FACT CHECK | ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಪುಂಡರಿಗೆ ಆಂಧ್ರ ಪೊಲೀಸರು ಲಾಠಿ ರುಚಿ ತೋರಿಸಿದ್ದು ನಿಜವೇ?

ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಪುಂಡರಿಗೆ ಆಂಧ್ರ ಪೊಲೀಸರು ಲಾಠಿಯಿಂದ ಪಾಠ ಮಾಡುತ್ತಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. ನಡು ರಸ್ತೆಯಲ್ಲಿ ಜನಸಮೂಹದ ನಡುವೆಯೇ ಮೂವರು ಯುವಕರಿಗೆ ಪೊಲೀಸರು ಲಾಠಿ ಪ್ರಹಾರ ಮಾಡುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.  ಪೊಲೀಸರು ಪುಂಡರ ಕಾಲುಗಳಿಗೆ ಲಾಠಿಯಿಂದ ಹೊಡೆಯುವುದನ್ನು ಕಾಣಬಹುದು. ಬೈಕ್ ಸ್ಟಂಟ್ ಮಾಡಿದ್ದಕ್ಕಾಗಿ ಯುವಕರಿಗೆ ಶಿಕ್ಷೆ ವಿಧಿಸಲಾಗಿದೆ ಎಂಬ ಹೇಳಿಕೆಯೊಂದಿಗೆ ಈ ವೀಡಿಯೊವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳಲಾಗಿದೆ.

ಫೇಸ್​ಬುಕ್ ಬಳಕೆದಾರರೊಬ್ಬರು ಈ ವೀಡಿಯೊವನ್ನು ಹಂಚಿಕೊಂಡು, ‘‘ಬೈಕ್ ವೀಲಿಂಗ್ ಮಾಡುತ್ತಿದ್ದವರಿಗೆ ಆಂಧ್ರ ಪೊಲೀಸ್ ಬಿಸಿ ಬಿಸಿ ಕಜ್ಜಾಯ ಕೊಡ್ತಿದ್ದಾರೆ. ಕರ್ನಾಟಕ ಪೊಲೀಸರು ಸಹ ಬೈಕ್ ವೀಲಿಂಗ್ ಮಾಡೋರಿಗೆ ಇದೆ ಶಿಕ್ಷೆ ಕೊಡ್ಲಿ’’ ಎಂದು ಬರೆದುಕೊಂಡಿದ್ದಾರೆ.

ಇದೇ ದೃಶ್ಯಗಳನ್ನು ಒಳಗೊಂಡ ಮತ್ತೊಂದು ವಿಡಿಯೋದಲ್ಲಿ  ಉತ್ತರ ಪ್ರದೇಶದ ಪೊಲೀಸರು ಪಾಕಿಸ್ತಾನ ಪರ ಘೋಷಣೆ ಕೂಗಿದವರ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಪೊಲೀಸರು ಮೂವರು ವ್ಯಕ್ತಿಗಳ ಪಾದಕ್ಕೆ ಲಾಠಿಯಿಂದ ಹೊಡೆಯುತ್ತಿರುವ ದೃಶ್ಯ ಕಾಣಿಸುತ್ತದೆ. ಈ ವಿಡಿಯೋವನ್ನು ಕೆಲವರು “ಉತ್ತರ ಪ್ರದೇಶದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದವರಿಗೆ ಪೊಲೀಸರು ಶಿಕ್ಷೆ ನೀಡಿದ್ದಾರೆ” ಎಂದು ಹೇಳಿರುವುದರಿಂದ ಹಲವರು ಯೋಗಿ ಸರ್ಕಾರವನ್ನು ಹೊಗಳಿ ಪೋಸ್ಟ್‌ ಮಾಡುತ್ತಿದ್ದಾರೆ.

ಇದೇ ವಿಡಿಯೋವನ್ನು ಬೇರೆ ಬೇರೆ ಹೇಳಿಕೆಗಳೊಂದಿಗೆ ಹಂಚಿಕೊಳ್ಳಲಾಗುತ್ತಿದ್ದು, ಈ ವಿಡಿಯೋದ ವಾಸ್ತವವೇನೆಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ಸಹಾಯದಿಂದ ಕೀವರ್ಡ್ ಸರ್ಚ್ ಮಾಡಿದಾಗ, ಮೇ 27 ರಂದು ಪ್ರಕಟವಾದ ಟೈಮ್ಸ್ ಆಫ್ಇಂಡಿಯಾ ವರದಿಯನ್ನು ಲಭ್ಯವಾಗಿದೆ. ವರದಿಲ್ಲಿ ‘ಆಂಧ್ರಪ್ರದೇಶದ ಪೊಲೀಸರು ಕಾನ್‌ಸ್ಟೆಬಲ್ ಮೇಲೆ ಹಲ್ಲೆ ಮಾಡಿದ್ದಕ್ಕಾಗಿ ರಸ್ತೆಯಲ್ಲಿ 3 ಜನರನ್ನು ಹಿಡಿದು ಕೋಲುಗಳಿಂದ ಹೊಡೆದರು’ ಎಂದು ಉಲ್ಲೇಖಿಸಲಾಗಿದೆ. ಈ ವರದಿಯು ವೈರಲ್ ವೀಡಿಯೊದ ಸ್ಕ್ರೀನ್‌ಶಾಟ್ ಅನ್ನು ಬಳಸಿದೆ.

Andhra Pradesh cops pin down 3 men on road, beat them with sticks for attacking on constable

ತೆನಾಲಿ ಟೂ ಟೌನ್ ಪೊಲೀಸ್ ಅಧಿಕಾರಿ ರಾಮುಲು ನಾಯಕ್ ಅವರನ್ನು ಉಲ್ಲೇಖಿಸಿ, TOI ಬರೆದಿರುವ ವರದಿಯ ಪ್ರಕಾರ, “ಈ ಘಟನೆ ಸುಮಾರು ಒಂದು ತಿಂಗಳ ಹಿಂದೆ ನಡೆದಿದ್ದು, ಮೂವರು ಗಾಂಜಾ ಸೇವನೆಯ ಮತ್ತಿನಲ್ಲಿ ಕಾನ್‌ಸ್ಟೆಬಲ್ ಕಣ್ಣ ಚಿರಂಜೀವಿ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಯ ನಂತರ ಕಾನ್‌ಸ್ಟೆಬಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಅವರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.”

ಆರೋಪಿಗಳನ್ನು ಚೆಬ್ರೋಲು ಜಾನ್ ವಿಕ್ಟರ್ (25), ಶೇಕ್ ಬಾಬುಲಾಲ್ (21) ಮತ್ತು ದೋಮಾ ರಾಕೇಶ್ (25) ಎಂದು ಗುರುತಿಸಲಾಗಿದೆ. ಮೂವರು ಆರೋಪಿಗಳನ್ನು ಬಂಧಿಸಿದ ಬಹಳ ಸಮಯದ ನಂತರ ಹಲ್ಲೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

ಎಬಿಎನ್ ಆಂಧ್ರ ಜ್ಯೋತಿ ಮೇ 26 ರಂದು ವರದಿ ಪ್ರಕಟಿಸಿದ್ದು, ‘ತೆನಾಲಿ ಪೊಲೀಸ್: ಪೊಲೀಸರು ರಸ್ತೆಯಲ್ಲಿ ರೌಡಿ ಶೀಟರ್‌ಗಳಿಗೆ ಶಿಕ್ಷೆ’ ಎಂಬ ಶೀರ್ಷಿಕೆಯಡಿಯಲ್ಲಿ ವರದಿ ಮಾಡಿದೆ. ವರದಿಯಲ್ಲಿ ಆರೋಪಿಗಳು ಏಪ್ರಿಲ್ 25 ರಂದು ಕಾನ್‌ಸ್ಟೆಬಲ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಅವರನ್ನು ಏಪ್ರಿಲ್ 26 ರಂದು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಡಿಎಸ್ಪಿ ಜನಾರ್ದನ ರಾವ್, ಮೂವರು ವ್ಯಕ್ತಿಗಳ ವಿರುದ್ಧ ರೌಡಿ ಶೀಟ್ ಇದೆ ಎಂದು ಹೇಳಿದ್ದಾರೆ. ಹಿಂದೆ ಹಲವು ಬಾರಿ ಎಚ್ಚರಿಕೆ ನೀಡಿದ್ದರೂ, ಅವರ ನಡವಳಿಕೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಮೂವರು ವ್ಯಕ್ತಿಗಳ ಮೇಲೆ ಹಲ್ಲೆ ನಡೆಸುತ್ತಿದ್ದ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಎಂದು ನ್ಯೂಸ್ 18 ವರದಿ ತಿಳಿಸಿದೆ.

ವಾಸ್ತವವಾಗಿ, ವೈರಲ್ ವಿಡಿಯೋದ ಕಾನ್‌ಸ್ಟೆಬಲ್ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಮೂವರು ವ್ಯಕ್ತಿಗಳ ಮೇಲೆ ಆಂಧ್ರ ಪೊಲೀಸರು ಹಲ್ಲೆ ನಡೆಸುತ್ತಿರುವ ವಿಡಿಯೋವನ್ನು ಸುಳ್ಳು ಮತ್ತು ದಾರಿ ತಪ್ಪಿಸುವ ಹೇಳಿಕೆಗಳೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ವಿಧಾನ ಪರಿಷತ್‌ಗೆ ಎಲ್.ಕೆ. ಅತೀಕ್ ನಿರ್ದೇಶನ ಎಂದು ಸುಳ್ಳು ಪೋಸ್ಟ್‌ ಹಂಚಿಕೆ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights