FACT CHECK | ದೆಹಲಿಯ ಅಪಾರ್ಟ್ಮೆಂಟ್ನಲ್ಲಿ ಸಂಭವಿಸಿದ ಬೆಂಕಿ ಅವಘಡದ ದೃಶ್ಯವನ್ನು ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತದ ದೃಶ್ಯ ಎಂದು ತಪ್ಪಾಗಿ ಹಂಚಿಕೆ
ಜೂನ್ 12 ರಂದು ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ, ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ಮೇಲೆ ಬಿದ್ದಿತ್ತು. ಈ ಅಪಘಾತದಲ್ಲಿ ಸುಮಾರು 242ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದು ಅಪಘಾತಕ್ಕೆ ಸಂಬಂಧಿಸಿದಂತೆ ಹಲವು ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಇದರಲ್ಲಿ, ಕಟ್ಟಡವೊಂದರಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿರುವುದನ್ನು ಕಾಣಬಹುದು. ಇದು ಅಹಮದಾಬಾದ್ ವಿಮಾನ ಅಪಘಾತದ ದೃಶ್ಯ ಎಂದು ಹಲವರು ಹಂಚಿಕೊಳ್ಳುತ್ತಿದ್ದಾರೆ.

ಅಪಘಾತದ ನಂತರ, ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವೀಡಿಯೊದಲ್ಲಿ ಕಟ್ಟಡದ ಮೇಲಿನ ಮಹಡಿಯಿಂದ ಜನರು ಬೆಂಕಿಯಿಂದ ತಪ್ಪಿಸಿಕೊಂಡು ಕೆಳ ಹಾರುತ್ತಿರುವುದನ್ನು ತೋರಿಸಲಾಗಿದೆ. ಇದುಗುಜರಾತಿನ ಅಹ್ಮದಾಬಾದ್ನಲ್ಲಿ ವಿಮಾನ ಪತನದ ಭಯಾನಕ ದೃಶ್ಯ ಎಂದು ಕೆಲ ಬಳಕೆದಾರರು ಈ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ. ಹಾಗಿದ್ದರೆ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್ಚೆಕ್ :
ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ವಿಡಿಯೋದ ಕೀಫ್ರೇಮ್ಗಳನ್ನು ತೆಗೆದು ಗೂಗಲ್ ರಿವರ್ಸ್ ಇಮೇಜಸ್ನಲ್ಲಿ ಸರ್ಚ್ ಮಾಡಿದಾಗ, ಜೂನ್ 10 ರಂದು ದಿ ಇಂಡಿಯನ್ ಎಕ್ಸ್ಪ್ರೆಸ್ ಪ್ರಕಟಿಸಿದ ವೈರಲ್ ವೀಡಿಯೊದಲ್ಲಿರುವ ದೃಶ್ಯ ಬೇರೆ ಆ್ಯಂಗಲ್ನಲ್ಲಿರುವುದು ಲಭ್ಯವಾಗಿದೆ. ವರದಿಯ ಪ್ರಕಾರ, ಎಂಆರ್ವಿ ಶಾಲೆಯ ಬಳಿಯ ದ್ವಾರಕಾ ಸೆಕ್ಟರ್ 13 ರಲ್ಲಿರುವ ಶಾಬಾದ್ ಅಪಾರ್ಟ್ಮೆಂಟ್ನಲ್ಲಿ ಸಂಭವಿಸಿದ ಬೆಂಕಿ ಅವಘಡದ ದೃಶ್ಯವನ್ನು ವಿಡಿಯೋದಲ್ಲಿ ತೋದಿಸಲಾಗಿದೆ.
ಜೂನ್ 10 ರಂದು ಟೈಮ್ಸ್ ನೌ, ನ್ಯೂಸ್9 ಲೈವ್ ಮತ್ತು ಎನ್ಡಿಟಿವಿ ಸೇರಿದಂತೆ ಹಲವಾರು ಇತರ ಮಾಧ್ಯಮಗಳು ಪ್ರಕಟಿಸಿದ ಅದೇ ದೃಶ್ಯಗಳನ್ನು ನಾವು ಕಂಡುಕೊಂಡಿದ್ದೇವೆ. ದೆಹಲಿಯ ದ್ವಾರಕಾ ಸೆಕ್ಟರ್ 13 ರಲ್ಲಿರುವ ಶಾಬಾದ್ ಅಪಾರ್ಟ್ಮೆಂಟ್ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿ ಮಾಡಿದೆ.
ಜೂನ್ 11 ರಂದು ದಿ ಇಂಡಿಯನ್ ಎಕ್ಸ್ಪ್ರೆಸ್ ಪ್ರಕಟಿಸಿದ ವರದಿಯ ಪ್ರಕಾರ, ಜೂನ್ 10 ರಂದು ಸಂಭವಿಸಿದ ಭಾರಿ ಬೆಂಕಿಯಿಂದ ತಪ್ಪಿಸಿಕೊಳ್ಳಲು 10 ನೇ ಮಹಡಿಯ ಡ್ಯೂಪ್ಲೆಕ್ಸ್ ಫ್ಲಾಟ್ನ ಬಾಲ್ಕನಿಯಿಂದ ಹಾರಿ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಮೂವರು ಸದಸ್ಯರು ಸಾವನ್ನಪ್ಪಿದ್ದಾರೆ. ಈ ಘಟನೆ ದ್ವಾರಕಾದ ಸೆಕ್ಟರ್ 13 ರಲ್ಲಿರುವ ವಸತಿ ಸಮಾಜ, ಶಾಬಾದ್ ಅಪಾರ್ಟ್ಮೆಂಟ್ನಲ್ಲಿ ಸಂಭವಿಸಿದೆ.
सोशल मीडिया पर एक इमारत में लगी आग के वीडियो को अहमदाबाद में हुए विमान हादसे से जोड़कर साझा किया जा रहा है।#PIBFactCheck
▶️ यह वीडियो वास्तव में दिल्ली के द्वारका स्थित एक इमारत में हुई आगजनी का है।
▶️ कृपया अफवाहों पर ध्यान न दें और केवल आधिकारिक स्रोतों से प्राप्त जानकारी… pic.twitter.com/xJjdtRXERP
— PIB Fact Check (@PIBFactCheck) June 13, 2025
ಈ ವೀಡಿಯೊ ವಾಸ್ತವವಾಗಿ ದೆಹಲಿಯ ದ್ವಾರಕಾದಲ್ಲಿರುವ ಕಟ್ಟಡವೊಂದರಲ್ಲಿ ಸಂಭವಿಸಿದ ಬೆಂಕಿಯ ದೃಶ್ಯವಾಗಿದೆ. ದಯವಿಟ್ಟು ವದಂತಿಗಳಿಗೆ ಕಿವಿಗೊಡಬೇಡಿ ಮತ್ತು ಅಧಿಕೃತ ಮೂಲಗಳಿಂದ ಬಂದ ಮಾಹಿತಿಯನ್ನು ಮಾತ್ರ ನಂಬಿರಿ ಎಂದು PIB ಫ್ಯಾಕ್ಟ್ಚೆಕ್ ಎಕ್ಸ್ನಲ್ಲಿ ತಿಳಿಸಿದೆ.
ಒಟ್ಟಾರೆಯಾಗಿ ಹೇಳುವುದಾದರೆ, ಜೂನ್ 10 ರಂದು ದೆಹಲಿಯ ದ್ವಾರಕಾ ಸೆಕ್ಟರ್ ನ ಶಾಬಾದ್ ಅಪಾರ್ಟ್ಮೆಂಟ್ನಲ್ಲಿ ಸಂಭವಿಸಿದ ಬೆಂಕಿ ಅವಘಡದ ದೃಶ್ಯವನ್ನು, ಅಹಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ಅಪಘಾತದ ದೃಶ್ಯಗಳು ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | ಹಿರಿಯ ನಾಗರಿಕರಿಗೆ ಜೂನ್ 15ರಿಂದ ಉಚಿತ ಪ್ರಯಾಣ ಎಂದು ಕೇಂದ್ರ ಸರ್ಕಾರ ಘೋಷಿಸಿಲ್ಲ

