FACT CHECK | ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಜೈಲಿನಲ್ಲೆ ನಿಧನರಾಗಿದ್ದು ನಿಜವೇ?

ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ನಿಧನರಾಗಿದ್ದಾರೆ ಎಂಬ ಸುದ್ದಿಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ಪತ್ರಿಕಾ ಹೇಳಿಕೆ ಎಂದು ಪ್ರತಿಪಾದಿಸಿ ಹಂಚಿಕೊಳ್ಳಲಾಗುತ್ತಿದೆ.

ವೈರಲ್ ಪೋಸ್ಟ್‌ನಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ ಮಹಾನ್ ಕ್ರಿಕೆಟಿಗ ಇಮ್ರಾನ್ ಖಾನ್ ಇನ್ನಿಲ್ಲ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಾರವಾಗುತ್ತಿರುವಂತೆ ಮಾಜಿ ಪ್ರಧಾನಿ ಹಾಗೂ ಮಹಾನ್ ಕ್ರಿಕೆಟಿಗ ಇಮ್ರಾನ್ ಖಾನ್ ಸಾವನಪ್ಪಿದ್ದಾರೆ ಎಂದು ಪ್ರಸಾರವಾಗುತ್ತಿರುವ ಪ್ರಕಟಣೆಯ ಸತ್ಯಾಸತ್ಯತೆಯನ್ನು ಪರಿಶೀಲಿಸಲು, ಪಾಕಿಸ್ತಾನದ ಉಪ ಪ್ರಧಾನ ಮಂತ್ರಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ಅವರ ಅಧಿಕೃತ ಎಕ್ಸ್ ಖಾತೆ ಮತ್ತು ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ಅಧಿಕೃತ ಖಾತೆಯನ್ನು ಪರಿಶೀಲಿಸಲಾಗಿದ್ದು, ಅಂತಹ ಯಾವುದೇ ಪತ್ರಿಕಾ ಪ್ರಕಟಣೆ ಕಂಡುಬಂದಿಲ್ಲ.

ಈ ಬಗ್ಗೆ ಮತ್ತಷ್ಟು ಸರ್ಚ್ ಮಾಡಿದಾಗ, ಪಾಕಿಸ್ತಾನದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಫ್ಯಾಕ್ಟ್-ಚೆಕಿಂಗ್ ಘಟಕದ ಮೇ 10, 2025 ರ ಪೋಸ್ಟ್ ಲಭ್ಯವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ಪೋಸ್ಟ್‌ಅನ್ನು ನಿರಾಕರಿಸುತ್ತಾ, ಅದಕ್ಕೆ ವಿವರಣೆಯನ್ನು ನೀಡಿದೆ. “#FakeNews ಅನ್ನು ಪ್ರಸಾರ ಮಾಡುವುದು ಅನೈತಿಕ ಮತ್ತು ಕಾನೂನುಬಾಹಿರ ಮಾತ್ರವಲ್ಲ, ಅದು ರಾಷ್ಟ್ರಕ್ಕೆ ಅವಮಾನವೂ ಆಗಿದೆ. ಜವಾಬ್ದಾರಿ ವರ್ತಿಸುವುದು  ಪ್ರತಿಯೊಬ್ಬರ ಕರ್ತವ್ಯ. #FakeNews ಅನ್ನು ತಿರಸ್ಕರಿಸಿ.” ಎಂದು ಹೇಳಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಸಾಮಾಜಿಕ ಮಾಧ್ಯಮಗಳಲ್ಲಿ ಮಾಜಿ ಪ್ರಧಾನಿ ಹಾಗೂ ಮಹಾನ್ ಕ್ರಿಕೆಟಿಗ ಇಮ್ರಾನ್ ಖಾನ್ ಇನ್ನಿಲ್ಲ ಎಂಬ ಹೇಳಿಕೆಯೊಂದಿಗೆ  ಪ್ರಸಾರವಾಗುತ್ತಿರುವ ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ಪತ್ರಿಕಾ ಪ್ರಕಟಣೆ ನಕಲಿ ಎಂದು ದೃಢಪಟ್ಟಿದೆ. ಫ್ಯಾಕ್ಟ್ ಚೆಕ್ ಆಧಾರದ ಮೇಲೆ, ಚಲಾವಣೆಯಲ್ಲಿರುವ ಪೋಸ್ಟ್ ನಕಲಿ ಎಂಬುದು ಸ್ಪಷ್ಟವಾಗಿದೆ. ಮಾಜಿ ಪ್ರಧಾನಿ ಇಮ್ರಾನ್ ಖಾನ್ ನಿಧನರಾಗಿದ್ದಾರೆ ಎಂಬುದು ಸುಳ್ಳು.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | 2023ರಂದು ಚಾಮರಾಜನಗರದಲ್ಲಿ ಸಂಭವಿಸಿದ್ದ ಜೆಟ್‌ ಪತನದ ಚಿತ್ರವನ್ನು ಭಾರತ-ಪಾಕ್ ನಡುವಿನ ಸಂಘರ್ಷದ್ದು ಎಂದು ತಪ್ಪಾಗಿ ಹಂಚಿಕೆ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights