FACT CHECK | ಭಾರತದಲ್ಲಿ ‘ಪಾಕ್ ಜಿಂದಾಬಾದ್’ ಎಂದು ಹೇಳಿದ್ದಕ್ಕೆ ಪೊಲೀಸರು ಬಂಧಿಸಿ ಥಳಿಸಿಲಾಗಿದೆಯೇ?

ಮೇ 10 ರ ಶನಿವಾರ, ಭಾರತ ಮತ್ತು ಪಾಕಿಸ್ತಾನ ಅಮೆರಿಕ ಮಧ್ಯಸ್ಥಿಕೆಯಲ್ಲಿ ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದು. ಎರಡು ರಾಷ್ಟ್ರಗಳ ನಡುವಿನ ಬಿಗುವಿನ ವಾತಾವರಣದ ನಡುವೆ, ಕೆಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರು ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. ಹರಿದ ಬಟ್ಟೆಗಳನ್ನು ಧರಿಸಿದ ಗಾಯಗೊಂಡ ಕೆಲವು ವ್ಯಕ್ತಿಗಳನ್ನು ಪೊಲೀಸರು ಮೆರವಣಿಗೆ ಮಾಡುತ್ತಿರುವ ವೀಡಿಯೊವನ್ನು ಪೋಸ್ಟ್‌ ಮಾಡುತ್ತಾ ಅವರು “ಪಾಕಿಸ್ತಾನ ಜಿಂದಾಬಾದ್” ಘೋಷಣೆಗಳನ್ನು ಕೂಗಿದ್ದಕ್ಕಾಗಿ ಅವರನ್ನು ಥಳಿಸಲಾಗಿದೆ ಎಂದು ಆರೋಪಿಸಲಾಗಿದೆ.

Zubair Maulana

 

ಈ ವೀಡಿಯೊವನ್ನು ಹಂಚಿಕೊಂಡ ಎಕ್ಸ್ ಬಳಕೆದಾರರು, “ಪಾಕಿಸ್ತಾನವನ್ನು ಬೆಂಬಲಿಸುವ ದೇಶದ್ರೋಹಿಗಳು ಮತ್ತು ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆಗಳನ್ನು ಕೂಗುವವರು ಭೋಪಾಲ್ ಪೊಲೀಸರು ಸೇವೆ ಸಲ್ಲಿಸಿ ಮೆರವಣಿಗೆ ಮಾಡಿದ್ದಾರೆ” ಎಂದು ಬರೆದಿದ್ದಾರೆ. ಇದೇ ರೀತಿಯ ಪ್ರತಿಪಾದನೆಯೊಂದಿಗೆ ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಪೋಸ್ಟ್‌ಅನ್ನು ಹಂಚಿಕೊಂಡಿದ್ದು, ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದಕ್ಕೆ ಪೊಲೀಸರು ಬಂಧಿಸಿ ಮೆರವಣಿಗೆ ಮಾಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಲಾಗುತ್ತಿರುವ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸಲು, ಗೂಗಲ್ ಫೋಟೊವನ್ನು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಮೇ 12 ರಂದು ಯೂಟ್ಯೂಬ್‌ಗೆ ಅಪ್‌ಲೋಡ್ ಮಾಡಿದ ಸುದ್ದಿ ವರದಿ ಲಭ್ಯವಾಗಿದೆ.

ವರದಿಯ ಪ್ರಕಾರ, ಕುಖ್ಯಾತ ದರೋಡೆಕೋರ ಜುಬೈರ್ ಮೌಲಾನಾ ಮತ್ತು ಅವರ ಮೂವರು ಸಹಚರರನ್ನು ಭೋಪಾಲ್ ಪೊಲೀಸರು ಬಂಧಿಸಿದ್ದಾರೆ. ಅವರ ವಿರುದ್ಧ 55 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಭೋಪಾಲ್‌ನಲ್ಲಿ ಭೀತಿ ಮೂಡಿಸಲು ವಾಹನಗಳನ್ನು ಧ್ವಂಸಗೊಳಿಸಿ ಸಾರ್ವಜನಿಕವಾಗಿ ಬಂದೂಕುಗಳಿಂದ ಗುಂಡು ಹಾರಿಸಿದ ಆರೋಪ ಅವರ ಮೇಲಿದೆ. ಪೊಲೀಸರು ಅವರಿಂದ ಅಕ್ರಮ ಬಂದೂಕುಗಳು ಮತ್ತು ಇತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಘಟನೆಯ ಕುರಿತು ಹಲವಾರು ಸುದ್ದಿ ವರದಿಗಳು ಲಭ್ಯವಾಗಿದೆ. ಫ್ರೀ ಪ್ರೆಸ್ ಜರ್ನಲ್ ಪ್ರಕಾರ, ಮೇ 8 ರಂದು ಮಂಗಳವಾರ, ತಿಲಾ ಜಮಾಲ್ಪುರ, ಅಪರಾಧ ಶಾಖೆ ಮತ್ತು ಹನುಮಾನ್‌ಗಂಜ್‌ನ ಪೊಲೀಸ್ ತಂಡಗಳು ಜಂಟಿಯಾಗಿ ಕಾರ್ಯಾಚರಣೆಯನ್ನು ನಡೆಸಿದ್ದವು. ಜುಬೈರ್ ಮೌಲಾನಾ ಅಕ್ಟೋಬರ್ 2024 ರಿಂದ ತಲೆಮರೆಸಿಕೊಂಡಿದ್ದ. ಮೇ 6 ರಂದು ಭೋಪಾಲ್‌ನ ಮತ್ತು ತಿಲಾ ಜಮಾಲ್ಪುರ ಪ್ರದೇಶಗಳಲ್ಲಿ ಪ್ರತಿಸ್ಪರ್ಧಿಗಳನ್ನು ಹೆದರಿಸಲು ಸಾರ್ವಜನಿಕ ಸ್ಥಳಗಳಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ ಮತ್ತು ಗುಂಡು ಹಾರಿಸಿದ ಆರೋಪ ಅವರ ಮೇಲಿದೆ. ಯಾವುದೇ ಸುದ್ದಿ ವರದಿಯಲ್ಲಿ ಪಾಕಿಸ್ತಾನ ಅಥವಾ “ಪಾಕಿಸ್ತಾನ ಜಿಂದಾಬಾದ್” ಘೋಷಣೆಗಳ ಉಲ್ಲೇಖ ಕಂಡುಬಂದಿಲ್ಲ.

ಇದನ್ನು ದೃಢಪಡಿಸಲು, ಇಂಡಿಯಾ ಟುಡೇ ಫ್ಯಾಕ್ಟ್ ಚೆಕ್‌ ತಂಡ ಮಂಗಳವಾರ ಪೊಲೀಸ್ ಠಾಣೆಯ SHO ಅಜಯ್ ಕುಮಾರ್ ಸೋನಿ ಅವರನ್ನು ಸಂಪರ್ಕಿಸಿದ್ದೇವೆ. ಇಂಡಿಯಾ ಟುಡೇ ಫ್ಯಾಕ್ಟ್ ಚೆಕ್‌ ತಂಡದೊಂದಿಗೆ ಮಾತನಾಡಿದ ಸೋನಿ, “ಪಾಕಿಸ್ತಾನ ಜಿಂದಾಬಾದ್” ಎಂದು ಘೋಷಣೆ ಕೂಗಿದ್ದಕ್ಕಾಗಿ ಪೊಲೀಸರು ಈ ಜನರನ್ನು ಬಂಧಿಸಿದ್ದಾರೆ ಎಂಬ ವೈರಲ್ ಹೇಳಿಕೆಯನ್ನು ನಿರಾಕರಿಸಿದರು. ಅವರು ಮತ್ತು ಅವರ ಸಹಾಯಕರು ಸಾರ್ವಜನಿಕವಾಗಿ ಬಂದೂಕುಗಳನ್ನು ಹಾರಿಸಲು ಪ್ರಾರಂಭಿಸಿದ್ದರಿಂದ ಮೇ 8 ರಂದು ಬಂಧಿಸಲಾಗಿದೆ ಮಾಡಲಾಗಿದೆ ಎಂದು ಅವರು ದೃಢಪಡಿಸಿದರು.

ಒಟ್ಟಾರೆಯಾಗಿ ಹೇಳುವುದಾದರೆ, ಭಾರತದಲ್ಲಿ “ಪಾಕಿಸ್ತಾನ್ ಜಿಂದಾಬಾದ್” ಎಂದು ಹೇಳಿದ್ದಕ್ಕಾಗಿ ಕೆಲವರನ್ನು ಪೊಲೀಸರು ಥಳಿಸಿದ್ದಾರೆ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಬಾಂಗ್ಲಾದೇಶದ ಘಟನೆಯನ್ನು ದೆಹಲಿಯದ್ದು ಎಂದು ತಪ್ಪಾಗಿ ಹಂಚಿಕೆ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights