂಗ್ ದೃಶ್ಯಾವಳಿಯಾಗಿದ್ದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | ಎಲ್ಪಿಜಿ ಸಿಲಿಂಡರ್ ಸ್ಪೋಟದ ದೃಶ್ಯಗಳನ್ನು ಭಾರತ ಮತ್ತು ಪಾಕ್ ಯುದ್ದದ ವಿಡಿಯೋ ಎಂದು ತಪ್ಪಾಗಿ ಹಂಚಿಕೆ

