FACT CHECK | ಎಲ್‌ಪಿಜಿ ಸಿಲಿಂಡರ್ ಸ್ಪೋಟದ ದೃಶ್ಯಗಳನ್ನು ಭಾರತ ಮತ್ತು ಪಾಕ್ ಯುದ್ದದ ವಿಡಿಯೋ ಎಂದು ತಪ್ಪಾಗಿ ಹಂಚಿಕೆ

ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ಪಾದಕರ ತಾಣಗಳ ಮೇಲೆ ಬುಧವಾರ ಬೆಳಗಿನ ಜಾವ ಭಾರತ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಆರಂಭಿಸಿದೆ. ಸ್ವಲ್ಪ ಸಮಯದ ಹಿಂದೆ, ಭಾರತೀಯ ಸಶಸ್ತ್ರ ಪಡೆಗಳು ‘ಆಪರೇಷನ್ ಸಿಂಧೂರ್’ ಪ್ರಾರಂಭಿಸಿದವು, ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಉಗ್ರರ ಅಡಗುತಾಣಗಳ ಮೇಲೆ ದಾಳಿ ನಡೆಸಲಾಯಿತು ಎಂದು ಭಾರತೀಯ ರಕ್ಷಣಾ ಸಚಿವಾಲಯದ ಹೇಳಿಕೆ ತಿಳಿಸಿದೆ. ಈ ಸಂದರ್ಭದಲ್ಲಿ, IAF ನಡೆಸಿದ ದಾಳಿಯನ್ನು ತೋರಿಸಲು ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ರಸ್ತೆಯಲ್ಲಿ ಸ್ಫೋಟ ಸಂಭವಿಸುತ್ತಿರುವುದನ್ನು ಮತ್ತು ಟ್ರಕ್‌ಗಳಿಂದ ಬೆಂಕಿ ಹೊರಹೊಮ್ಮುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದಾಗಿದೆ. ಇದು ಭಾರತ ಮತ್ತು ಪಾಕಿಸ್ತಾನದ ಸಂಘರ್ಷದ ವಿಡಿಯೋ ಎಂದು ಹಲವರು ಉಲ್ಲೇಖಿಸಿದ್ದಾರೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್‌ ವಿಡಿಯೋದಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್‌ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು, ವೈರಲ್‌ ವಿಡಿಯೋದ ಹಲವು ಕೀ ಫ್ರೇಮ್‌ಗಳನ್ನು ಬಳಸಿಕೊಂಡು ಗೂಗಲ್‌ ರಿವರ್ಸ್‌ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಮಾರ್ಚ್ 25 ರಂದು ಗಲ್ಫ್ ಡಿಜಿಟಲ್ ನ್ಯೂಸ್ ಫೇಸ್‌ಬುಕ್ ಪೇಜ್‌ನಲ್ಲಿ ಅಪ್‌ಲೋಡ್ ಮಾಡಿದ ಅದೇ ವಿಡಿಯೋ ಲಭ್ಯವಾಗಿದೆ.  “ಮುಂಬೈನ ಧಾರಾವಿ ಕೊಳೆಗೇರಿಯಲ್ಲಿ ಗ್ಯಾಸ್ ಸಿಲಿಂಡರ್‌ಗಳು ಸ್ಪೋಟಗೊಂಡಿವೆ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮಾರ್ಚ್ 24 ರಂದು ಮುಂಬೈನ ಅತಿದೊಡ್ಡ ಕೊಳೆಗೇರಿ ಧಾರಾವಿಯಲ್ಲಿ ಟ್ರಕ್‌ನಲ್ಲಿದ್ದ ಹಲವಾರು ಅಡುಗೆ ಅನಿಲ ಸಿಲಿಂಡರ್‌ಗಳು ಬೆಂಕಿಗೆ ಆಹುತಿಯಾಗಿ ಸ್ಫೋಟಗೊಂಡಿವೆ ಎಂದು ಈ ವರದಿಯಲ್ಲಿ ಉಲ್ಲೇಖಿಸಲಾಗಿದ್ದು, ಮಾರ್ಚ್ 26 ರಂದು ಟೈಮ್ಸ್ ಆಫ್ ಇಂಡಿಯಾ ಈ ಘಟನೆಯ ಕುರಿತು “ವೀಕ್ಷಿಸಿ: ಟ್ರಕ್‌ನಲ್ಲಿ 20+ ಎಲ್‌ಪಿಜಿ ಸಿಲಿಂಡರ್‌ಗಳು ಸ್ಫೋಟಗೊಂಡಾಗ ಮುಂಬೈನ ಧಾರಾವಿ ನಡುಗಿತು” ಎಂಬ ಶೀರ್ಷಿಕೆಯೊಂದಿಗೆ ವರದಿ ಪ್ರಕಟಿಸಿರುವುದು ಕೂಡ ಕಂಡು ಬಂದಿದೆ.  ಇದೇ ರೀತಿಯಾಗಿ ಹಲವು ಮಾಧ್ಯಮಗಳು ವರದಿ ಮಾಡಿರುವುದು ಲಭ್ಯವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ವೈರಲ್‌ ವಿಡಿಯೋಗೂ ಭಾರತ ಮತ್ತು ಪಾಕಿಸ್ತಾನದ ಸಂಘರ್ಷಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಭಾರತ ಸರ್ಕಾರ ಸಲಹಾ ಪತ್ರಗಳನ್ನು ಪ್ರಕಟಿಸಿದೆ ಎಂದು ನಕಲಿ ಪೋಸ್ಟ್‌ ಹಂಚಿಕೆ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights