FACT CHECK | ವೈಷ್ಣೋದೇವಿ ದೇವಸ್ಥಾನಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳ ಮೇಲೆ ಮುಸ್ಲಿಮರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

ಶ್ರೀ ಮಾತಾ ವೈಷ್ಣೋದೇವಿ ದೇವಸ್ಥಾನಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳ ಬೆಂಗಾವಲು ಪಡೆಯ ಮೇಲೆ ಮುಸ್ಲಿಮರು ಕಲ್ಲು ತೂರಾಟ ನಡೆಸುತ್ತಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ವೈರಲ್‌ ಆಗುತ್ತಿದೆ. ಬೆಟ್ಟದ ಮೇಲಿಂದ ಇಳಿಜಾರಿನ ಕಡೆಗೆ ಕಲ್ಲುಗಳನ್ನು ಎಸೆಯುತ್ತಿರುವುದು ಕಂಡು ಬಂದಿದೆ. ಕಣಿವೆಯಲ್ಲಿ ನದಿ ಮತ್ತು ಗುಂಡಿನ ಚಕಮಕಿಯ ಶಬ್ದಗಳು ಮತ್ತು ಜನರು “ಮಾರೋ ಮಾರೋ…” ಎಂದು ಕೂಗುತ್ತಿರುವುದನ್ನು ವಿಡಿಯೋದಲ್ಲಿ ಕೇಳಬಹುದು.

ವೈರಲ್‌ ಪೋಸ್ಟ್‌ನಲ್ಲಿ ಉಲ್ಲೇಖಿಸಿದ ಬರಹಗಳಿಗೂ ವಿಡಿಯೋಗೂ ಸಾಕಷ್ಟು ಸಾಮ್ಯತೆ ಇದ್ದು ಹಲವರು ಈ ವಿಡಿಯೋವನ್ನು ಕೋಮು ಆಯಾಮದೊಂದಿಗೆ ಹಂಚಿಕೊಳ್ಳುತ್ತಿದ್ದಾರೆ.  ಮುಸ್ಲಿಂ ಸಮುದಾಯದ ವಿರುದ್ಧ ಆಕ್ರೋಶವನ್ನು ವ್ಯಕ್ತ ಪಡಿಸುತ್ತಿದ್ದಾರೆ. ಹೀಗೆ  ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವಿಡಿಯೋದ ಸತ್ಯಾಸತ್ಯತೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್‌ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ವೈರಲ್‌ ವಿಡಿಯೋದ  ಕೀ ಫ್ರೇಮ್‌ಗಳನ್ನು ತೆಗೆದುಕೊಂಡು ಗೂಗಲ್‌ ರಿವರ್ಸ್‌ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ವೈರಲ್‌ ವಿಡಿಯೋಗೆ ಸಂಬಂಧಿಸಿದಂತೆ ಮೇ 14, 2024 ರಂದು ಪ್ರಕಟವಾದ ಡೆಕ್ಕನ್ ಹೆರಾಲ್ಡ್‌ ವರದಿಯೊಂದು ಲಭ್ಯವಾಗಿದೆ. ಇದರಲ್ಲಿ ಪಿಒಕೆಯ ಮುಜಫರಾಬಾದ್‌ನಲ್ಲಿ ನಡೆದ ಪ್ರತಿಭಟನೆಯ ನಡುವೆ ಭದ್ರತಾ ಪಡೆಗಳ ಗುಂಡಿನ ದಾಳಿ ಮತ್ತು ಅಶ್ರುವಾಯು ಶೆಲ್ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಉಲ್ಲೇಖಿಸಿರುವುದು ಕಂಡು ಬಂದಿದೆ. ಈ ಮೂಲಕ ವೈರಲ್‌ ವಿಡಿಯೋ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಗಲಭೆಗೆ ಸಂಬಂಧಿಸಿದೆ ಎಂದು ತಿಳಿದು ಬಂದಿದೆ.

ಮೇ 14, 2024 ರಂದು ಪ್ರಕಟವಾದ ಹಿಂದೂಸ್ತಾನ್ ಟೈಮ್ಸ್, ದಿ ಟೈಮ್ಸ್ ಆಫ್ ಇಂಡಿಯಾ ಮತ್ತು ಬ್ಯುಸಿನೆಸ್ ಸ್ಟ್ಯಾಂಡರ್ಡ್‌ಗಳಲ್ಲಿ ಇದೇ ರೀತಿಯ ವರದಿಗಳು ಕಂಡುಬಂದಿವೆ. ಇವೆಲ್ಲವೂ ಪಿಒಕೆಯ ಮುಜಫರಾಬಾದ್‌ನಲ್ಲಿ ಸ್ಥಳೀಯ ಪ್ರತಿಭಟನೆಗಳ ಸಮಯದಲ್ಲಿ ಘರ್ಷಣೆ ಉಂಟಾಗಿದೆ ಎಂದು ವೈರಲ್‌ ವಿಡಿಯೋವಿಗೆ ಹೋಲಿಕೆಯಾಗುವ ಫೋಟೋಗಳನ್ನು ಉಲ್ಲೇಖಿಸಿ ವರದಿಗಳನ್ನು ಮಾಡಿರುವುದು ಕಂಡು ಬಂದಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಸಾಮಾಜಿಕ ಮಾಧ್ಯಮಗಳಲ್ಲಿ  ಹಂಚಿಕೊಳ್ಳುತ್ತಿರುವಂತೆ  ಶ್ರೀ ಮಾತಾ ವೈಷ್ಣೋದೇವಿ ಯಾತ್ರಿಕರ ಮೇಲೆ ಮುಸಲ್ಮಾನರು ಕಲ್ಲು ತೂರಾಟ ನಡೆಸಿದ್ದಾರೆ ಎಂಬುದು ಸುಳ್ಳು. ವೈರಲ್‌ ವಿಡಿಯೋ ಪಿಒಕೆಯ ಮುಜಫರಾಬಾದ್‌ನಲ್ಲಿ ನಡೆದ ಪ್ರತಿಭಟನೆಯ ನಡುವೆ ಭದ್ರತಾ ಪಡೆಗಳ ಗುಂಡಿನ ದಾಳಿ ಮತ್ತು ಅಶ್ರುವಾಯು ಶೆಲ್ ದಾಳಿಗೆ ಸಂಬಂಧಿಸಿದ್ದಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ನ್ಯೂಜಿಲೆಂಡ್ ಸರ್ಕಾರ ಎಲ್ಲಾ ಮಸೀದಿಗಳನ್ನು ಬಂದ್‌ ಮಾಡಿಸಿದೆಯೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights